ರಾಯಚೂರಿನ ಇಬ್ಬರು ಮಾಜಿ ಜಿಲ್ಲಾಧಿಕಾರಿಗಳು ಸಂಸದರಾಗಿ ಆಯ್ಕೆ

Date:

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಜಿ.ಕುಮಾರ್ ನಾಯಕ್ ಹಾಗೂ ಸಸಿಕಾಂತ್ ಸೆಂಥಿಲ್ ಇಬ್ಬರು ಮಾಜಿ ಐಎಎಸ್‌ ಅಧಿಕಾರಿಗಳು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್ ತಮಿಳುನಾಡಿನ ತಿರುವಳ್ಳೂರ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದರೆ, ಜಿ.ಕುಮಾರ್ ನಾಯಕ್ ರಾಯಚೂರು ಕ್ಷೇತ್ರದ ಕಣದಲ್ಲಿದ್ದರು. ವಿಶೇಷವೆಂದರೆ ಇಬ್ಬರೂ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಭಾರಿ ಅಂತರದಿಂದ ಜಯ ಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಾಲಗಣಪತಿ ಅವರನ್ನು ಬರೋಬ್ಬರಿ 5,72,155 ಮತಗಳ ಅಂತರದಲ್ಲಿ ಸೋಲಿಸಿದ ಸಸಿಕಾಂತ್ ಸೆಂಥಿಲ್ 7,96,956 ಮತಗಳನ್ನು ಪಡೆದಿದ್ದಾರೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಕಣದಲ್ಲಿದ್ದ ಜಿ.ಕುಮಾರ್‌ ನಾಯಕ್‌ ಅವರು ಬಿಜೆಪಿಯ ರಾಜಾ ಅಮರೇಶ್ವರ ನಾಯಕ್‌ ವಿರುದ್ಧ 79,781 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೆಂಥಿಲ್, 2017ರ ಅಕ್ಟೋಬರ್ 10ರಿಂದ 2019ರ ಸೆಪ್ಟೆಂಬರ್ 6ರವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದರು.

“ದೇಶದ ಬಹುತ್ವದ ಏಳಿಗೆಗೆ ಭವಿಷ್ಯದಲ್ಲಿ ಹೆಚ್ಚು ಅಪಾಯ ಇದ್ದಂತೆ ಕಾಣುತ್ತಿದೆ. ಭಾರತೀಯ ಆಡಳಿತ ಸೇವೆಯಿಂದ ಹೊರಗಿರುವುದು ಲೇಸು ಎನಿಸುತ್ತಿದೆ. ಸೇವೆಯಿಂದ ಹೊರಗಿದ್ದು, ಜನರ ಒಳಿತಿಗಾಗಿ ದುಡಿಯುತ್ತೇನೆ” ಎಂದು ಪತ್ರದಲ್ಲಿ ಬರೆದು ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.

1990ರ ಕರ್ನಾಟಕ ಕೇಡರ್‌ ಅಧಿಕಾರಿಯಾಗಿರುವ ಜಿ.ಕುಮಾರ ನಾಯಕ ಅವರು ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಸಸಿಕಾಂತ ಸೆಂಥಿಲ್ ಅವರು ಜಿಲ್ಲಾಧಿಕಾರಿ ಹುದ್ದೆಗೆ ಸ್ವಯಂ ರಾಜೀನಾಮೆ ಘೋಷಿಸಿದ ಬಳಿಕ 2021ರಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದರು. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಾರ್ ರೂಂ ಮುಖ್ಯಸ್ಥರಾಗಿ‌ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದರು.

ಜಿ.ಕುಮಾರ ನಾಯಕ್ ಅವರು 1992 ರಿಂದ 2002 ವರಗೆ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.ನಿವೃತ್ತಿ ನಂತರ ಕಾಂಗ್ರೆಸ್ ಸೇರಿ ರಾಜಕಾರಣದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಾಯಚೂರು ಎಸ್‌.ಟಿ. ಮೀಸಲು ಕ್ಷೇತ್ರದಿಂದ  ಕಣಕ್ಕಿಳಿದು ಗೆಲುವಿನ ನಗೆ ಬೀರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ಪ್ರಮಾಣ ವಚನ ಸ್ವೀಕಾರ ಒಂದು ದಿನ ಮುಂದಕ್ಕೆ: ಜೂ. 9 ಕ್ಕೆ ನಿಗದಿ

ಈ ಹಿಂದೆ ಇಬ್ಬರು ಅಧಿಕಾರಿಗಳು ಜಿಲ್ಲಾಧಿಕಾರಿಗಳಾಗಿ ಜನರ ಮಧ್ಯೆ ಸೇವೆ ಸಲ್ಲಿಸಿದವರು. ಇದೀಗ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದ್ದಾರೆ. ಮತ್ತೆ ಜನರ ನಡುವೆ ಸೇವೆ ಸಲ್ಲಿಸುವ ಉತ್ತಮ ಅವಕಾಶ ಒಲಿದಿದೆ.‌

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...