ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ: ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ, ರೈಲುಗಳ ನಿಲುಗಡೆ

Date:

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನವನ್ನು ವಿರೋಧಿಸಿ, ಆರ್‌ಜೆಡಿ ಹಾಗೂ ಮಹಾಘಟಬಂಧನ್ ಮೈತ್ರಿಕೂಟದ ಇನ್ನಿತರ ಪಕ್ಷಗಳು ಇಂದು ಬಿಹಾರದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.

ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ, ಸ್ಥಳೀಯ ನಾಯಕರು ಸೋನ್ಪುರ್, ಹಾಜಿಪುರ್ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ಅಲ್ಲದೆ, ಜೆಹನಾಬಾದ್‌ನಲ್ಲಿ ಆರ್‌ಜೆಡಿ ವಿದ್ಯಾರ್ಥಿ ಘಟಕವು ಹಳಿಗಳಲ್ಲಿ ರೈಲುಗಳನ್ನು ತಡೆದ ಘಟನೆ ವರದಿಯಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ರಸ್ತೆ ತಡೆಗೆ ಕರೆ ನೀಡಲಾಗಿದ್ದು, ಕಾಕತಾಳೀಯವೆಂಬಂತೆ ಹಲವು ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಹಾಗೂ ಅವುಗಳ ಸಹ ಸಂಘಟನೆಗಳು ಕನಿಷ್ಠ ವೇತನ ಹಾಗೂ ನೂತನ ಕಾರ್ಮಿಕ ನೀತಿ ಸಂಹಿತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಬಂದ್‌ಗೆ ಕರೆ ನೀಡಿರುವ ಹೊತ್ತಿನಲ್ಲೇ ಇಂಡಿಯಾ ಒಕ್ಕೂಟದ ಪ್ರತಿಭಟನೆಯೂ ನಡೆಯುತ್ತಿದೆ.

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನ ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈ ಪ್ರತಿಭಟನಾ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಗೋಲಂಬರ್ ಬಳಿ ಇರುವ ಆದಾಯ ತೆರಿಗೆ ಇಲಾಖೆ ಕಚೇರಿಯಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ಈ ಪಾದಯಾತ್ರೆ ಮುಂದುವರಿಯಲಿದೆ. ಈ ಪಾದಯಾತ್ರೆಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಪಾಲ್ಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...