ಆರ್ಮಿ ಸೈನಿಕನನ್ನು ಕಂಬಕ್ಕೆ ಕಟ್ಟಿ ಹಲ್ಲೆಗೈದ ಟೋಲ್ ಬೂತ್ ಸಿಬ್ಬಂದಿ

Date:

ಭಾರತೀಯ ಸೇನೆಯ ಸೈನಿಕನನ್ನು ಕಂಬಕ್ಕೆ ಕಟ್ಟಿ, ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಟೋಲ್ ಬೂತ್‌ನಲ್ಲಿ ನಡೆದಿದೆ. ಐವರು ಟೋಲ್‌ ಸಿಬ್ಬಂದಿಗಳು ಸೈನಿಕನ ಮೇಲೆ ಹಲ್ಲೆ ನಡೆಸಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೊಳಗಾದ ಸೈನಿಕನನ್ನು ಕಪಿಲ್ ಕವದ್ ಎಂದು ಹೆಸರಿಸಲಾಗಿದೆ. ಅವರು ಭಾರತೀಯ ಸೇನೆಯ ರಜಪೂತ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ರಜೆಗಾಗಿ ತಮ್ಮೂರಿಗೆ ಬಂದಿದ್ದ ಕಪಿಲ್, ಮರಳಿ ತಮ್ಮ ಸೇವಾ ಪ್ರದೇಶ ಶ್ರೀನಗರಕ್ಕೆ ಹೋಗಲು ದೆಹಲಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ವಾಹನ ದಟ್ಟಣೆಯಿಂದಾಗಿ ಭುನಿ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದರು. ವಿಮಾನಕ್ಕೆ ತಡವಾಗುತ್ತಿದೆ ಎಂದು ಆತಂಕಗೊಂಡ ಕಪಿಲ್, ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ತೆರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಕಪಿಲ್ ಮತ್ತು ಟೋಲ್ ಸಿಬ್ಬಂದಿಗಳ ನಡುವೆ ವಾಗ್ವಾದ ನಡೆದಿದ್ದು, ಐದು ಮಂದಿ ಟೋಲ್ ಬೂತ್ ಸಿಬ್ಬಂದಿಗಳು ಕಪಿಲ್ ಮತ್ತು ಅವರ ಸೋದರಸಂಬಂಧಿಯನ್ನು ಥಳಿಸಿದ್ದಾರೆ. ಹಲ್ಲೆಯ ವೀಡಿಯೊದಲ್ಲಿ ವೈರಲ್ ಆಗಿದ್ದು, ಅದರಲ್ಲಿ; ಕಪಿಲ್ ಅವರನ್ನು ಕಟ್ಟಿಹಾಕಿ, ಕೋಲಿನಿಂದ ಹೊಡೆಯುವುದು ಕಂಡುಬಂದಿದೆ.

ಕಪಿಲ್ ಅವರ ಕುಟುಂಬಸ್ಥರು ಸರೂರ್‌ಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಲ್ವರು ಟೋಲ್‌ ಬೂತ್ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

“ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೀಡಿಯೊಗಳನ್ನು ಪರಿಶೀಲಿಸಿದ ಬಳಿಕ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಇನ್ನೂ ಎರಡು ತಂಡಗಳು ಹುಡುಕಾಟ ಡನೆಸುತ್ತಿವೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...