ತಾಂತ್ರಿಕ ದೋಷ: ಟೇಕಾಫ್‌ಗೂ ಮುನ್ನ ಎರಡು ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದು

Date:

ಪೈಲಟ್‌ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮತ್ತು ನಿರ್ವಹಣಾ ಸಮಸ್ಯೆಯಿಂದಾಗಿ ಭಾನುವಾರ ಎರಡು ಏರ್‌ ಇಂಡಿಯಾ ವಿಮಾನಗಳನ್ನು ಟೇಕಾಫ್‌ಗೂ ಮುನ್ನ ರದ್ದು ಮಾಡಲಾಗಿದೆ. ದಿಢೀರ್ ವಿಮಾನ ರದ್ದಾದ ಕಾರಣ ಪ್ರಯಾಣಿಕರಿಗೆ ಸಮಸ್ಯೆ ಉಂಟಾಯಿತು.

ದೆಹಲಿ-ಲೇಹ್ ಮತ್ತು ಮುಂಬೈ-ಅಹಮದಾಬಾದ್ ವಿಮಾನಗಳನ್ನು ರದ್ದು ಮಾಡಲಾಗಿದ್ದು, ಕ್ರಮವಾಗಿ ನಾಲ್ಕು ಮತ್ತು ಆರು ಗಂಟೆಗಳ ವಿಳಂಬದ ನಂತರ ಪ್ರಯಾಣಿಕರು ಬದಲಿ ವಿಮಾನದಲ್ಲಿ ಹಾರಾಟ ನಡೆಸಿದರು.

ಇದನ್ನು ಓದಿದ್ದೀರಾ? ಏರ್ ಇಂಡಿಯಾ ವಿಮಾನದಲ್ಲಿ ಸೋರಿದ ನೀರು: ವೈರಲ್ ಆದ ವಿಡಿಯೋ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು 100ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಬೆಳಿಗ್ಗೆ 4:55 ಕ್ಕೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲೇಹ್‌ಗೆ ಹಾರಾಟ ನಡೆಸಬೇಕಿದ್ದ AI 2479 ವಿಮಾನವನ್ನು ರದ್ದು ಮಾಡಲಾಗಿದೆ. ಪೈಲಟ್‌ ತಾಂತ್ರಿಕ ದೋಷ ಇರುವುದಾಗಿ ತಿಳಿಸಿದ ಬಳಿಕ ದಿಢೀರ್ ಆಗಿ ಹಾರಾಟ ರದ್ದು ಮಾಡಲಾಗಿದೆ. ನಂತರ ಪ್ರಯಾಣಿಕರನ್ನು ಮತ್ತೊಂದು ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಅದು ಬೆಳಿಗ್ಗೆ 8:05ಕ್ಕೆ ಹಾರಾಟ ನಡೆಸಿದೆ.

ಇನ್ನು ಮುಂಬೈನಿಂದ ಅಹಮದಾಬಾದ್‌ಗೆ ಬೆಳಿಗ್ಗೆ 5:30ಕ್ಕೆ ನಿಗದಿಯಾಗಿದ್ದ AI 613 ವಿಮಾನವನ್ನು ನಿರ್ವಹಣಾ ಸಮಸ್ಯೆಗಳಿಂದಾಗಿ ಟೇಕ್ ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ರದ್ದುಗೊಳಿಸಲಾಯಿತು. ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ಅವೇರ್ ಪ್ರಕಾರ, ವಿಮಾನ ಬೆಳಿಗ್ಗೆ 11:21ಕ್ಕೆ ಹೊರಟಿದೆ.

ಇನ್ನು ದಿಢೀರ್ ಆಗಿ ದೆಹಲಿ-ಲೇಹ್ ವಿಮಾನ ರದ್ಧು ಮಾಡಿದ್ದರಿಂದ ಉಂಟಾದ ಸಮಸ್ಯೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪ್ರಯಾಣಿಕರೊಬ್ಬರು, “ನಮಗೆ ಮೊದಲು ಗೇಟ್ 30ರಿಂದ ಗೇಟ್ 36ಕ್ಕೆ ಧಾವಿಸುವಂತೆ ಹೇಳಲಾಯಿತು. ವಿಮಾನ ಹತ್ತಿದ ನಂತರ, ವಿಮಾನವು ರನ್‌ವೇ ತಲುಪಿತು. ಆದರೆ ಕ್ಯಾಪ್ಟನ್ ವಿಮಾನ ರದ್ಧು ಮಾಡಲಾಗಿದೆ ಎಂದು ಘೋಷಿಸಿದರು. ಅದಕ್ಕೂ ಮುನ್ನ ಐದು ನಿಮಿಷ ರನ್‌ವೇಯಲ್ಲೇ ವಿಮಾನ ನಿಂತಿತ್ತು. ಅಲ್ಲಿಂದ ಕೆಳಗಿಳಿಸಿ ಟರ್ಮಿನಲ್‌ಗೆ ಕರೆತರಲಾಯಿತು. ಬೆಳಿಗ್ಗೆ 6 ಗಂಟೆಗೆ, ವಿಮಾನದೊಳಗೆ ಇರುವಾಗ, ನಮ್ಮ ವಿಮಾನವನ್ನು ಬೆಳಿಗ್ಗೆ 7:30ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ನಮಗೆ ಇಮೇಲ್ ಬಂದಿದೆ” ಎಂದು ಹೇಳಿದ್ದಾರೆ.

“ವಿಮಾನದಿಂದ ಇಳಿದ ಬಳಿಕ ನಾವು ಮತ್ತೆ ಭದ್ರತಾ ತಪಾಸಣೆಗೆ ಒಳಗಾಗಬೇಕಾಯಿತು. ಬೆಳಿಗ್ಗೆ 6:40ಕ್ಕೆ ಆಹಾರ ಕೂಪನ್‌ಗಳನ್ನು ನೀಡಲಾಗಿತ್ತು. ಆದರೆ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ನಾವು ಬೋರ್ಡಿಂಗ್ ಗೇಟ್‌ಗೆ ಹಿಂತಿರುಗಬೇಕಾಯಿತು. ಅನೇಕರು ಉಪಾಹಾರ ಮಾಡಲು ಸಾಧ್ಯವಾಗಲಿಲ್ಲ ಅಥವಾ ಆತುರದಿಂದ ಊಟವನ್ನು ಮಧ್ಯದಲ್ಲಿಯೇ ಬಿಡಬೇಕಾಯಿತು. ಬೆಳಿಗ್ಗೆ 7:20ಕ್ಕೆ ಬೋರ್ಡಿಂಗ್ ಪ್ರಾರಂಭವಾಯಿತು. ಅಂತಿಮವಾಗಿ ವಿಮಾನವು ಬೆಳಿಗ್ಗೆ 8:05ಕ್ಕೆ ಹೊರಟಿತು” ಎಂದು ಪ್ರಯಾಣಿಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...