ದೇಶದಲ್ಲಿ ಕೈಗಾರಿಕಾ ಬೆಳವಣಿಗೆ ತಡೆಗೆ ಟ್ರೇಡ್ ಯೂನಿಯನ್ ಸಿದ್ಧಾಂತ ಕಾರಣ: ಸುಪ್ರೀಂ ಕೋರ್ಟ್

Date:

ದೇಶದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ತಡೆಯಲು ಟ್ರೇಡ್ ಯೂನಿಯನ್ ಸಿದ್ಧಾಂತ ಕಾರಣವಾಗಿದೆ. ಕೈಗಾರಿಕೆಗಳು ಮುಚ್ಚಲು ಟ್ರೇಡ್ ಯೂನಿಯನ್ ನಾಯಕರು ಹೆಚ್ಚಾಗಿ ಕಾರಣರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಿ, ಮನೆ ಕೆಲಸದ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಪಿಐಎಲ್‌ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಾಧೀಶ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ನಿರಾಕರಿಸಿದೆ. ಇದೇ ವೇಳೆ, ಟ್ರೇಡ್ ಯೂನಿಯನ್‌ಗಳ ಕುರಿತು ನ್ಯಾಯಾಧೀಶರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ತಡೆಯಲು ಟ್ರೇಡ್ ಯೂನಿಯನ್ ಸಿದ್ಧಾಂತವು ಹೆಚ್ಚು ಕಾರಣವಾಗಿದೆ. ಟ್ರೇಡ್ ಯೂನಿಯನ್‌ಗಳಿಂದಾಗಿ ದೇಶದಲ್ಲಿ ಎಷ್ಟು ಕೈಗಾರಿಕಾ ಘಟಕಗಳು ಮುಚ್ಚಲ್ಪಟ್ಟಿವೆ? ವಾಸ್ತವಗಳನ್ನು ನಮಗೆ ತಿಳಿಸಿ. ಈ ‘ಝಂಡಾ’ ಯೂನಿಯನ್‌ಗಳಿಂದಾಗಿ ದೇಶಾದ್ಯಂತ ಎಲ್ಲ ಸಾಂಪ್ರದಾಯಿಕ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿ ಕುರಿತು ಮಾತನಾಡಿದ ನ್ಯಾಯಮೂರ್ತಿಗಳು, “ಮನೆ ಕೆಲಸದ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಯಡಿ ಕನಿಷ್ಠ ವೇತನ ನಿಗದಿ ಮಾಡಿದರೆ, ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದೇ ಇಲ್ಲ” ಎಂದು ಹೇಳಿದ್ದಾರೆ.

“ಕನಿಷ್ಠ ವೇತನ ನಿಗದಿಯು ಕೆಲಸ ಕೊಡುವವರನ್ನು ಸಂಕಷ್ಟಕ್ಕೆ ತಳ್ಳಬಹುದು. ಕಾರ್ಮಿಕ ಸಂಘಗಳು ಪ್ರತಿಯೊಂದು ಮನೆಯನ್ನೂ ಮೊಕದ್ದಮೆಗೆ ಎಳೆಯಬಹುದು. ಇದು ಮನೆ ಕೆಲಸದವರನ್ನು ನೇಮಿಸಿಕೊಳ್ಳುವಲ್ಲಿ ಹಿಂಜರಿಕೆಗೆ ಕಾರಣವಾಗಬಹುದು” ಎಂದು ಕೋರ್ಟ್‌ ಹೇಳಿದೆ.

“ದೇಶಾದ್ಯಂತ ಲಕ್ಷಾಂತರ ಮನೆಗೆಲಸದವರು ‘ಕಷ್ಟ’ದಲ್ಲಿದ್ದಾರೆ. ಆದರೆ, ಈ ಸಂಬಂಧ ಕಾನೂನು ತಿದ್ದುಪಡಿ ಮಾಡುವಂತೆ ಆದೇಶಿಸಲು ಸಾಧ್ಯವಿಲ್ಲ. ಕಾನೂನಿನಲ್ಲಿ ಬದಲಾವಣೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಸೀಮಿತ ಅಧಿಕಾರವಿದೆ” ಎಂದು ಕೋರ್ಟ್‌ ಹೇಳಿದ್ದು, ಈ ಸಮಸ್ಯೆಯ ಪರಿಹಾರಕ್ಕಾಗಿ ಅರ್ಜಿದಾರರು ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...