ನಗದು ಪತ್ತೆ ಹಗರಣ: ನ್ಯಾ. ಯಶವಂತ್ ವರ್ಮಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಗವಾಯಿ

Date:

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ.

ತಮ್ಮ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದಷ್ಟು ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದ ಆಂತರಿಕ ಸಮಿತಿ ವರದಿಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿ ವರ್ಮಾ ಪರವಾಗಿ ತುರ್ತು ವಿಚಾರಣೆಗೆ ಮನವಿ ಸಲ್ಲಿಸಿದಾಗ, “ನಾನು ಆ ಸಮಿತಿಯ ಭಾಗವಾಗಿದ್ದೆ. ಈ ಕಾರಣದಿಂದಾಗಿ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನನಗೆ ಸಾಧ್ಯವಿಲ್ಲ,” ಎಂದು ಸಿಜೆಐ ಗವಾಯಿ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ವರ್ಮಾ ಅವರು ತಮ್ಮ ವಿರುದ್ಧದ ಆಂತರಿಕ ತನಿಖೆಯ ಶಿಫಾರಸುಗಳನ್ನು ಅಸಂವಿಧಾನಿಕವೆಂದು ಉಲ್ಲೇಖಿಸಿ, ಈ ಕಾರ್ಯವಿಧಾನವು ಸಂವಿಧಾನಬದ್ಧವಾಗಿ ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆಗೆ ವಿರುದ್ಧವಿದೆ ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಂವಿಧಾನಿಕ ಪೀಠ ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ನ್ಯಾ. ಯಶವಂತ್‌ ವರ್ಮಾ | ಪದಚ್ಯುತಿ ಪ್ರಕ್ರಿಯೆ ಎದುರಿಸುವರೇ ಅಥವಾ ರಾಜೀನಾಮೆ ನೀಡುವರೇ?

1968ರ ನ್ಯಾಯಾಧೀಶರ (ವಿಚಾರಣೆ) ಕಾಯ್ದೆಯನ್ನು ಉಲ್ಲೇಖಿಸಿ, ಯಾವುದೇ ಔಪಚಾರಿಕ ದೂರು ಇಲ್ಲದಿರುವಾಗ ಆಂತರಿಕ ತನಿಖೆಯ ಮೂಲಕ ತಮ್ಮ ವಿರುದ್ಧ ಕ್ರಮ ಕೈಗೊಂಡಿರುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

2024ರ ಮಾರ್ಚ್ 14ರಂದು ದೆಹಲಿಯಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಬಿದ್ದಾಗ, ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿತ್ತು. ಈ ಸಮಯದಲ್ಲಿ ಅವರು ಹಾಗೂ ಅವರ ಪತ್ನಿ ದೆಹಲಿಯಲ್ಲಿ ಇರಲಿಲ್ಲ, ಮಧ್ಯಪ್ರದೇಶದಲ್ಲಿ ಇದ್ದರು. ಅವರ ಮಗಳು ಮತ್ತು ವಯಸ್ಸಾದ ತಾಯಿ ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಈ ಬಳಿಕ, ಆಗಿನ ಸಿಜೆಐ ಸಂಜೀವ್ ಖನ್ನಾ ಅವರು ಪಂಜಾಬ್ ಮತ್ತು ಹರಿಯಾಣ ಸಿಜೆಐ ಶೀಲ್ ನಾಗು, ಹಿಮಾಚಲ ಸಿಜೆಐ ಜಿ ಎಸ್ ಸಂಧ್ ವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ ಹಿರಿಯ ನ್ಯಾಯಾಧೀಶ ಅನು ಶಿವರಾಮನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಿ ತನಿಖೆ ನಡೆಸಿದರು. ಈ ಸಮಿತಿ ಮೇ 3ರಂದು ತನ್ನ ಅಂತಿಮ ವರದಿಯನ್ನು ನೀಡಿದ್ದು, ಮೇ 4ರಂದು ರಾಷ್ಟ್ರಪತಿಗೆ ದೋಷಾರೋಪಣೆ ಗೆ ಶಿಫಾರಸು ಸಲ್ಲಿಸಲಾಗಿತ್ತು. ವಾಗ್ದಂಡನೆ ವಿಧಿಸುವಂತೆ ಶಿಫಾರಸು ಮಾಡಲಾಗಿತ್ತು.

ಯಶವಂತ್ ವರ್ಮಾ ಪರವಾಗಿ ಕಪಿಲ್ ಸಿಬಲ್ ಅವರೊಂದಿಗೆ ಹಿರಿಯ ನ್ಯಾಯವಾದಿಗಳಾದ ಮುಕುಲ್‌ ರೋಹಟಗಿ, ರಾಕೇಶ್ ದ್ವಿವೇದಿ, ಸಿದ್ಧಾರ್ಥ್‌ ಲೂತ್ರಾ, ಸಿದ್ಧಾರ್ಥ್‌ ಅಗರ್‌ವಾಲ್‌, ಜಾರ್ಜ್‌ ಪೋತನ್‌ ಪೋತಿಕೋಟೆ ಹಾಗೂ ಮನೀಶಾ ಸಿಂಗ್‌ ವಾದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...