ಮಹಾರಾಷ್ಟ್ರ | ಟ್ರಕ್-ಟೆಂಪೊ ಡಿಕ್ಕಿ : 8 ಜನ ಸಾವು; ಹಲವರಿಗೆ ಗಾಯ

Date:

ಮಹಾರಾಷ್ಟ್ರದ ನಾಸಿಕ್‌ ಜಿಲ್ಲಾ ಕೇಂದ್ರದಲ್ಲಿ ಟ್ರಕ್-ಟೆಂಪೊ ಡಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದ ಅಯ್ಯಪ್ಪ ದೇವಾಲಯ ಬಳಿ ಭಾನುವಾರ ರಾತ್ರಿ 7.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.

ಟೆಂಪೊದಲ್ಲಿ 16 ಜನ ಪ್ರಯಾಣಿಸುತ್ತಿದ್ದು, ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲಾ ವ್ಯಾಪ್ತಿಯ ಸಿಡ್ಕೊ ಪ್ರದೇಶಕ್ಕೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಪೊಲೀಸ್‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದಿಂದ ಗಂಭೀರ ಗಾಯಗೊಂಡವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...