ಡೊನಾಲ್ಡ್ ಟ್ರಂಪ್‌ಗೆ ಬಾಯಿ ಮುಚ್ಚಲು ನೊಬೆಲ್ ಪ್ರಶಸ್ತಿ ನೀಡಬೇಕು: ಸಿನಿಮಾ ನಿರ್ಮಾಪಕ ಹನ್ಸಲ್ ಮೆಹ್ತಾ

Date:

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಚಲನಚಿತ್ರ ನಿರ್ಮಾಪಕ ಹನ್ಸಲ್ ಮೆಹ್ತಾ ಅವರು ಹೇಳಿದ್ದಾರೆ. ಆದರೆ ಟ್ರಂಪ್ ಮಾಡಿದ ಕೆಲಸಕ್ಕಾಗಿ ಅಲ್ಲ, ಬದಲಿಗೆ ಟ್ರಂಪ್ ಒಮ್ಮೆ ಬಾಯಿ ಮುಚ್ಚಲು ಪ್ರಶಸ್ತಿ ನೀಡಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಹನ್ಸಲ್ ಮೆಹ್ತಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ಟ್ರಂಪ್, “ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಹೇಳಿದ್ದರು. ಹಾಗೆಯೇ ಪಾಕಿಸ್ತಾನ ನೊಬಲ್ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರನ್ನು ನಾಮನಿರ್ದೇಶನ ಮಾಡಿದೆ.

ಇದನ್ನು ಓದಿದ್ದೀರಾ? ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ: ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮೆಹ್ತಾ, “ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಬೇಕಾದರೆ, ಅವರಿಗೆ ಅದನ್ನು ಖಂಡಿತ ನೀಡಿ. ಅವರ ಣಿವರಿಯದ ಮೋಟಾರ್ ಬಾಯಿಯನ್ನು ಮುಚ್ಚಿಸಲು ತೆರಬೇಕಾದ ಸಣ್ಣ ಬೆಲೆ ಅದು” ಎಂದು ಬರೆದುಕೊಂಡಿದ್ದಾರೆ.

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ ಮಾಡಿದೆ.

ಈ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು ದಾಳಿ ಪ್ರತಿದಾಳಿ ನಡೆಯುತ್ತಲೇ ಇತ್ತು. ಕೊನೆಗೆ ಎರಡೂ ದೇಶಗಳು ಮಾತುಕತೆ ನಡೆಸಿ ಕದನ ವಿರಾಮ ಒಪ್ಪಂದವನ್ನು ಮಾಡಿಕೊಂಡಿದೆ. ಆದರೆ ಈ ಒಪ್ಪಂದವನ್ನು ತಾನೇ ಮಾಡಿಸಿದ್ದು ಎಂದು ಟ್ರಂಪ್ ನಿರಂತರವಾಗಿ ಹೇಳಿಕೊಳ್ಳುತ್ತಿದ್ದಾರೆ. ಇಂತಹ ಕಾರ್ಯಗಳಿಗೆ ನೊಬೆಲ್ ಪ್ರಶಸ್ತಿ ನೀಡಲ್ಲ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...