ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ದೂರು ದಾಖಲು

Date:

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚುನಾವಣಾ ನೀತಿ ಸಂಹಿತೆ ಆರೋಪದಡಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರ ಸಮಯ ಉಲ್ಲಂಘನೆಗಾಗಿ ಅಣ್ಣಾಮಲೈ ಹಾಗೂ ಇತರ ಕೆಲವು ಪಕ್ಷದ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಲಾಗಿದೆ.

ಕೊಯಂಬತ್ತೂರಿನ ಅವರಮ್‌ಪಾಳಯಂ ಪ್ರದೇಶದಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿದ ಸಮಯಕ್ಕಿಂತಲೂ ಹೆಚ್ಚಿನ ಸಮಯ ಪ್ರಚಾರ ಮಾಡಿದ್ದಕ್ಕಾಗಿ ಡಿಎಂಕೆ ಹಾಗೂ ಇದರ ಮೈತ್ರಿ ಪಕ್ಷದ ಕಾರ್ಯಕರ್ತರು ಏ.11ರ ರಾತ್ರಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಜಗಳ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಡಿಎಂಕೆ ಕಾರ್ಯಕರ್ತ ಪೀಲಮೇಡು ಅವರು ಐಪಿಸಿ ಸೆಕ್ಷನ್‌ಗಳ ವಿವಿಧ ಕಾಯ್ದೆಯಡಿ ದೂರು ದಾಖಲಿಸಿದ್ದರು. ಡಿಎಂಕೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಯ ವಿರುದ್ಧ ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಕೊಯಂಬತ್ತೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏ.19ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಇಂಡಿಯಾ ಮೈತ್ರಿಕೂಟದ ಪಕ್ಷಗಳಾದ ಡಿಎಂಕೆ 21, ಕಾಂಗ್ರೆಸ್ 9 ಸೇರಿದಂತೆ ಇತರ ಮಿತ್ರ ಪಕ್ಷಗಳು ಎಲ್ಲ 39 ಸ್ಥಾನಗಳಲ್ಲಿ ಸ್ಪರ್ಧಿಸಿವೆ.

ಅದೇ ರೀತಿ ಎನ್‌ಡಿಎ ಮಿತ್ರ ಪಕ್ಷಗಳಾದ ಬಿಜೆಪಿ 19, ಪಿಎಂಕೆ 10 ಕ್ಷೇತ್ರ ಸೇರಿ 39 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ 32 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...