‘ಟಿಪ್ಪು ಸುಲ್ತಾನ್ ಶ್ರೀರಾಮನ ಹೆಸರಿನ ಉಂಗುರ ಧರಿಸುತ್ತಿದ್ದರು’: ಬಿಜೆಪಿಯ ಇಬ್ಬಗೆಯ ನೀತಿಯ ವಿರುದ್ಧ ಕಾಂಗ್ರೆಸ್ ಕಿಡಿ​

Date:

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯ ಉಪಮೇಯರ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಅವರ ಭಾವಚಿತ್ರ ಅಳವಡಿಕೆ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಆಡಳಿತರೂಢ ಬಿಜೆಪಿಯ ಕೋಮು ಧ್ರುವೀಕರಣದ ಅಜೆಂಡಾವನ್ನು ಕಾಂಗ್ರೆಸ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತು ಬಿಜೆಪಿ ತೋರುತ್ತಿರುವ ಈ ‘ಢೋಂಗಿತನ’ದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಸಾವಂತ್ ಸಾಕ್ಷ್ಯಾಧಾರಗಳ ಸಮೇತ ವಾಗ್ದಾಳಿ ನಡೆಸಿದ್ದು, ಕೇಸರಿ ಪಡೆಯ ದ್ವಂದ್ವ ನೀತಿಯನ್ನು ಬಯಲಿಗೆಳೆದಿದ್ದಾರೆ.

​ಟಿಪ್ಪು ಸುಲ್ತಾನ್ ಭಾವಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಸಚಿನ್ ಸಾವಂತ್, “ಬಿಜೆಪಿಯ ಈ ಇಬ್ಬಗೆಯ ನೀತಿಯನ್ನು ಏನೆಂದು ಕರೆಯಬೇಕು? ಸಾಕ್ಷಾತ್ ಟಿಪ್ಪು ಸುಲ್ತಾನ್ ಅವರೇ ಶ್ರೀರಾಮನ ಹೆಸರು ಇರುವ ಉಂಗುರವನ್ನು ಧರಿಸುತ್ತಿದ್ದರು,” ಎಂದು ಹೇಳುವ ಮೂಲಕ ಬಿಜೆಪಿಯ ಕೋಮು ರಾಜಕಾರಣಕ್ಕೆ ತಿರುಗೇಟು ನೀಡಿದ್ದಾರೆ. ಈ ಹಿಂದಿನ ಘಟನೆಗಳನ್ನು ಉಲ್ಲೇಖಿಸುವ ಮೂಲಕ ಅವರು ಬಿಜೆಪಿಯ ಬಣ್ಣವನ್ನು ಬಯಲು ಮಾಡಿದ್ದಾರೆ.

​ಬಿಜೆಪಿಯ ಹಳೆಯ ದಾಖಲೆಗಳನ್ನು ಕೆದಕಿರುವ ಸಾವಂತ್, 2012ರಲ್ಲಿ ಅಕೋಲಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು ಸ್ಥಾಯಿ ಸಮಿತಿ ಸಭಾಂಗಣಕ್ಕೆ ‘ಶಹೀದ್-ಎ-ವತನ್ ಶೇರ್-ಎ-ಮೈಸೂರ್ ಟಿಪ್ಪು ಸುಲ್ತಾನ್’ ಎಂದು ಹೆಸರಿಡುವ ನಿರ್ಣಯವನ್ನು ಸ್ವತಃ ಅಂಗೀಕರಿಸಿತ್ತು ಎಂಬುದನ್ನು ನೆನಪಿಸಿದ್ದಾರೆ. ಅಷ್ಟೇ ಅಲ್ಲದೆ, 2013ರಲ್ಲಿ ಮುಂಬೈನ ಎಂ-ಈಸ್ಟ್ ವಾರ್ಡ್‌ನ ರಸ್ತೆಯೊಂದಕ್ಕೆ ‘ಶಹೀದ್ ಟಿಪ್ಪು ಸುಲ್ತಾನ್ ಮಾರ್ಗ’ ಎಂದು ಹೆಸರಿಡುವ ಪ್ರಸ್ತಾಪಕ್ಕೂ ಅಂದು ಬಿಜೆಪಿ ಕಾರ್ಪೊರೇಟರ್‌ಗಳೇ ಬೆಂಬಲ ಸೂಚಿಸಿದ್ದರು ಎಂದು ಅವರು ಬೊಟ್ಟು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

​ಮತ್ತೊಂದೆಡೆ, ಕರ್ನಾಟಕದ ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಟಿಪ್ಪು ಸಮಾಧಿಗೆ ಭೇಟಿ ನೀಡಿ, ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಟಿಪ್ಪು ಬಗ್ಗೆ ಪ್ರಶಂಸೆಯ ಮಾತುಗಳನ್ನು ಬರೆದಿದ್ದನ್ನು ಸಾವಂತ್ ಉಲ್ಲೇಖಿಸಿದ್ದಾರೆ. ಹಾಗೆಯೇ, 2017ರಲ್ಲಿ ಅಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕರ್ನಾಟಕ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟಿಪ್ಪು ಸುಲ್ತಾನ್ ಅವರನ್ನು ಮುಕ್ತಕಂಠದಿಂದ ಹೊಗಳಿದ್ದನ್ನು ಪ್ರಸ್ತಾಪಿಸುವ ಮೂಲಕ, ಸಮಯಕ್ಕೆ ತಕ್ಕಂತೆ ಬಿಜೆಪಿ ಹೇಗೆ ನಿಲುವು ಬದಲಿಸುತ್ತದೆ ಎಂಬುದನ್ನು ಕಾಂಗ್ರೆಸ್ ಎತ್ತಿ ತೋರಿಸಿದೆ.

​ಮಾಲೆಗಾಂವ್‌ನಲ್ಲಿ ಶಾನ್-ಎ-ಹಿಂದ್ ನಿಹಾಲ್ ಅಹ್ಮದ್ ಅವರ ಕಚೇರಿಯಲ್ಲಿ ಟಿಪ್ಪು ಭಾವಚಿತ್ರ ಹಾಕಿದ್ದನ್ನು ವಿರೋಧಿಸಿ ಶಿವಸೇನೆ ಹಾಗೂ ಕೆಲವು ಹಿಂದುತ್ವಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಾಲ್ ಅವರು, ಟಿಪ್ಪು ಹೋರಾಟವನ್ನು ಶಿವಾಜಿ ಮಹಾರಾಜರ ‘ಸ್ವರಾಜ್ಯ’ಕ್ಕೆ ಹೋಲಿಸಿದ್ದರು. ಇದಕ್ಕೆ ಸಿಎಂ ಫಡ್ನವಿಸ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಈಗ ಸ್ವತಃ ಬಿಜೆಪಿಯ ನಾಯಕರೇ ಟಿಪ್ಪುವನ್ನು ಕೊಂಡಾಡಿದ ಇತಿಹಾಸವನ್ನು ಕಾಂಗ್ರೆಸ್ ಜನರ ಮುಂದಿಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...