ದೇಶದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ದೇಶದ ಹಲವು ಭಾಗಗಳಲ್ಲಿ ಈ ವಾರ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಉತ್ತರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬಿರುಗಾಳಿ ಬೀಸಿದ್ದು ಮುಂದಿನ ನಾಲ್ಕು ದಿನಗಳವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ವಾಯುವ್ಯ ಭಾರತ, ಪೂರ್ವ ಮತ್ತು ಮಧ್ಯ ಭಾರತದಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ವಾರದಲ್ಲಿ ಮಿಂಚು, ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಬೆಳೆಗಳು ಮತ್ತು ತೋಟಗಳನ್ನು ರಕ್ಷಿಸಲು ಐಎಂಡಿ ಕೃಷಿ ಹವಾಮಾನ ಸಲಹೆಯನ್ನು ನೀಡಿದೆ. ವಿಶೇಷವಾಗಿ ನಗರ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿನ ದುರ್ಬಲ ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಐಎಂಡಿ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 24 ಗಂಟೆಗಳಲ್ಲಿ ದೆಹಲಿಯ ಸಫ್ದರ್ಜಂಗ್ ನಿಲ್ದಾಣದಲ್ಲಿ 77 ಮಿಮೀ ಮಳೆ ದಾಖಲಾಗಿವೆ. 1901ರ ಮೇ ತಿಂಗಳ ಬಳಿಕ ಇದು ಎರಡನೇ ಅತಿ ಹೆಚ್ಚು ಮಳೆಯಾಗಿದೆ. 2021ರ ಮೇ 20ರಂದು ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ 119.3 ಮಿಮೀ ಮಳೆ ದಾಖಲಾಗಿದೆ.

ಐಎಂಡಿ ವರದಿಗಳ ಪ್ರಕಾರ ದೇಶದ ಹಲವೆಡೆ ನಿರಂತರ ಮಳೆ, ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳಲಿದೆ. ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಸಮೀಪದಲ್ಲಿ ಚಂಡಮಾರುತ ಹಾದುಹೋಗುವ ಕಾರಣ ಉತ್ತರ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ ಧೂಳಿನ ಬಿರುಗಾಳಿ ಮತ್ತು ಪ್ರತ್ಯೇಕ ಆಲಿಕಲ್ಲು ಮಳೆಯಾಗಬಹುದು.

ಒಡಿಶಾ, ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಪ್ರದೇಶದಲ್ಲಿ ನಿಂತಿರುವ ನೀರನ್ನು ತೆಗೆಯುವಂತೆ ಐಎಂಡಿ ಸಲಹೆ ನೀಡಿದೆ. ಸಿಕ್ಕಿಂ, ಒಡಿಶಾ, ಹಿಮಾಚಲ ಪ್ರದೇಶ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಬೆಳೆಗಳನ್ನು ಕಾಪಾಡಲು ಆಲಿಕಲ್ಲು ಬಲೆಗಳು ಮತ್ತು ಕ್ಯಾಪ್‌ಗಳನ್ನು ಬಳಸುವಂತೆ ಐಎಂಡಿ ಸಲಹೆ ನೀಡಿದೆ. ಆಲಿಕಲ್ಲು ಮಳೆ ಸಂದರ್ಭದಲ್ಲಿ ಪ್ರಾಣಿಗಳನ್ನು ಕೊಟ್ಟಿಗೆಯೊಳಗೆ ಇರಿಸುವಂತೆ, ಆಹಾರ ಮತ್ತು ಮೇವನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲು ಸಲಹೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...