ಗುಜರಾತ್‌ | ಜಮೀನು ವಿವಾದಕ್ಕೆ ಸವರ್ಣೀಯರಿಂದ ಇಬ್ಬರು ದಲಿತರ ಹತ್ಯೆ

Date:

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸವರ್ಣೀಯ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಗುಂಪು ಇಬ್ಬರು ದಲಿತರನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್‌ ಸುರೇಂದ್ರನಗರ ಜಿಲ್ಲೆಯ ಚುಡಾ ತಾಲೂಕಿನ ಸಮಾಧಿಯಾಲ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಅಲ್ಜಿ ಪರ್ಮಾರ್ (60) ಮತ್ತು ಅವರ ಸಹೋದರ ಮನೋಜ್ ಪರ್ಮಾರ್ (54) ಎಂದು ಗುರುತಿಸಲಾಗಿದೆ. ಬುಧವಾರ(ಜುಲೈ 12) ರಾತ್ರಿ ತೀವ್ರವಾಗಿ ಗಾಯಗೊಂಡ ಇವರನ್ನು ಸುರೇಂದ್ರನಗರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸವರ್ಣೀಯರಿಂದ ಗಾಯಗೊಂಡಿರುವ ಪರುಲ್ಬೆನ್ ಪರ್ಮಾರ್ ನೀಡಿದ ದೂರಿನ ಆಧಾರದ ಮೇಲೆ, ಚುಡಾ ಪೊಲೀಸರು ಗುರುವಾರ(ಜುಲೈ 13) ಬೆಳಗ್ಗೆ ಕತಿ ದರ್ಬಾರ್ ಸಮುದಾಯದ ಆರು ಮಂದಿ ಹಾಗೂ 15 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗುಜರಾತ್‌ ಸುರೇಂದ್ರನಗರ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ ಅಶೋಕ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಧಿಯಾಲ ಗ್ರಾಮದ ತುಂಡು ಭೂಮಿಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ನಡೆದ ಗಲಭೆಯಲ್ಲಿ ದಲಿತ ಸಮುದಾಯದ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಶೋಕ್ ಕುಮಾರ್ ಯಾದವ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರತೀಕಾರ ಕ್ರಮವಾಗಿ ಅತ್ಯಾಚಾರ; ಬಯಲಿಗೆ ಬಾರದ ನೂರಾರು ಪ್ರಕರಣಗಳು

1998ರಿಂದಲೂ ಜಮೀನಿನ ವಿವಾದ ನಡೆಯುತ್ತಿದ್ದು, ದಲಿತ ಕುಟುಂಬ ಕೆಳ ನ್ಯಾಯಾಲಯದಲ್ಲಿ ಪ್ರಕರಣವನ್ನೂ ಗೆದ್ದುಕೊಂಡಿತ್ತು. ಎಂದಿನಂತೆ ಮೃತ ಸಹೋದರರು ಹಾಗೂ ಅವರ ಕುಟುಂಬಸ್ಥರು ತಮ್ಮ ಕೃಷಿ ಭೂಮಿಯಲ್ಲಿ ಉಳುಮೆ ಮಾಡಲು ತೆರಳಿದಾಗ ಸವರ್ಣೀಯ ಸಮುದಾಯದ ಗುಂಪು ಆಗಮಿಸಿ ಆಕ್ಷೇಪ ವ್ಯಕ್ತಪಡಿಸಿದೆ. ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಪರ್ಮಾರ್ ಕುಟುಂಬ ಹೊಲದಲ್ಲಿ ಉಳುಮೆ ಮುಗಿಸಿ ಹಿಂತಿರುಗುತ್ತಿದ್ದಾಗ ಸುಮಾರು 20 ಜನರ ಗುಂಪು ದೊಣ್ಣೆ ಮತ್ತು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಪ್ರಮುಖ ಆರೋಪಿ ಅಮರಭಾಯಿ ಖಚಾರ್ ಮತ್ತು ಆತನ ಸಹೋದರ ಮತ್ತು ಪುತ್ರರ ನೇತೃತ್ವದಲ್ಲಿ ದಾಳಿ ಮಾಡಿದರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ನಂತರ ಅಲ್ಜಿಭಾಯಿ ಮತ್ತು ಮನೋಜ್‌ಭಾಯ್ ಪರ್ಮಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಗಲಭೆ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...