ಟಿಎಂಸಿಯ ಸಂಸದನ ಖಾತೆಯಿಂದ 56 ಲಕ್ಷ ರೂ. ದೋಚಿದ ಸೈಬರ್ ವಂಚಕರು

Date:

ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಕೂಡ ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಅವರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಖಾತೆಯಿಂದ ಸೈಬರ್ ವಂಚಕರು 56 ಲಕ್ಷ ರೂ. ದೋಚಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಎಸ್‌ಬಿಐ ಬ್ಯಾಂಕ್ ಅಧಿಕಾರಿಗಳು ಕೋಲ್ಕತಾದ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

2002-2006ರ ನಡುವೆ ಬ್ಯಾನರ್ಜಿ ಅಸನ್ಸೋಲ್ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದರು. ಈ ಸಂದರ್ಭ ಅವರು ಎಸ್‌ಬಿಐನ ವಿಧಾನಸಭೆ ಉಪಶಾಖೆಯಲ್ಲಿ ಖಾತೆಗಳನ್ನು ತೆರೆದಿದ್ದರು. ಬ್ಯಾನರ್ಜಿ ಅವರ ಶಾಸಕ ಭತ್ಯೆಯನ್ನು ಈ ಖಾತೆಯಲ್ಲಿ ಜಮಾ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಜನ ಗಣ ಮನ’ಕ್ಕೆ ಬಿಜೆಪಿ ತಿರಸ್ಕಾರ; ರವೀಂದ್ರನಾಥ ಟ್ಯಾಗೋರ್‌ಗೆ ಅಪಚಾರ!

ಈಗ ಸ್ರೀರಾಂಪೋರೆಯ ಸಂಸದರಾಗಿರುವ ಬ್ಯಾನರ್ಜಿ ಅವರ ಈ ಹಳೆಯ ಖಾತೆಯಲ್ಲಿ ಬಹಳ ದಿನಗಳಿಂದ ಯಾವುದೇ ವಹಿವಾಟು ನಡೆದಿಲ್ಲ. ಇದನ್ನು ಬ್ಯಾಂಕ್ ನಿಷ್ಕ್ರಿಯ ಖಾತೆ ಎಂದು ಪರಿಗಣಿಸಿದೆ. ವಂಚಕರು ವಂಚನೆ ನಡೆಸಲು ಈ ಖಾತೆಯನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಸೈಬರ್ ವಂಚಕರು ಸಂಸದ ಬ್ಯಾನರ್ಜಿ ಅವರ ಪ್ಯಾನ್‌ ಮತ್ತು ಆಧಾರ್ ಕಾರ್ಡ್‌ಗಳ ನಕಲಿ ಪ್ರತಿಗಳನ್ನು ಸೃಷ್ಟಿಸಿ ಬ್ಯಾಂಕ್ ಖಾತೆಯ ಕೈವೈಸಿಯನ್ನು ನವೀಕರಿಸಿದ್ದಾರೆ. ಇದರ ಜೊತೆಗೆ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದಾರೆ. ಇದಾದ ಬಳಿಕ ವಂಚಕರು ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ ಹಲವಾರು ಅಧಿಕೃತ ವಹಿವಾಟುಗಳನ್ನು ನಡೆಸಿ ಇಲ್ಲಿಯವರೆಗೆ ಅವರ ಖಾತೆಯಿಂದ ಒಟ್ಟು 56 ಲಕ್ಷ ರೂ. ದೋಚಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...