‘ತಾನು ಏನು ಮಾಡುತ್ತಿದ್ದೇನೆಂದು ಸ್ವತಃ ಟ್ರಂಪ್‌ಗೆ ತಿಳಿದಿಲ್ಲ’: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

Date:

ಜಾಗತಿಕ ಮತ್ತು ರಾಷ್ಟ್ರೀಯ ಭದ್ರತಾ ಬೆದರಿಕೆಗಳ ವೇಗವಾಗಿ ಹೆಚ್ಚುತ್ತಿವೆ. ಭವಿಷ್ಯವು ಅಸ್ಥಿರತೆ, ಅನಿಶ್ಚಿತತೆ, ಸಂಕೀರ್ಣತೆ ಹಾಗೂ ಅಸ್ಪಷ್ಟತೆಯಿಂದ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿರುವ ಟಿಆರ್‌ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. “ಭವಿಷ್ಯದ ಸವಾಲುಗಳು ವೇಗವಾಗಿ ಬರುತ್ತಿವೆ. ನೀವು ಮತ್ತು ನಾನು ನಮ್ಮ ಭವಿಷ್ಯದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಟ್ರಂಪ್ ಇಂದು ಏನು ಮಾಡುತ್ತಿದ್ದಾರೆ? ಸ್ವತಃ ಟ್ರಂಪ್ ಅವರಿಗೇ ತಾವು ನಾಳೆ ಏನು ಮಾಡುತ್ತೇನೆಂಬುದು ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

“ಬೆದರಿಕೆಗಳು ಹೊರಹೊಮ್ಮುತ್ತಿರುವ ವೇಗವು ಎಷ್ಟು ಬಿರುಸಾಗಿದೆಯೆಂದರೆ, ನೀವು ಹಳೆಯ ಸವಾಲನ್ನು ಗ್ರಹಿಸಲು ಪ್ರಯತ್ನಿಸುವ ಹೊತ್ತಿಗೆ, ಹೊಸ ಸವಾಲು ಎದುರಾಗಿರುತ್ತದೆ. ಯುದ್ಧದ ಸ್ವರೂಪವು ವಿಕಸನಗೊಳ್ಳುತ್ತಲೇ ಇರುವುದರಿಂದ ಎಲ್ಲ ಭೂಪ್ರದೇಶಗಳು, ಭೂಮಿ, ಆಕಾಶ ಹಾಗೂ ನೀರಿನಾದ್ಯಂತ ಸನ್ನದ್ಧತೆಯ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮೂರ್ತಿ ಮಹಾಶಯರೇ, ದುರ್ಬಲ ಜಾತಿಗಳಿಗೆ ಮೀಸಲಾತಿಯಲ್ಲಿ ಮಾತ್ರ ಮೆರಿಟ್ ನೆನಪಾಗುವುದೇ?

“ಗಡಿ ಉದ್ವಿಗ್ನತೆ ಮತ್ತು ಭಯೋತ್ಪಾದನೆಯಿಂದ ಹಿಡಿದು ನೈಸರ್ಗಿಕ ವಿಕೋಪಗಳು ಹಾಗೂ ಸೈಬರ್ ಯುದ್ಧದವರೆಗೆ ಭಾರತೀಯ ಸೇನೆಯು ವ್ಯಾಪಕ ಬೆದರಿಕೆಗಳನ್ನು ಎದುರಿಸುತ್ತಿದೆ. ಬಾಹ್ಯಾಕಾಶ ಯುದ್ಧ, ಉಪಗ್ರಹ ದುರ್ಬಲತೆಗಳು, ರಾಸಾಯನಿಕ, ಜೈವಿಕ, ವಿಕಿರಣಶಾಸ್ತ್ರ ಹಾಗೂ ಮಾಹಿತಿ ಯುದ್ಧ ಸೇರಿದಂತೆ ಸಂಘರ್ಷವು ಹೊಸ ಕ್ಷೇತ್ರಗಳಲ್ಲಿಯೂ ಹೊರಹೊಮ್ಮುತ್ತಿದೆ” ಎಂದು ಅವರು ಹೇಳಿದ್ದಾರೆ.

“ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಹಲವಾರು ಸುಳ್ಳು ಸುದ್ದಿಗಳು-ವದಂತಿಗಳು ಹೊರಬಂದವು. ನಾಗರಿಕರನ್ನು ಕೊಂದಿದ್ದೇವೆಂದು ನಕಲಿ ಸುದ್ದಿಗಳು ಹರಿದಾಡಿದವು. ನಾವು ಭಯೋತ್ಪಾದಕರ ನೆಲೆಗಳ ಮೇಲೆ ಮಾತ್ರವೇ ದಾಳಿ ಮಾಡಿದ್ದೇವೆ. ನಾವು ಮುಗ್ಧ ನಾಗರಿಕರು ಅಥವಾ ರಕ್ಷಣಾ ಸ್ಥಾಪನೆಗಳನ್ನು ಗುರಿಯಾಗಿಸಿಕೊಳ್ಳಲಿಲ್ಲ. ಆಪರೇಷನ್ ಸಿಂಧೂರದಲ್ಲಿ ನಾವು ನಮ್ಮ ಗುರಿಯನ್ನು ಸಾಧಿಸಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...