ಊಟ ಮಾಡುತ್ತಿದ್ದಾಗಲೇ ಹಾಸ್ಟೆಲ್‌ ಮೇಲೆ ಬಿದ್ದ ವಿಮಾನ; 7 ವೈದ್ಯಕೀಯ ವಿದ್ಯಾರ್ಥಿಗಳ ಸಾವು

Date:

242 ಪ್ರಯಾಣಿಕರಿದ್ದ ಏರ್ ಇಂಡಿಯಾ ಬೋಯಿಂಗ್‌ 787 ವಿಮಾನವು ಹಾಸ್ಟೆಲ್‌ ಮೇಲೆ ಬಿದ್ದ ಪರಿಣಾಮ 7 ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಅಹಮದಾಬಾದ್‌ನ ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದಿದೆ.

ಈ ದುರಂತದ ವೇಳೆ ಮೆಸ್‌ನಲ್ಲಿದ್ದ ವಿದ್ಯಾರ್ಥಿಗಳು ಊಟವನ್ನು ಬಿಟ್ಟು ಅರ್ಧಕ್ಕೆ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಅಪಘಾತದ ಭೀಕರತೆಯ ಚಿತ್ರವೊಂದು ವಿವರಿಸುತ್ತದೆ. ಚಿತ್ರಗಳಲ್ಲಿ ಟೇಬಲ್ ಮೇಲೆ ಬಡಿಸಿಟ್ಟಿದ್ದ ಊಟದ ತಟ್ಟೆ, ಲೋಟ ಎಲ್ಲವೂ ಹಾಗೆ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ ಊಟದ ಸಮಯದಲ್ಲಿ ಮೆಡಿಕಲ್ ಕಾಲೇಜ್ ಕ್ಯಾಂಟೀನ್ ಕಟ್ಟಡಕ್ಕೆ ವಿಮಾನ ಬಡಿದಿದೆ. ಈ ಪರಿಣಾಮ ಮೆಡಿಕಲ್ ಕಾಲೇಜಿನ ಅಡುಗೆ ಮನೆಗೆ ಬೆಂಕಿ ಹೊತ್ತಿಕೊಂಡು ಗೋಡೆಗಳು ಛಿದ್ರ ಛಿದ್ರಗೊಂಡಿದೆ. ಈ ದುರಂತದ ವೇಳೆ ಮೆಸ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿದ್ದೀರಾ? ಗುಜರಾತ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ; Photo and Video gallery

ದುರಂತದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ.

ಅಹಮದಾಬಾದ್​ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನದ ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಸಂಘಟಿಸಲು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯಾಚರಣಾ ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದೆ. ಅದಕ್ಕಾಗಿ 011-24610843, 9650391859 ದೂರವಾಣಿ ಸಂಖ್ಯೆಯನ್ನು ತೆರೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...