ಪಶ್ಚಿಮ ಬಂಗಾಳ | ಹಾಡಹಗಲೇ ಟಿಎಂಸಿ ನಾಯಕನಿಗೆ ಗುಂಡೇಟು; ತಿಂಗಳಲ್ಲಿ ಮೂರನೇ ಘಟನೆ

Date:

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನೋಡಖಲಿಯಲ್ಲಿ ಹಾಡಹಗಲೇ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನಿಗೆ ಗುಂಡು ಹಾರಿಸಲಾಗಿದೆ. ಸದ್ಯ ಟಿಎಂಸಿ ನಾಯಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಗಂಭೀರವಾಗಿ ಗಾಯಗೊಂಡ ಟಿಎಂಸಿ ನಾಯಕನನ್ನು ಕೃಷ್ಣಪಾದ ಮೊಂಡಲ್ ಎಂದು ಗುರುತಿಸಲಾಗಿದೆ. ನೋಡಖಲಿಯಲ್ಲಿ ಬೈಕ್‌ನಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಸಮೀಪದಿಂದಲೇ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಟಿಎಂಸಿ ಕೌನ್ಸಿಲರ್, ಮಮತಾ ಬ್ಯಾನರ್ಜಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರು ಅಪರಿಚಿತ ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಮೂವರು ಕೂಡಾ ಇಲ್ಲಿಯವರಲ್ಲ, ಬೇರೆ ಪ್ರದೇಶದವರು. ಮೊಂಡಲ್‌ಗೆ ಸಮೀಪದಲ್ಲೇ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ಕೋಲ್ಕತ್ತಾದ ಆಸ್ಪತ್ರೆನಲ್ಲಿ ಮೊಂಡಲ್ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕೇರಳದಂತೆಯೇ ಪಶ್ಚಿಮ ಬಂಗಾಳದಲ್ಲಿಯೂ ಹಲವು ರಾಜಕೀಯ ಹತ್ಯೆ, ಹಲ್ಲೆಗಳು ನಡೆದಿದೆ. ಆದರೆ ಮೊಂಡಲ್ ಮೇಲೆ ದಾಳಿಯು ರಾಜಕೀಯ ಕಾರಣದಿಂದಾಗಿ ನಡೆದಿದೆಯೇ ಅಥವಾ ವೈಯಕ್ತಿಕ ಕಾರಣದಿಂದಾಗಿ ನಡೆದಿದೆಯೇ ಎಂಬ ಬಗ್ಗೆ ಖಚಿತವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ದಾಳಿಗೆ ಆಡಳಿತಾರೂಢ ಟಿಎಂಸಿಯಲ್ಲಿರುವ ಒಳಜಗಳವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ನೋಡಖಲಿ ಡೈಮಂಡ್ ಹಾರ್ಬರ್ ಲೋಕಸಭೆ ಕ್ಷೇತ್ರದಲ್ಲಿರುವ ಪ್ರದೇಶವಾಗಿದೆ. ಈ ಕ್ಷೇತ್ರವನ್ನು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುತ್ತಾರೆ.

ಇದನ್ನು ಓದಿದ್ದೀರಾ? ಬಿಜೆಪಿ ನೇತೃತ್ವದ ಸರ್ಕಾರ ಹೆಚ್ಚು ಕಾಲ ಉಳಿಯದು: ಟಿಎಂಸಿ ರ್‍ಯಾಲಿಯಲ್ಲಿ ಅಖಿಲೇಶ್, ಮಮತಾ

ಇನ್ನು ಈ ತಿಂಗಳಲ್ಲಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ಮೇಲೆ ಹಾಡಹಗಲೇ ಹಲ್ಲೆ ನಡೆದಿದೆ. ಈ ಹಿಂದೆ ಮದಾಹ್ ಜಿಲ್ಲೆಯಲ್ಲಿಯೇ ಎರಡು ಘಟನೆಗಳು ನಡೆದಿದೆ. ಈ ತಿಂಗಳ ಮೊದಲ ವಾರದಲ್ಲಿ ಟಿಎಂಸಿ ಕೌನ್ಸಿಲರ್ ದುಲಾಲ್ ಸಾಕಾರ್ ಯಾನೆ ಬಬ್ಲಾ ಎಂಬವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದಾದ ಬಳಿಕ ದುಲಾಲ್ ತನ್ನ ಆಪ್ತ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೊಂಡಿದ್ದರು. ಈ ಹತ್ಯೆಗೆ ಒಳಜಗಳವೇ ಕಾರಣವಾಗಿತ್ತು ಮತ್ತು ಆರೋಪಿಯ ಬಂಧನ ಕೂಡಾ ಮಾಡಲಾಗಿದೆ.

ಜನವರಿ 14ರಂದು ಮಾಲ್ಡಾ ಜಿಲ್ಲೆಯಲ್ಲಿ ಮತ್ತೋರ್ವ ಸ್ಥಳೀಯ ಟಿಎಂಸಿ ನಾಯಕ ಹಸನ್ ಶೇಖ್ ಎಂಬವರನ್ನು ಹಾಡಹಗಲೇ ಗುಂಡಿಕ್ಕಿ ಕೊಲ್ಲಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...