ಉತ್ತರ ಪ್ರದೇಶ | ಐಫೋನ್‌ ಕದ್ದು ರೀಲ್ಸ್ ಮಾಡಲು ಅಪ್ರಾಪ್ತರಿಂದ ಬೆಂಗಳೂರು ಯುವಕನ ಕೊಲೆ

Date:

ಐಫೋನ್‌ ಕದ್ದು ಉನ್ನತ ಗುಣಮಟ್ಟದ ರೀಲ್ಸ್ ಮಾಡಲು ಬೆಂಗಳೂರು ಮೂಲದ ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ಶಾದಾಬ್ (19) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆಗಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ.

ಉತ್ತರ ಪ್ರದೇಶದ ಬಹ್ರೈಚ್‌ನ ಉನ್ನತ ನಾಲ್ವರು ಅಪ್ರಾಪ್ತರಿಗೆ ರೀಲ್ಸ್ ಮಾಡುವುದಕ್ಕೆ ಐಫೋನ್ ಬೇಕಾಗಿತ್ತು. ಇದೇ ವೇಳೆ ಮೃತ ಯುವಕ ತಮ್ಮ ಮಾವನ ಮದುವೆಗಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದ. ಯುವಕನ ಬಳಿ ಐಫೋನ್ ಇರುವುದನ್ನು ನೋಡಿದ ನಾಲ್ವರು ಅಪ್ರಾಪ್ತರು ಕೊಲೆಗೆ ಸಂಚು ರೂಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರುದಿನ ಶಾಬಾದ್‌ನನ್ನು ವಿಡಿಯೋ ಚಿತ್ರೀಕರಿಸಬೇಕೆಂದು ಹೇಳಿ, ಗ್ರಾಮದ ಹೊರಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವನ ಕತ್ತು ಸೀಳಿ, ಬಳಿಕ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಜೂ.20ರಂದು ಕೊಳವೆ ಬಾವಿಯ ಬಳಿ ಆತನ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಬ್ಬರು ಅಪ್ರಾಪ್ತರು ಹಾಗೂ ಕೊಲೆಗೆ ಸಹಕರಿಸಿದ ಆರೋಪಿಗಳ ಸಂಬಂಧಿಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಇಬ್ಬರು ಅಪ್ರಾಪ್ತರು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಮೃತ ಯುವಕ ಊರಿಗೆ ಬಂದಾಗ ಆತನ ಬಳಿಯಿರುವ ಐಫೋನ್ ನೋಡಿ, ನಾಲ್ಕು ದಿನಗಳ ಹಿಂದೆಯೇ ಕೊಲೆಗೆ ಸಂಚು ರೂಪಿಸಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಆರೋಪಿಗಳಿಂದ ಐಫೋನ್, ಕೊಲೆಗೆ ಬಳಸಿದ ಚಾಕು ಹಾಗೂ ಇಟ್ಟಿಗೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದು, ನಾಲ್ವರ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಅಪ್ರಾಪ್ತರನ್ನು ಬಾಲಾಪರಾಧಿ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಓರ್ವ ಸಂಬಂಧಿಯನ್ನು ಜೈಲಿಗೆ ಕಳುಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...