ತಿರುಚಿದ ಇತಿಹಾಸ; ‘ಪರಾಶಕ್ತಿ’ ಸಿನಿಮಾ ನಿಷೇಧಕ್ಕೆ ಕಾಂಗ್ರೆಸ್‌ ಆಗ್ರಹ

Date:

ತಮಿಳು ಸಿನಿಮಾ ‘ಪರಾಶಕ್ತಿ’ಯಲ್ಲಿ ಐತಿಹಾಸಿಕ ಸಂಗತಿಗಳನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಕೆ ಕಾಮರಾಜ್ ಸೇರಿದಂತೆ ಕಾಂಗ್ರೆಸ್‌ ನಾಯಕರ ಕುರಿತು ಮಾನಹಾನಿಕರ ಚಿತ್ರಣ ನೀಡಲಾಗಿದೆ ಎಂದು ತಮಿಳುನಾಡು ಯುವ ಕಾಂಗ್ರೆಸ್‌ ಆರೋಪಿಸಿದೆ. ಸಿನಿಮಾವನ್ನು ನಿಷೇಧಿಸುವಂತೆ ತಮಿಳು ಸರ್ಕಾರವನ್ನು ಆಗ್ರಹಿಸಿದೆ.

ಸಿನಿಮಾದಲ್ಲಿ ಕಟ್ಟುಕಥೆಯನ್ನು ಬಿತ್ತರಿಸಲಾಗಿದೆ. ಅಂತಹ ದೃಶ್ಯಗಳನ್ನು ತೆಗೆದುಹಾಕಬೇಕು. ಚಲನಚಿತ್ರ ನಿರ್ಮಾಪಕರು ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ, ಚಿತ್ರತಂಡ ತಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಪಕ್ಷವು ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ವಕ್ತಾರ ಎಂ ಕುಮಾರಮಂಗಲಂ ಅವರು ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಅರುಣ್ ಭಾಸ್ಕರ್ ಅವರ ಹೇಳಿಕೆಯನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಹೇಳಿಕೆಯಲ್ಲಿ ಅರುಣ್ ಭಾಸ್ಕರ್ ಅವರು ‘ಪರಾಶಕ್ತಿ’ ಸಿನಿಮಾವನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿತ್ರದಲ್ಲಿ ಶಿವಕಾರ್ತಿಕೇಯನ್ ಅವರ ಪಾತ್ರವು ಇಂದಿರಾ ಗಾಂಧಿಯನ್ನು ಭೇಟಿಯಾಗುವ ಕಾಲ್ಪನಿಕ ದೃಶ್ಯವನ್ನು ಚಿತ್ರಿಸುತ್ತದೆ. ಆ ಸಂದರ್ಭದಲ್ಲಿ,ಇಂದಿರಾ ಗಾಂಧಿ ಅವರನ್ನು ‘ಖಳನಾಯಕಿ’ ರೀತಿಯಲ್ಲಿ ಚಿತ್ರಿಸಲಾಗಿದೆ. ಸಿನಿಮಾವನ್ನು ನಿರ್ಮಿಸಿದ ಮೂರ್ಖರ ತಂಡವು, ಇತಿಹಾಸದಲ್ಲಿ ಎಂದಿಗೂ ಸಂಭವಿಸದ ಘಟನೆಗಳನ್ನು ಸೃಷ್ಟಿಸಿದೆ. ರಾಷ್ಟ್ರೀಯ ನಾಯಕರಿಗೆ ಸಂಬಂಧಿಸಿದಂತೆ ಇತಿಹಾಸದಲ್ಲಿ ಘಟಿಸದ ಸಂದರ್ಭಗಳನ್ನು ಕಾಲ್ಪನಿಕವಾಗಿ ಚಿತ್ರಿಸಲು ಕಾನೂನು ಅನುಮತಿಸುವುದಿಲ್ಲ ಎಂಬ ವಿಚಾರವೂ ಈ ತಂಡಕ್ಕೆ ತಿಳಿದಿಲ್ಲ. ಅವರು ಯಾವುದೇ ಐತಿಹಾಸಿಕ ಆಧಾರವಿಲ್ಲದ ದೃಶ್ಯಗಳನ್ನು ಅಜಾಗರೂಕತೆಯಿಂದ ರಚಿಸಿದ್ದಾರೆ” ಎಂದು ಅರುಣ್ ಭಾಸ್ಕರ್ ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ನೇರವಾಗಿ ಅಖಾಡಕ್ಕಿಳಿದ ಮಮತಾ ಬ್ಯಾನರ್ಜಿ

“ಪರಾಶಕ್ತಿ ಸಿನಿಮಾದಲ್ಲಿ ಇತಿಹಾಸದಲ್ಲಿ ಎಂದಿಗೂ ಸಂಭವಿಸದ ಘಟನೆಗಳನ್ನು ಚಿತ್ರಿಸಲಾಗಿರುವ ಎಲ್ಲ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕಬೇಕು. ಚಿತ್ರದ ನಿರ್ಮಾಣ ತಂಡವು ಸಾರ್ವಜನಿಕ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ, ಚಲನಚಿತ್ರ ನಿರ್ಮಾಪಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪರಾಶಕ್ತಿ ಸಿನಿಮಾವನ್ನು ಸುಧಾ ಕೊಂಗರ ನಿರ್ದೇಶಿಸಿದ್ದಾರೆ. ಸಿನಿಮಾವು 1965ರಲ್ಲಿ ತಮಿಳುನಾಡಿನಲ್ಲಿ ನಡೆದಿದ್ದ ಹಿಂದಿ ವಿರೋಧಿ ಪ್ರತಿಭಟನೆಗಳ ಆಧಾರಿತ ಸಿನಿಮಾವಾಗಿದೆ. ಸೆನ್ಸಾರ್‌ ಮಂಡಳಿಯು ಸಿನಿಮಾದಲ್ಲಿ ಸುಮಾರ 25 ದೃಶ್ಯಗಳ ತಿದ್ದುಪಡಿಗಳನ್ನು ಸೂಚಿಸಿತ್ತು. ಅವುಗಳನ್ನು ಬದಲಿಸಿದ ಬಳಿಕ, ಜನವರಿ 10ರಂದು ಬಿಡುಗಡೆಯಾಯಿತು. 25 ತಿದ್ದುಪಡಿಗಳ ನಂತರವೂ ಸಿನಿಮಾ ಇನ್ನೂ ವಿವಾದಕ್ಕೆ ಸಿಲುಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...