ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ: ಟಿಎಂಸಿ ಆರೋಪ

Date:

ಸಂದೇಶಖಾಲಿ ವಿವಾದಕ್ಕೊಂದು ಹೊಸ ತಿರುವು ಸಿಕ್ಕಿದೆ. ಟಿಎಂಸಿ ನಾಯಕರು ಸಂದೇಶಖಾಲಿ ಮಹಿಳೆಯರ ಮೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಇತ್ತೀಚೆಗೆ ಭಾರೀ ಕೋಲಾಹಲ ಸೃಷ್ಟಿಸಿದೆ.

ಟಿಎಂಸಿಯ ಶಾಹ್‌ಜಹಾನ್‌ ಶೇಖ್‌ ಬಂಧನಕ್ಕೆ ಕಾರಣವಾದ ಬೆಳವಣಿಗೆಗಳ ನಡುವೆ, ಬಿಜೆಪಿಯ ಸಂದೇಶಖಾಲಿ ಮಂಡಲ ಅಧ್ಯಕ್ಷ ಎಂದು ತಿಳಿಯಲಾದ ಓರ್ವ ವ್ಯಕ್ತಿಯ ವಿಡಿಯೋ ಸಾಕಷ್ಟು ಸದ್ದು ಮಾಡಿದೆ. ಈ ವಿಡಿಯೋದಲ್ಲಿ ಆ ವ್ಯಕ್ತಿ ಸಂದೇಶಖಾಲಿ ಘಟನೆಯ ಹಿಂದೆ ಬಿಜೆಪಿಯ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಇದ್ದಾರೆಂದು ಹೇಳುವುದು ಕೇಳಿಸುತ್ತದೆ.

ಶಾಹ್‌ಜಹಾನ್‌ ಶೇಖ್‌ ಸೇರಿದಂತೆ ಮೂವರು ಟಿಎಂಸಿ ನಾಯಕರ ವಿರುದ್ಧ ಅತ್ಯಾಚಾರ ಆರೋಪ ಹೊರಿಸುವಂತೆ ಮೂವರು ಸ್ಥಳೀಯ ಮಹಿಳೆಯರನ್ನು ಪ್ರಚೋದಿಸಲು ಸುವೇಂದು ಅಧಿಕಾರಿ ತಮ್ಮನ್ನು ಹಾಗೂ ಪ್ರದೇಶದ ಇತರ ಬಿಜೆಪಿ ನಾಯಕರಲ್ಲಿ ಹೇಳಿದ್ದರು ಎಂದು ವಿಡಿಯೋದಲ್ಲಿ ಆತ ಹೇಳುವುದು ಕೇಳಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂದಿಗ್ರಾಮ ಶಾಸಕರಾಗಿರುವ ಅಧಿಕಾರಿ ಅವರೇ ಸಂದೇಶಖಾಲಿಯ ಮನೆಯೊಂದರಲ್ಲಿ ಬಂದೂಕುಗಳನ್ನು ಇರಿಸಿದ್ದರು, ಇವುಗಳನ್ನು ನಂತರ ಕೇಂದ್ರ ಸಂಸ್ಥೆಗಳು ವಶಪಡಿಸಿಕೊಂಡಿದ್ದವು ಎಂದು ಆ ವ್ಯಕ್ತಿ ಹೇಳುವುದು ಕೇಳಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಟಿಎಂಸಿ, “ಬಂಗಾಳ ಮತ್ತು ಸಂದೇಶಖಾಲಿಗೆ ಕೆಟ್ಟ ಹೆಸರು ತರಲು ಸಾಮೂಹಿಕ ಅತ್ಯಾಚಾರಗಳು ನಡೆದಿವೆ ಎಂಬ ಅಭಿಪ್ರಾಯ ಮೂಡಿಸಲು ಅಧಿಕಾರಿ ಈ ಸುವೇಂದು ಅಧಿಕಾರಿ ಈ ಸುಳ್ಳು ಸೃಷ್ಟಿಸಿದ್ದಾರೆ,” ಎಂದು ಆರೋಪಿಸಿದೆ.

“ಸಾಮೂಹಿಕ ಅತ್ಯಾಚಾರದಿಂದ ಹಿಡಿದು ಶಸ್ತ್ರಾಸ್ತ್ರ ವಶಪಡಿಸಿಕೊಳ್ಳುವಿಕೆ” ತನಕ ಪ್ರತಿಯೊಂದು ಆರೋಪ ಸುವೇಂದು ಅವರ ಸಂಚಿನಿಂದ ಆಗಿದೆ,” ಎಂದು ಟಿಎಂಸಿ ಹೇಳಿದೆ.

ಈ ಕುರಿತಂತೆ ಸುವೇಂದು ಅಧಿಕಾರಿ ಇನ್ನೂ ಪ್ರತಿಕ್ರಿಯಿಸಿಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, “ಬಿಜೆಪಿಯೊಳಗೆ ಆಳವಾಗಿ ಬೇರೂರಿರುವ ಕೊಳಕನ್ನು ಬಹಿರಂಗಪಡಿಸಿದೆ ನಮ್ಮ ರಾಜ್ಯವನ್ನು ಎಲ್ಲ ಹಂತಗಳಲ್ಲಿ ಅವಮಾನಿಸುವುದು ಅವರ ಸಂಚಾಗಿದೆ,” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...