ರೈಲು ಅಪಘಾತ : ಕಳೆದ 10 ವರ್ಷಗಳಲ್ಲಿ 2.6 ಲಕ್ಷಕ್ಕೂ ಹೆಚ್ಚು ಜನರ ಸಾವು : ಸಂಸದ ಸಾಗರ ಖಂಡ್ರೆ

Date:

ʼಕಳೆದ 10 ವರ್ಷಗಳಲ್ಲಿ ಎನ್‌ಸಿಆರ್‌ಬಿ ವರದಿ ಪ್ರಕಾರ 2.6 ಲಕ್ಷಕ್ಕೂ ಹೆಚ್ಚು ಜನರು ರೈಲು ಅಪಘಾತಗಳಿಂದ ಸಾವನ್ನಪ್ಪಿದ್ದು, ರೈಲು ಅಪಘಾತ ತಡೆಗೆ ʼಕವಚ್‌ʼ ತಂತ್ರಜ್ಞಾನ ಎಲ್ಲೆಡೆ ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕುʼ ಎಂದು ಬೀದರ್‌ ಸಂಸದ ಸಾಗರ್‌ ಖಂಡ್ರೆ ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಸೋಮವಾರ ಗಮನ ಸೆಳೆದ ಅವರು, ʼರೈಲು ಅಪಘಾತ ತಡೆಗೆ ಜಾರಿಗೊಳಿಸಿದ ʼಕವಚ್‌ʼ ತಂತ್ರಜ್ಞಾನವನ್ನು ಬಹಳ ನಿಧಾನಗತಿಯಲ್ಲಿ ಅಳವಡಿಸಲಾಗುತ್ತಿದೆ. ದೇಶದ 68 ಸಾವಿರ ಕಿ.ಮೀ ಮಾರ್ಗದಲ್ಲಿ 3,700 ಕಿ.ಮೀ. ಮಾತ್ರ ಅಳವಡಿಸಲಾಗಿದೆʼ ಎಂದರು.

ʼಹೆಚ್ಚಿನ ಜನರು ರೈಲುಗಳಿಗೆ ಸಿಲುಕಿ, ರೈಲುಗಳಿಂದ ಬೀಳುವುದರಿಂದ ಅಪಘಾತ ಸಂಭವಿಸುತ್ತಿವೆ. ಕಳೆದ ಹತ್ತು ವರ್ಷಗಳಲ್ಲಿ 700ಕ್ಕೂ ಹೆಚ್ಚು ಜನ ಸಾವನಪ್ಪಿದ್ದರೆ, 2 ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಮೃತ್ ಭಾರತ್ ಯೋಜನೆ ಅಡಿಯಲ್ಲಿ ನಿಲ್ದಾಣಗಳ ಪುನರಾಭಿವೃದ್ಧಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿದೆ. 2024-25ನೇ ವರ್ಷದಲ್ಲಿ 450ಕ್ಕೂ ಹೆಚ್ಚು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಬೇಕಿತ್ತು. ಆದರೆ, ಕೇವಲ ಒಂದು ನಿಲ್ದಾಣ ಮಾತ್ರ ಅಭಿವೃದ್ಧಿಪಡಿಸಲಾಗಿದೆʼ ಎಂದರು.

ʼಬೀದರ್-ಬೆಂಗಳೂರು ನಡುವೆ ʼವಂದೇ ಭಾರತ್ʼ ರೈಲು ಆರಂಭವಾಗಬೇಕೆಂಬುದು ನನ್ನ ಕ್ಷೇತ್ರದ ಜನರ ಬೇಡಿಕೆಯಾಗಿದ್ದು, ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ. ಭಾಲ್ಕಿ ಮತ್ತು ಕಮಲನಗರ ರೈಲ್ವೆ ನಿಲ್ದಾಣಗಳನ್ನು ʼಅಮೃತ ಭಾರತ್‌ʼ ಯೋಜನೆಯಡಿ ಸೇರ್ಪಡಿಸಿ ಅಭಿವೃದ್ಧಿಪಡಿಸಬೇಕು. ಬೀದರ-ಬೆಂಗಳೂರು ರೈಲುಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿದ್ದು, ಹೆಚ್ಚುವರಿ 2 ಬೋಗಿಗಳನ್ನು ಸೇರಿಸಲು ಅವಕಾಶವಿದ್ದು ಬೋಗಿಗಳನ್ನು ಸೇರಿಸಬೇಕುʼ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಜಾಗತಿಕ ತಾಪಮಾನ ಏರಿಕೆ: ಬಿಸಿಗಾಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು?

ʼಬೀದರ ಕ್ಷೇತ್ರದ ಜನರನ್ನು ರಾಷ್ಟ್ರ ರಾಜಧಾನಿ ದೆಹಲಿಗೆ ಸಂಪರ್ಕ ಕಲ್ಪಿಸಲು ದಕ್ಷಿಣ ಎಕ್ಸ್‌ಪ್ರೆಸ್ ರೈಲನ್ನು ಹೈದರಾಬಾದ್‌ನಿಂದ ಬೀದರಕ್ಕೆ ವಿಸ್ತರಿಸಬೇಕು. ತಾಂಡೂರು-ಜಹೀರಾಬಾದ್ ಹೊಸ ರೈಲು ಮಾರ್ಗವನ್ನು ಕ್ಷೇತ್ರದ ಚಿಂಚೋಳಿ ಮೂಲಕ ಸಾಗುವಂತೆ ಮಾಡಬೇಕು. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮ ಕ್ಷೇತ್ರಕ್ಕೆ ನೀಡಲಾಗುತ್ತಿದ್ದ ಶೇ 50ರಷ್ಟು ರಿಯಾಯಿತಿಯನ್ನು ಮರುಪ್ರಾರಂಭಿಸಬೇಕುʼ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಭಾಲ್ಕಿ ಹಿರೇಮಠದಲ್ಲಿ ಏ.10ರಿಂದ ಬಸವ ದರ್ಶನ ಪ್ರವಚನ

ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಚನ್ನಬಸವ ಪಟ್ಟದ್ದೇವರ27ನೆಯ...

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...