ಪಶ್ಚಿಮ ಬಂಗಾಳ | ಬುಡಕಟ್ಟು ಬಾಲಕನ ಥಳಿಸಿ ಹತ್ಯೆ: 7 ಟಿಎಂಸಿ ನಾಯಕರ ಬಂಧನ

Date:

ಪಶ್ಚಿಮ ಬಂಗಾಳ ಪಶ್ಚಿಮ ಮೇದಿನಿಪುರ್‌ ಜಿಲ್ಲೆಯ ಸಬಾಂಗ್‌ ಪ್ರದೇಶದ ಹಳ್ಳಿಯೊಂದರಲ್ಲಿ ಕಳ್ಳತನದ ಆರೋಪದ ಮೇಲೆ ಮಂಗಳವಾರ ರಾತ್ರಿ ಲೋಧಾ ಶಬರ್ ಸಮುದಾಯದ 13 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಹತ್ಯೆಗೈದ ಆರೋಪದಲ್ಲಿ ಟಿಎಂಸಿಯ ಸ್ಥಳೀಯ ಮುಖಂಡ ಮತ್ತು ಆರು ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.27ರಂದು ಬುಧವಾರ ಸಬಾಂಗ್‌ನ ಬೋರೋಚರಾ ಗ್ರಾಮದ ನಿವಾಸಿ, ಲೋಧಾ ಶಬರ್ ಸಮುದಾಯದ ಬಾಲಕ ಸುಭಾ ನಾಯಕ್ ಎಂಬಾತನನ್ನು ಆಹಾರ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಮರಕ್ಕೆ ಕಟ್ಟಿಹಾಕಿ ಹಾಕಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು.

ಅಂಗಡಿಯಿಂದ ಆಹಾರದ ಪೊಟ್ಟಣಗಳು ಕಾಣೆಯಾಗಿದ್ದ ಆರೋಪದ ಮೇಲೆ ಸೆ.26 ರಂದು ಮಂಗಳವಾರ ರಾತ್ರಿ ಸ್ಥಳೀಯ ತೃಣಮೂಲ ನಾಯಕರು ತಾವೆ ಸ್ಥಳೀಯ ನ್ಯಾಯಲಯ ಸ್ಥಾಪಿಸಿಕೊಂಡು ಬಾಲಕ ಸುಭಾ ನಾಯಕ್‌ನನ್ನು ಕಳ್ಳತನದ ಅಪರಾಧಿ ಎಂದು ಘೋಷಿಸಿ ಆತನ ಮೇಲೆ ಥಳಿಸಬೇಕೆಂದು ಆದೇಶ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಸುಭಾ ನಾಯಕ್ ಮೃತಪಟ್ಟಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಪಂಚಾಯತ್ ಸದಸ್ಯ ಮೊನೊರಂಜನ್ ಮಾಲ್ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆದರೆ ಪ್ರಾಥಮಿಕ ತನಿಖೆಯ ಪ್ರಕಾರ ನಾವು ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪಶ್ಚಿಮ ಬಂಗಾಳ ಮೇದಿನಿಪುರ ವಿಭಾಗದ ಎಸ್ಪಿ ಧೃತಿಮಾನ್ ಸರ್ಕಾರ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಭಾರೀ ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ

ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ 75 ದುರ್ಬಲ ಸಮುದಾಯಗಳಲ್ಲಿ ಪಟ್ಟಿ ಮಾಡಲಾದ ಲೋಧಾ ಶಬರ್ ಸಮುದಾಯಕ್ಕೆ ಸೇರಿದ ವಲಸೆ ಕಾರ್ಮಿಕರ ಮಗ, ಸುಭಾ ನಾಯಕ್ ಈಗಾಗಲೇ ತಂದೆತಾಯಿಯನ್ನು ಕಳೆದುಕೊಂಡು ಬೊರೊಚಹರಾ ಗ್ರಾಮದಲ್ಲಿ ಸಂಬಂಧಿಕರ ನೆರವಿನಿಂದ ಒಂಟಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

“ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಮನೋರಂಜನ್ ಮಾಲ್ ಬಾಲಕನನ್ನು ಫುಟ್ಬಾಲ್‌ನಂತೆ ಒದೆಯುತ್ತಿದ್ದರು. ಆತ ಹಸಿವಿನಿಂದ ಬಳಲುತ್ತಿದ್ದ. ಪದೇ ಪದೇ ನೀರಿಗಾಗಿ ಬೇಡುತ್ತಿದ್ದ. ಆದರೆ, ಅವರು ಮಾತ್ರ ‘ನೀವು ಕಳ್ಳರು, ನಿಮಗೆ ತಕ್ಕ ಪಾಠ ಕಲಿಸಬೇಕು’ ಎಂದು ಹೇಳುತ್ತಾ ಆತನನ್ನು ಹೊಡೆಯುತ್ತಲೇ ಇದ್ದರು” ಎಂದು ಹೆಸರೇಳಲು ಬಯಸದ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿರುವ ಸ್ಥಳೀಯ ರಾಜಕೀಯ ನಾಯಕರು, ಸುಭಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದರು ಎಂದು ಕೂಡಾ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...