ವಿಮಾನ ಪ್ರಯಾಣ ಅಗ್ಗ ಎಂದು ಹೇಳಿದ್ದರೂ, 30 ಸಾವಿರ ಕೊಟ್ಟು ಕಾರಿನಲ್ಲಿ ತೆರಳಿದ್ದ ಹಂತಕಿ

Date:

ಹೆತ್ತ ನಾಲ್ಕು ವರ್ಷದ ಮಗುವನ್ನು ಕೊಂದು ಬ್ಯಾಗಿನಲ್ಲಿ ಕೊಂಡೊಯ್ಯುತ್ತಿದ್ದ ಬೆಂಗಳೂರು ಮೂಲದ ಸ್ಟಾರ್ಟ್‌ಪ್ ಕಂಪನಿಯ ಸಿಇಒ ಸುಚನಾ ಸೇಠ್‌ನ ಮತ್ತೊಂದು ಬಂಡವಾಳ ಬಯಲಾಗಿದೆ.

ಗೋವಾದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ದರ ಕಡಿಮೆಯಿದ್ದರೂ ವಿಮಾನ ದರಕ್ಕಿಂತ 10 ಪಟ್ಟು ಹೆಚ್ಚು ಹಣ ಕೊಟ್ಟು ಕಾರಿನಲ್ಲಿ ತೆರಳಿದ್ದಳು ಎಂದು ಆರೋಪಿ ಉಳಿದುಕೊಂಡಿದ್ದ ಗೋವಾದ ಸರ್ವೀಸ್ ಅಪಾರ್ಟ್ಮೆಂಟ್‌ನ ಮ್ಯಾನೇಜರ್ ತಿಳಿಸಿದ್ದಾರೆ.

ಸರ್ವೀಸ್ ಅಪಾರ್ಟ್ಮೆಂಟ್‌ ಮ್ಯಾನೇಜರ್ ದೂರು ನೀಡಿರುವ ಪ್ರಕಾರ ಆರೋಪಿ ಸುಚನಾ ಸೇಠ್ ಗೋವಾದಿಂದ ಬೆಂಗಳೂರಿಗೆ ತೆರಳಲು 30 ಸಾವಿರ ರೂ. ಹಣ ನೀಡಿ ಕಾರನ್ನು ಬುಕ್ ಮಾಡಿಕೊಂಡಿದ್ದಳು. ಕೇವಲ 2,600 ರೂ. ನಿಂದ 3,000 ರೂಗಳ ಅಗ್ಗದ ದರದಲ್ಲಿ ವಿಮಾನದಲ್ಲಿ ತೆರಳಬಹುದು ಎಂದು ಹೇಳಿದ್ದರೂ 30 ಸಾವಿರ ಹಣ ನೀಡಿ ಕಾರನ್ನೇ ಬುಕ್ ಮಾಡಿಕೊಂಡಿದ್ದ ಸುಚನಾ ಸೇಠ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇಠ್ ಜನವರಿ 6 ರಿಂದ 10ರವರೆಗೆ ಮುಂಗಡ ಹಣ ನೀಡಿ ಸರ್ವೀಸ್ ಅಪಾರ್ಟ್ಮೆಂಟ್ ಬುಕ್‌ ಮಾಡಿಕೊಂಡಿದ್ದಳು. ಆದರೆ ಜನವರಿ 8ರಂದು ಕೊಠಡಿ ಖಾಲಿ ಮಾಡಿದ್ದಳು ಎಂದು ಮ್ಯಾನೇಜರ್ ದೂರಿನಲ್ಲಿ ತಿಳಿಸಿದ್ದಾರೆ.

ಕೊಲೆ ಆರೋಪಿ ಮೈಂಡ್‌ಫುಲ್‌ ಎಐ ಲ್ಯಾಬ್‌ನ ಸಿಇಒ ಸುಚನಾ ಸೇಠ್‌ಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ಸದ್ಯ ಗೋವಾ ಪೊಲೀಸರ ವಶದಲ್ಲಿದ್ದಾರೆ. ಲಿಂಕ್ಡಿನ್‌ ಪ್ರೊಫೈಲ್‌ ಪ್ರಕಾರ ಈಕೆ ಕೃತಕ ಬುದ್ಧಿಮತ್ತೆ ನೀತಿಶಾಸ್ತ್ರ ತಜ್ಞೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಪೊಲೀಸರ ತನಿಖೆಯ ಒಂದು ಆಯಾಮದ ಪ್ರಕಾರ ಆರೋಪಿಯು ಅಪಾರ್ಟ್‌ಮೆಂಟ್‌ ಸಿಬ್ಬಂದಿಯಿಂದ ತರಿಸಿಕೊಂಡ ಕೆಮ್ಮಿನ ಸಿರಪ್‌ಅನ್ನು ಮಗುವಿಗೆ ವಿಪರೀತ ಕುಡಿಸಿ ನಂತರ ದಿಂಬಿನಿಂದ ಹಿಸುಕಿ ಹತ್ಯೆ ಮಾಡಿದ್ದಾಳೆ.

ಕೊಠಡಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ರಕ್ತದ ಕಲೆಯನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಬುಕ್‌ ಮಾಡಿಕೊಂಡಿದ್ದ ಕಾರಿನ ಚಾಲಕನ ಸಹಾಯದಿಂದ ಹಂತಕಿಯನ್ನು ಸೆರೆ ಹಿಡಿಯಲಾಗಿದೆ.

ಸುಚನಾ ಸೇಠ್ ಗೋವಾದಿಂದ ಪರಾರಿಯಾಗುತ್ತಿದ್ದಾಗ, ಅಪಘಾತದಿಂದಾಗಿ ಆಕೆ ಪ್ರಯಾಣಿಸುತ್ತಿದ್ದ ಕಾರು ನಾಲ್ಕು ಗಂಟೆಗಳ ಕಾಲ ಚೋರ್ಲಾ ಘಾಟ್‌ನಲ್ಲಿ ಸಿಲುಕಿಕೊಂಡಿತು. ಈ ಘಟನೆ ಪೊಲೀಸರಿಗೆ ಆಕೆಯನ್ನು ಬಂಧಿಸಲು ವರದಾನವಾಗಿದೆ.

ಆಕೆ ಬೆಂಗಳೂರು ತಲುಪಿದ್ದರೆ, ಮಗುವಿನ ಶವ ಸಿಗುವುದು ಕಷ್ಟವಾಗುತ್ತಿತ್ತು. ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಗಳ ನಡುವೆ ಈ ಚೋರ್ಲಾ ಘಾಟ್ ಇದೆ. ಇದು ಗೋವಾ ರಾಜಧಾನಿ ಪಣಜಿಯ ಈಶಾನ್ಯದಲ್ಲಿದೆ ಮತ್ತು ಕರ್ನಾಟಕದ ಬೆಳಗಾವಿಯಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿದೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...