ಎನ್ಐಎ ದಾಳಿ ಘಟನೆ: ಚುನಾವಣಾ ಆಯೋಗವನ್ನು ಭೇಟಿ ನೀಡಲಿರುವ ಟಿಎಂಸಿ ನಿಯೋಗ

Date:

ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಹತ್ತು ಸದಸ್ಯರ ಟಿಎಂಸಿ ನಿಯೋಗ ಚುನಾವಣಾ ಆಯೋಗದ ಸದಸ್ಯರನ್ನು ಇಂದು ಭೇಟಿ ಮಾಡಲಿದೆ.

ಕೆಲವು ದಿನಗಳ ಹಿಂದೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗ ಸ್ಥಳೀಯರು ಎನ್‌ಐಎ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯು ಟಿಎಂಸಿ ಹಾಗೂ ಬಿಜೆಪಿ ನಡುವಿನ ವಾಗ್ವಾದಕ್ಕೆ ಕಾರಣವಾಗಿತ್ತು.

ಇದು ಆಕಸ್ಮಿಕ ಘಟನೆ ಎಂದು ಟಿಎಂಸಿ ಹೇಳಿದರೆ, ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿತ್ತು ಎಂದು ಎನ್‌ಐಎ ಹಾಗೂ ಬಿಜೆಪಿ ಆರೋಪ ಮಾಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿಎಂಸಿ ನಿಯೋಗ ಬಿಜೆಪಿ ಹಾಗೂ ಎನ್‌ಐಎ ವಿರುದ್ಧ ದೂರು ನೀಡುವ ಸಾಧ್ಯತೆಯಿದೆ. ಟಿಎಂಸಿ ಚುನಾವಣಾ ಆಯೋಗದ ಬಾಗಿಲು ಬಡಿಯುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

“ಕಳೆದ ವಾರ ಎರಡು ಬಾರಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾವು ಭೇಟಿಯಾಗಿದ್ದೆವು. ಚುನಾವಣೆ ಎದುರಿಸಲು ಎಲ್ಲರಿಗೂ ಸಮಾನ ಅವಕಾಶ ಹಾಗೂ ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ನಾವು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಪ್ರಸ್ತಾಪಿಸಿದ್ದೇವೆ. ಈ ಸಮಯದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಬೇಕೆಂದು ಮಾದರಿ ನೀತಿ ಸಂಹಿತೆ ಜಾರಿಯಾದಗಿನಿಂದ ನಾವು ಹೇಳುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದು ಸರಿಯಲ್ಲ” ಎಂದು ನಿಯೋಗದ ಸದಸ್ಯರಲ್ಲಿ ಒಬ್ಬರಾದ ಟಿಎಂಸಿ ಸಂಸದೆ ದೋಲಾ ಸೆನ್‌ ತಿಳಿಸಿದ್ದಾರೆ.

“ಈಗಾಗಲೇ ಇಬ್ಬರು ವಿಪಕ್ಷ ಸಂಸದರು ಸೆರೆಮನೆಯಲ್ಲಿದ್ದಾರೆ. ಪಿತೂರಿಗಳು ಇನ್ನೂ ನಡೆಯುತ್ತಿವೆ.ಎನ್‌ಐಎ ನಮ್ಮ ಇಬ್ಬರು ಕಾರ್ಯಕರ್ತರನ್ನು ಬಂಧಿಸಿದೆ. ಇಂದು ನಮ್ಮ ಪಕ್ಷದ 10 ಮಂದಿ ನಿಯೋಗ ದೆಹಲಿಗೆ ತೆರಳುತ್ತಿದ್ದೇವೆ” ಎಂದು ಡೋಲಾ ಸಿಂಗ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...