ಟ್ರೇಡ್‌ಮಾರ್ಕ್ ಪ್ರಕರಣ | 50 ಲಕ್ಷ ರೂ. ಪಾವತಿಸಲು ಪತಂಜಲಿಗೆ ಬಾಂಬೆ ಹೈಕೋರ್ಟ್ ಆದೇಶ

Date:

ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಕಾರಣ 50 ಲಕ್ಷ ರೂಪಾಯಿ ಠೇವಣಿ ಇಡುವಂತೆ ಪತಂಜಲಿ ಆಯುರ್ವೇದ್‌ಗೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ. ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಕರ್ಪೂರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಪತಂಜಲಿಗೆ ಕೋರ್ಟ್ ಆದೇಶಿಸಿತ್ತು. ಆದರೆ ಪತಂಜಲಿ ಆ ನಿಯಮ ಉಲ್ಲಂಘಿಸಿದೆ.

ಮಂಗಳಂ ಆರ್ಗಾನಿಕ್ಸ್ ಲಿಮಿಟೆಡ್‌ ಟ್ರೇಡ್‌ಮಾರ್ಕ್ ಉಲ್ಲಂಘನೆಯ ಆರೋಪ ಮಾಡಿದೆ. ಇದಾದ ಬಳಿಕ 2023ರ ಆಗಸ್ಟ್‌ನಲ್ಲಿ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಕರ್ಪೂರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಆದೇಶಿಸಿದೆ.

ಪತಂಜಲಿಯು ಜೂನ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕರ್ಪೂರ ಉತ್ಪನ್ನಗಳ ಮಾರಾಟಕ್ಕೆ ತಡೆಯಾಜ್ಞೆ ನೀಡುವ ಹಿಂದಿನ ಆದೇಶದ ಉಲ್ಲಂಘನೆಯನ್ನು ಒಪ್ಪಿಕೊಂಡಿದೆ ಎಂಬುವುದನ್ನು ಜುಲೈ 8ರಂದು ನ್ಯಾಯಮೂರ್ತಿ ಆರ್ ಐ ಚಾಗ್ಲಾ ಅವರ ಏಕ ಪೀಠವು ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಪತಂಜಲಿ ‘ಸೋನ್ ಪಾಪ್ಡಿ’ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ; ಮೂವರಿಗೆ ಜೈಲು

ಪತಂಜಲಿ 2023ರ ಆಗಸ್ಟ್ 30ರ ತಡೆಯಾಜ್ಞೆ ಆದೇಶದ ಇಂತಹ ನಿರಂತರ ಉಲ್ಲಂಘನೆಯನ್ನು ಮಾಡುವುದನ್ನು ಈ ನ್ಯಾಯಾಲಯವು ಸಹಿಸುವುದಿಲ್ಲ ಎಂದು ನ್ಯಾಯಮೂರ್ತಿ ಚಾಗ್ಲಾ ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶದ ಪ್ರತಿಯು ಬುಧವಾರ (ಜುಲೈ 10) ಲಭ್ಯವಾಗಿದೆ.

ತಡೆಯಾಜ್ಞೆ ಆದೇಶದ ಉಲ್ಲಂಘನೆ ಮಾಡಿದ ಕಾರಣಕ್ಕೆ ಮೊದಲು 50 ಲಕ್ಷ ರೂಪಾಯಿ ಮೊತ್ತವನ್ನು ಪಾವತಿ ಮಾಡುವಂತೆ ಪತಂಜಲಿಗೆ ನಿರ್ದೇಶನ ನೀಡುವುದು ಸೂಕ್ತ ಎಂದು ಬಾಂಬೆ ಹೈಕೋರ್ಟ್ ಪೀಠವು ಆದೇಶಿಸಿದೆ. ನಿಷೇಧಾಜ್ಞೆ ಜಾರಿಯಾದ ನಂತರ 49,57,861 ರೂಪಾಯಿ ಮೊತ್ತದ ಕರ್ಪೂರದ ಉತ್ಪನ್ನದ ಪೂರೈಕೆಯನ್ನು ಪತಂಜಲಿ ಮಾಡಿದೆ ಎಂದು ಅಫಿಡವಿಟ್‌ನಲ್ಲಿ ಪತಂಜಲಿ ನಿರ್ದೇಶಕ ರಜನೀಶ್ ಮಿಶ್ರಾ ತಿಳಿಸಿದ್ದಾರೆ.

ಇನ್ನು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 19ಕ್ಕೆ ಹೈಕೋರ್ಟ್ ಮುಂದೂಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...