ಅಪ್ರಾಪ್ತೆಯ ತುಟಿ ಮುಟ್ಟುವುದು, ಪಕ್ಕದಲ್ಲಿ ಮಲಗುವುದು ಪೋಕ್ಸೋ ಅಪರಾಧವಲ್ಲ: ದೆಹಲಿ ಹೈಕೋರ್ಟ್

Date:

ಲೈಂಗಿಕ ಪ್ರೇರಿತ ಪ್ರಚೋದನೆಗಳಿಲ್ಲದೆ ಅಪ್ರಾಪ್ತ ಬಾಲಕಿಯ ತುಟಿಗಳನ್ನು ಮುಟ್ಟುವುದು, ಒತ್ತುವುದು ಹಾಗೂ ಆಕೆಯ ಪಕ್ಕದಲ್ಲಿ ಮಲಗುವುದು ಪೋಕ್ಸೋ ಕಾಯ್ದೆಯಡಿ ಅಪರಾಧವಲ್ಲ. ಅಂತಹ ಘಟನೆಗಳಲ್ಲಿ ಆರೋಪ ಹೊರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸೋದರ ಮಾನವ ವಿರುದ್ಧ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. “ಇಂತಹ ಕೃತ್ಯಗಳು ಮಗುವಿನ ಘನತೆಯನ್ನು ಉಲ್ಲಂಘಿಸಬಹುದು. ಆಕೆಯ ನಮ್ರತೆಯನ್ನು ಕೆರಳಿಸಬಹುದು. ಆದರೆ, ‘ಬಹಿರಂಗ ಅಥವಾ ಊಹಿಸಲಾದ ಲೈಂಗಿಕ ಉದ್ದೇಶ’ವಿಲ್ಲದೆ ಇದ್ದಾದ, ಅಂತಹ ಘಟನೆಯಗಳನ್ನು ಪೋಕ್ಸೋ ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಆರೋಪಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಆದಾಗ್ಯೂ, “ಬಾಲಕಿಯ ನಮ್ರತೆಯನ್ನು ಕೆರಳಿಸುವ ಉದ್ದೇಶದಿಂದ ಎಸಗುವ ಇಂತಹ ಕೃತ್ಯಗಳ ವಿರುದ್ಧ ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದೆ” ಎಂದು ಪೀಠವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣ ದಾಖಲಿಸಿರುವ ಅರ್ಜಿದಾರ ಬಾಲಕಿ, ತನ್ನ ಸೋದರ ಮಾವ ತನ್ನ ತುಟಿಗಳನ್ನು ಮುಟ್ಟಿ ಒತ್ತಿದಿದ್ದಾರೆ. ತನ್ನ ಪಕ್ಕದಲ್ಲಿ ಮಲಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಆ ಕೃತ್ಯಗಳನ್ನು ಲೈಂಗಿಕ ಉದ್ದೇಶದಿಂದ ಎಸಗಲಾಗಿದೆ ಎಂಬುದಕ್ಕೆ ಆಕೆಯ ಯಾವುದೇ ಹೇಳಿಕೆಗಳು ನಿರ್ದಿಷ್ಟವಾಗಿ ಪ್ರತಿಪಾದಿಸುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಬಾಲಕಿಯ ಹೇಳಿಕೆಗಳಲ್ಲಿ ಘಟನೆಯು ಲೈಂಗಿಕ ಪ್ರೇರಿತ ಕೃತ್ಯವೆಂಬುದಕ್ಕೆ ಸಣ್ಣದೊಂದು ಸೂಚನೆಯೂ ಇಲ್ಲ. ಹೀಗಾಗಿ, ‘ಲೈಂಗಿಕ ಉದ್ದೇಶ’ದ ಕೃತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಸಂತ್ರಸ್ತೆಯು ಯಾವುದೇ ಲೈಂಗಿಕ ಕೃತ್ಯದ ಆರೋಪಗಳನ್ನು ಮಾಡಿಲ್ಲ. ಮ್ಯಾಜಿಸ್ಟ್ರೇಟ್, ಪೊಲೀಸ್ ಅಥವಾ ಸಿಡಬ್ಲ್ಯೂಸಿ ಮುಂದೆ ದಾಖಲಿಸಿರುವ ಹೇಳಿಕೆಗಳಲ್ಲಿ ಆಕೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಅಥವಾ ಅಂತಹ ಅಪರಾಧಕ್ಕೆ ಯತ್ನಿಸಲಾಗಿದೆ ಎಂಬ ಕುರಿತು ಸೂಚಿಸಿಲ್ಲ. ಹೀಗಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 10ರಂ ಅಡಿಯಲ್ಲಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಬದಲಾಗಿ, ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಬಹುದು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...