ಟಿವಿಕೆ ನಾಯಕ, ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

Date:

ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ನಿಲಂಕರೈ ನಿವಾಸದ ಮೇಲೆ ಬಾಂಬ್ ಬೆದರಿಕೆ ಬಂದಿದ್ದು ಈ ಹುಸಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

37 ವರ್ಷದ ಶಬಿಕ್ ಎಂಬ ವ್ಯಕ್ತಿಯು ಗುರುವಾರ ಮಧ್ಯರಾತ್ರಿ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿ ವಿಜಯ್ ಅವರ ನೀಲಂಕರೈ ನಿವಾಸದಲ್ಲಿ ಬಾಂಬ್ ಇಡುವುದಾಗಿ ಹುಸಿ ಬೆದರಿಕೆ ಹಾಕಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಬಾಂಬ್ ಬೆದರಿಕೆ ಕರೆ ಬಂದ ಕೂಡಲೇ ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದೆ. ಆದರೆ ಸ್ಥಳದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಮೊದಲಿಗೆ ಆವರಣದ ಹೊರಗಡೆ ತಪಾಸಣೆ ನಡೆಸಲಾಗಿದ್ದು, ವಿಜಯ್ ಅವರು ಎಚ್ಚರಗೊಂಡ ಬಳಿಕ ಮನೆಯ ಒಳಗೆ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

“ಯಾವುದೇ ಸ್ಫೋಟಕ ವಸ್ತುಗಳು ಸಿಗದ ಕಾರಣ ಬೆಳಗಿನ 7:25ರ ಸುಮಾರಿಗೆ ನಾವು ಸ್ಥಳದಿಂದ ತೆರಳಿದೆವು. ಆರಂಭದಲ್ಲಿ ಬೆದರಿಕೆ ಇಮೇಲ್ ಮೂಲಕ ಬಂದಿದೆ. ಆದರೆ ನಂತರ ಫೋನ್ ಕರೆ ಬಂದಿದೆ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇನ್ನು “ನಗರದ ಪ್ರಮುಖ ವ್ಯಕ್ತಿಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್‌ಗಳು ಬರುತ್ತಿವೆ. ಕಳೆದ ತಿಂಗಳು, ಇನ್ನೊಬ್ಬ ನಟ-ರಾಜಕಾರಣಿ ಎಸ್ ವಿ ಶೇಖರ್ ಅವರಿಗೂ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಈ ಇಮೇಲ್‌ಗಳ ವಿಷಯ ಒಂದೇ ರೀತಿಯಾಗಿದೆ. ಆ ಇಮೇಲ್ ಐಡಿಯನ್ನು ಯಾರದ್ದು ಎಂಬುದು ಇನ್ನೂ ಪತ್ತೆಯಾಗಿಲ್ಲ” ಎಂದು ಅಧಿಕಾರಿ ಹೇಳಿದ್ದಾರೆ.

ಅಕ್ಟೋಬರ್ 6 ರಂದು, ಚೆನ್ನೈನ ಪ್ರಮುಖ ರಾಷ್ಟ್ರೀಯ ದಿನಪತ್ರಿಕೆಯೊಂದಲ್ಲಿ ಮೂರು ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ಬಾಂಬ್ ನಿಷ್ಕ್ರಿಯ ದಳವು ಸಂಪೂರ್ಣ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...