ಗಾಲ್ವಾನ್ ಘರ್ಷಣೆಗೆ ಮೂರು ವರ್ಷ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

Date:

ಭಾರತ-ಚೀನಾ ಗಡಿಭಾಗದ ಗಾಲ್ವಾನ್‌ ಕಣಿವೆಯಲ್ಲಿ ಉಭಯ ರಾಷ್ಟ್ರಗಳ ಸೈನಿಕರ ನಡುವೆ ಸಶಸ್ತ್ರ ದಾಳಿ ನಡೆದು, 20 ಮಂದಿ ಭಾರತೀಯ ಯೋದರು ಹತ್ಯೆಯಾದ ಘಟನೆ ನಡೆದು ಇಂದಿಗೆ (ಜೂನ್‌ 15) ಮೂರು ವರ್ಷಗಳಾಗಿವೆ. ಇದು, ಕಳೆದ ಐದು ದಶಕಗಳಲ್ಲಿ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ನಡುವೆ ನಡೆದ ಷರ್ಘಣೆಯಾಗಿತ್ತು. ಆ ಘಟನೆಯನ್ನು ನೆನಪಿಸಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೂರು ವರ್ಷಗಳ ಹಿಂದೆ ಗಾಲ್ವಾನ್ ಕಣಿವೆಯಲ್ಲಿ 20 ವೀರರು ಮಾಡಿದ ತ್ಯಾಗಕ್ಕೆ ಭಾರತವು ಗೌರವಗಳನ್ನು ಸಲ್ಲಿಸುತ್ತದೆ. ಇದೇ ಸಮಯದಲ್ಲಿ, ಗಡಿ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಮೋದಿ ವಿಫಲವಾಗಿದೆ. ಪರಿಣಾಮ, ನಾವು 65ರಲ್ಲಿ 26 ಪೆಟ್ರೋಲಿಂಗ್ ಪಾಯಿಂಟ್‌ಗಳನ್ನು (ಪಿಪಿ) ಕಳೆದುಕೊಂಡಿದ್ದೇವೆ” ಎಂದು ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಾವು ಗಡಿ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಹಲವಾರು ಬಾರಿ ಪ್ರಸ್ತಾಪಿಸಲು ಪ್ರಯತ್ನಿಸಿದ್ದೇವೆ. ಆದರೆ, ಮೋದಿ ಸರ್ಕಾರವು ದೇಶದ ದಿಕ್ಕು ತಪ್ಪಿಸುತ್ತಿದೆ. ಭಾರತೀಯರನ್ನು ಕತ್ತಲೆಯಲ್ಲಿಡಲು ಯತ್ನಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
https://twitter.com/kharge/status/1669203497986797568?s=20

“ಗಾಲ್ವಾನ್‌ನಲ್ಲಿ ಚೀನಾದ ಸೈನಿಕರು ಭಾರತದ ಗಡಿ ಪ್ರವೇಶಿಲ್ಲವೆಂದು ಹೇಳುವ ಮೂಲಕ ಚೀನಾಕ್ಕೆ ಮೋದಿ ಜಿ ‘ಕ್ಲೀನ್ ಚಿಟ್’ ನೀಡಿದ್ದಾರೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉತ್ತರಾಖಂಡದಲ್ಲಿ ‘ಕೋಮುವಾದಿ’ ಮಹಾಪಂಚಾಯತ್‌; ಅನುಮತಿ ನೀಡದಂತೆ ನಿವೃತ್ತ ಅಧಿಕಾರಿಗಳ ಒತ್ತಾಯ

“ಜವಾಬ್ದಾರಿಯುತ ಪ್ರತಿಪಕ್ಷವಾಗಿ, ಚೀನಾದ ವಿಸ್ತರಣಾ ನೀತಿಯ ವಿರುದ್ಧ ದೇಶವನ್ನು ಒಗ್ಗೂಡಿಸಿ ಮೋದಿ ಸರ್ಕಾರಕ್ಕೆ ಸತ್ಯದ ಕನ್ನಡಿ ತೋರಿಸುವುದು ನಮ್ಮ ಕೆಲಸವಾಗಿದೆ. ನಾವು ಅದನ್ನು ಮಾಡುತ್ತೇವೆ” ಎಂದು ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಅಂದಹಾಗೆ, 2020ರ ಜೂನ್‌ 15ರಂದು ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮಾರಣಾಂತಿಕ ಘರ್ಷಣೆ ನಡೆದಿತ್ತು. ಇದೀಗ, ಕೇಂದ್ರ ಸರ್ಕಾರವು ಸುಮಾರು 3,500 ಕಿಮೀ ಉದ್ದದ ಎಲ್‌ಎಸಿ ಉದ್ದಕ್ಕೂ ಮಿಲಿಟರಿ ಮೂಲಸೌಕರ್ಯ, ಕಣ್ಗಾವಲು ಮತ್ತು ಯುದ್ಧ ಸಲಕರಣೆಗಳನ್ನು ಹೆಚ್ಚಿಸಿದೆ. ಈ ಬಗ್ಗೆ ರಕ್ಷಣಾ ಸಂಸ್ಥೆಯ ಮೂಲಗಳು ಬುಧವಾರ ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...