ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Date:

ತಮ್ಮ ಪೋಷಕರು ಉಡುಗೊರೆ ರೂಪದಲ್ಲಿ (ಗಿಫ್ಟ್ ಡೀಡ್) ನೀಡಿದ ಆಸ್ತಿಯನ್ನು ಅನುಭವಿಸುವ ಹಕ್ಕು ಹೆತ್ತವರನ್ನು ಅವಗಣಿಸಿ, ಅವರ ಯೋಗಕ್ಷೇಮ ನೋಡಿಕೊಳ್ಳದೆ ಬಿಟ್ಟುಬಿಡುವ ಮಕ್ಕಳಿಗೆ ಇರುವುದಿಲ್ಲ. ಮಕ್ಕಳಿಂದ ಅವಗಣಿಸಲ್ಪಟ್ಟರೆ ಹೆತ್ತವರು ಆ ಗಿಫ್ಟ್ ಡೀಡ್‌ಗಳನ್ನು ರದ್ದುಗೊಳಿಸಬಹುದು ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ನೀಡಿದೆ.

ಡೀಡ್‌ನಲ್ಲಿ ಪೋಷಕರ ಜವಾಬ್ದಾರಿಯನ್ನು ಮಕ್ಕಳು ಹೊರಬೇಕೆಂಬ ವಿಷಯ ಪ್ರಸ್ತಾವಿಸದೆ ಹಾಗೆಯೇ ಡೀಡ್ ಮಾಡಿಕೊಂಡಿದ್ದರೆ, ಅಂತಹ ಡೀಡ್‌ಗಳನ್ನು ಹೆತ್ತವರನ್ನು ನಿರ್ಲಕ್ಷಿಸಿದ ಕಾರಣಕ್ಕೆ ರದ್ದುಗೊಳಿಸಲಾಗದು ಎಂದು ಮಧ್ಯಪ್ರದೇಶ ಹೈಕೋರ್ಟ್‌ಈ ಹಿಂದೆ ತೀರ್ಪು ನೀಡಿತ್ತು. ಆ ತೀರ್ಪನ್ನು ಈಗ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ನ್ಯಾಯಪೀಠ ವಜಾಗೊಳಿಸಿದೆ.

ಈ ಮೂಲಕ ಅರ್ಜಿದಾರ ಮಹಿಳೆಯ ಪುತ್ರ ಆಕೆಯ ಕೊನೆಯ ಕಾಲದವರೆಗೂ ಆಕೆಯನ್ನು ನೋಡಿಕೊಳ್ಳಬೇಕು. ಇಲ್ಲದಿದ್ದರೆ ತಾಯಿಯು ಗಿಫ್ಟ್ ಡೀಡ್ ಹಿಂಪಡೆಯಲು ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಹೆತ್ತವರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ ಅನ್ವಯ ಮಕ್ಕಳು ಹೆತ್ತವರನ್ನು ನೋಡಿಕೊಳ್ಳಲು ವಿಫಲರಾದರೆ ಹೆತ್ತವರು ಸಹಿ ಮಾಡಿದ ಗಿಫ್ಟ್ ಡೀಡ್‌ಗಳನ್ನು ಅನೂರ್ಜಿತಗೊಳಿಸಬಹುದು. ಕಾಯ್ದೆಯ ಸೆಕ್ಷನ್ 23ರ ಅನ್ವಯ, “ಕಾಯ್ದೆ ಜಾರಿಯಾದ ಬಳಿಕ ಮಕ್ಕಳಿಗೆ ಗಿಫ್ಟ್ ಡೀಡ್ ಅಥವಾ ಯಾವುದೇ ರೂಪದಲ್ಲಿ ಆಸ್ತಿ ವರ್ಗಾವಣೆ ಮಾಡಿದ ಹೆತ್ತವರನ್ನು ಮಕ್ಕಳು ನೋಡಿಕೊಳ್ಳಬೇಕು. ಅವರಿಗೆ ಬೇಕಾಗಿರುವ ಸೌಕರ್ಯ ಒದಗಿಸಬೇಕು. ಅದರಲ್ಲಿ ವಿಫಲವಾದರೆ ಆಸ್ತಿಯನ್ನು ಬಲವಂತವಾಗಿ, ವಂಚನೆಯಿಂದ ಬರೆಯಿಸಿಕೊಳ್ಳಲಾಗಿದೆ ಎಂದು ಪರಿಗಣಿಸಲಾಗುತ್ತದೆ’ ಎಂದೂ ನ್ಯಾಯಪೀಠ ಹೇಳಿದೆ.

ಒಂಟಿಯಾಗಿರುವ ಹಿರಿಯ ನಾಗರಿಕರಿಗೆ, ಮಕ್ಕಳಿಂದ ಕಡೆಗಣಿಸಲ್ಪಟ್ಟ ಹೆತ್ತವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಈ ಕಾಯ್ದೆಯನ್ನು ತರಲಾಗಿದೆ. ಅದರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅಲ್ಲ, ಉದಾರವಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...