ಗುಜರಾತ್‌ | ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ವಿಕೃತಿ; 12 ಮಂದಿ ಬಂಧನ

Date:

ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಬೈಕ್‌ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ನಡೆದಿದೆ. ವಿಕೃತಿ ಮೆರೆದಿದ್ದ 12 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಗುಜರಾತ್‌ನ ದಾಹೋದ್ ಜಿಲ್ಲೆಯ ಧಲ್ಸಿಮಲ್ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 20 ಮಂದಿ ದುರುಳರು ಮಹಿಳೆಯನ್ನು ಅಪಹರಿಸಿ, ಕೃತ್ಯ ಎಸಗಿದ್ದಾರೆ. ಆರೋಪಿಗಳಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಅಪ್ರಾಪ್ತರೂ ಇದ್ದಾರೆ ಎಂದು ವರದಿಯಾಗಿದೆ.

ಮಹಿಳೆಯನ್ನು ಬೆತ್ತಲೆಗೊಳಿಸಿ, ಬೈಕ್‌ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ವಿಕೃತ ಮನಸ್ಸಿನ ದುಷ್ಕರ್ಮಿಗಳು, ಘಟನೆಯನ್ನು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗಿರುವುದನ್ನು ಗಮನಿಸಿದ ಪೊಲೀಸರು, ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ದಾಹೋದ್ ಎಸ್‌ಪಿ ರಾಜ್‌ದೀಪ್‌ ಸಿನ್ಹಾ ಝಾಲಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...