ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 8 ಮಂದಿ ಕಾಮುಕರ ಬಂಧನ

Date:

ಆರ್ಕೆಸ್ಟ್ರಾ ಪಾರ್ಟಿಯಲ್ಲಿ ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಅತ್ಯಾಚಾರದ ರಾಜಧಾನಿ ಎಂದೇ ಕುಖ್ಯಾತಿ ಗಳಿಸಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಘಟನೆ ನಡೆಸಿದ್ದು, ಪ್ರಕರಣದಲ್ಲಿ 8 ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರ್ಕೆಸ್ಟ್ರಾ ನಡೆಯುತ್ತಿದ್ದ ಸಮಯದಲ್ಲಿ 20 ವರ್ಷ ಆಸುಪಾಸಿನ ಇಬ್ಬರು ಯುವತಿಯನ್ನು ಬಂದೂಕು ತೋರಿಸಿ ಆರೋಪಿಗಳು ಅಪಹರಿಸಿದ್ದಾರೆ. 10 ಕಿ.ಮೀ ದೂರದಲ್ಲಿದ್ದ ಓರ್ವ ಆರೋಪಿಯ ಮನೆಗೆ ಅವರನ್ನು ಕರೆದೊಯ್ದು, ಡಾನ್ಸ್‌ ಮಾಡುವಂತೆ ಒತ್ತಾಯಿಸಿದ್ದಾರೆ. ಡಾನ್ಸ್‌ ಮಾಡಲು ಯುವತಿಯರು ನಿರಾಕರಿಸಿದ್ದು, ಕುಪಿತಗೊಂಡ ಕಾಮುಕರ ಗುಂಪು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ವರದಿಯಾಗಿದೆ.

“ಎಲ್ಲ ಎಂಟು ಆರೋಪಿಗಳು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಅವರನ್ನು ಕುಶಿನಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತ ಯುವತಿಯರ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುತ್ತಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯಲಾಗುತ್ತಿದೆ”ಎಂದು ಕುಶಿನಗರ ಎಸ್‌ಪಿ ಸಂತೋಷ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಮುಕರ ಇಬ್ಬರು ಮಹಿಳೆಯರನ್ನು ಬಂದೂಕು ತೋರಿಸಿ ಅಪಹರಿಸಿದೆ. ಸ್ಥಳೀಯರು ತಕ್ಷಣವೇ ನಮಗೆ ಮಾಹಿತಿ ನೀಡಿದರು. ಅಪಹರಣಕ್ಕೆ ಬಳಸಿದ ವಾಹನದ ಸಂಖ್ಯೆಯನ್ನು ಸಹ ತಿಳಿಸಿದರು. ಕಣ್ಗಾವಲಿನ ಸಹಾಯದಿಂದ ಯುವತಿಯನ್ನು ಶೀಘ್ರವಾಗಿ ಪತ್ತೆ ಮಾಡಲಾಗಿದ್ದು, ಅಪಹರಿಸಿದ ಎರಡು ಗಂಟೆಗಳ ಒಳಗೆ ಸಂತ್ರಸ್ತೆಯರನ್ನು ರಕ್ಷಿಸಿದ್ದೇವೆ. ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ನಾಗೇಂದ್ರ ಯಾದವ್, ಅಸನ್ ಸಿಂಗ್, ಕ್ರಿಶ್ ತಿವಾರಿ, ಅರ್ಥಕ್ ಸಿಂಗ್, ಅಜೀತ್ ಸಿಂಗ್ ಮತ್ತು ವಿವೇಕ್ ಸೇಠ್ ಎಂಬವರನ್ನು ಅಜೀತ್ ಸಿಂಗ್ ಎಂಬಾತನ ಮನೆಯಲ್ಲಿ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ನಿಸಾರ್ ಅನ್ಸಾರಿ ಮತ್ತು ಆದಿತ್ಯ ಸಹಾನಿ ಅವರನ್ನು ಗ್ರಾಮವೊಂದರಲ್ಲಿ ಬಂಧಿಸಲಾಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಈ ಇಬ್ಬರೂ ಆರೋಪಿಗಳ ಕಾಲಿಗೆ ಗುಂಡೇಟು ತಗುಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಆರೋಪಿ ಅಜೀತ್ ಎಂಬಾತನ ಹುಟ್ಟುಹಬ್ಬವನ್ನು ಆಚರಿಸಲು ಆರೋಪಿಗಳು ಒಂದೆಡೆ ಸೇರಿದಿದ್ದರು. ಮದ್ಯ ಸೇವಿಸಿದ ಬಳಿಕ ನೃತ್ಯ ಪ್ರದರ್ಶನಕ್ಕಾಗಿ ಆರ್ಕೆಸ್ಟ್ರಾ ಪಾರ್ಟಿ ನಡೆಸಲು ನಿರ್ಧಿಸಿದರು. ತಡವಾಗಿದ್ದ ಕಾರಣ ಯುವತಿಯರು ಪಾರ್ಟಿಗೆ ಬಂದು, ಪ್ರದರ್ಶನ ನೀಡಲು ನಿರಾಕರಿಸಿದ್ದರು. ಅವರನ್ನು ಬಂದೂಕು ತೋರಿಸಿ, ಅಪಹರಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...