ತಿರುಪತಿ ಲಡ್ಡು ವಿವಾದ | ಸುಪ್ರೀಂ ಮೇಲ್ವಿಚಾರಣೆಯ ತನಿಖಾ ಸಮಿತಿ ಕೋರಿ ಸುಬ್ರಮಣಿಯನ್ ಸ್ವಾಮಿ ಅರ್ಜಿ

Date:

ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಮಾಂಸ ಮತ್ತು ಇತರ ಕೊಳೆತ ವಸ್ತುಗಳೊಂದಿಗೆ ಕಲಬೆರಕೆ ಮಾಡಲಾಗಿದೆ ಎಂದು ಸಿಎಂ ಸಿ.ಬಿ.ನಾಯ್ಡು ಮಾಡಿರುವ ಆಧಾರ ರಹಿತ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ಕೋರಿ ಇಂದು ನಾನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಹೇಳಿದ್ದಾರೆ.

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ಭಾನುವಾರ ಘೋಷಿಸಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸ್ವತಂತ್ರ ಸಮಿತಿ ರಚನೆಯಾಗಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತಿರುಪತಿ ಲಡ್ಡು ಪ್ರಸಾದ ಬಳಸದಿರಲು ಕರ್ನಾಟಕದ ಅರ್ಚಕರ ಸಂಘ ನಿರ್ಧಾರ

ಇನ್ನು ತಿರುಮಲ ದೇವಸ್ಥಾನವನ್ನು ಪವಿತ್ರಗೊಳಿಸಲೆಂದು ನಾಲ್ಕು ಗಂಟೆಗಳ ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣೆ (ವಿದ್ಯಾಚರಣೆಯ ನೈರ್ಮಲ್ಯ) ಈಗ ನಡೆಯುತ್ತಿದೆ ಎಂದು ದೇವಾಲಯದ ಮೂಲಗಳು ಸೋಮವಾರ ತಿಳಿಸಿವೆ.

ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣೆ ಕಾರ್ಯವು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗಿದ್ದು 10 ಗಂಟೆಯವರೆಗೆ ಇರಲಿದೆ ಎಂದು ಟಿಟಿಡಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ವೆಂಕಟೇಶ್ವರನ ಕೃಪೆಗಾಗಿ 11 ದಿನಗಳ ತಪಸ್ಸು ಕೈಗೊಳ್ಳುವುದಾಗಿ ಶನಿವಾರ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...