ದೆಹಲಿ | ಅಪರಿಚಿತರ ಗುಂಡಿಗೆ ಇಬ್ಬರು ಸಹೋದರಿಯರು ಬಲಿ

Date:

ದೆಹಲಿ ನೈರುತ್ಯ ಭಾಗದ ಆರ್‌.ಕೆ.ಪುರಂ ಪ್ರದೇಶದಲ್ಲಿ ಅಪರಿಚಿತರು ಭಾನುವಾರ (ಜೂನ್‌ 18) ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ತಕ್ಷಣ ಇಬ್ಬರು ಮಹಿಳೆಯರನ್ನೂ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ತೀವ್ರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಹಿಳೆಯರೂ ಮೃತಪಟ್ಟಿದ್ದಾರೆ.

ದೆಹಲಿ ಅಂಬೇಡ್ಕರ್‌ ಬಸ್ತಿ ಪ್ರದೇಶದಿಂದ ವ್ಯಕ್ತಿಯೊಬ್ಬರು ನಸುಕಿನ ಜಾವ 4.40ಕ್ಕೆ ಆರ್‌.ಕೆ.ಪುರ ಪೊಲೀಸ್‌ ಠಾಣೆಗೆ ಕರೆ ಮಾಡಿ ಕೆಲವು ಅಪರಿಚಿತರು ತಮ್ಮ ಸಹೋದರಿಯರಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು
ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಕ್ಷಣ ಪೊಲೀಸ್‌ ತಂಡ ಸ್ಥಳಕ್ಕೆ ದೌಡಾಯಿಸಿತು. ಗುಂಡೇಟು ಬಿದ್ದ ಸಹೋದರಿಯರನ್ನು ಎಸ್‌.ಜೆ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅವರು ಮೃತಪಟ್ಟರು ಎಂದು ಈಶಾನ್ಯ ದೆಹಲಿಯ ಉಪ ಪೊಲೀಸ್‌ ಆಯುಕ್ತ ಮನೋಜ್‌ ಸಿ. ಹೇಳಿದರು ಎಂದು ವರದಿಯಾಗಿದೆ.

ಮೃತರನ್ನು ಪಿಂಕಿ (30) ಮತ್ತು ಜ್ಯೋತಿ (29) ಎಂದು ಗುರುತಿಸಲಾಗಿದೆ.

ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಮುಖ್ಯ ಆರೋಪಿ ಮತ್ತು ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಣಕಾಸಿನ ವಿಚಾರವಾಗಿ ಹತ್ಯೆ ನಡೆದಿರುವುದಾಗಿ ಶಂಕಿಸಲಾಗಿದೆ. ತನಿಖೆಯ ನಂತರ ಪೂರ್ಣ ಮಾಹಿತಿ ತಿಳಿಯಲಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ಸರ್ಕಾರದ ಬಳಿ ಕಾನೂನು-ಸುವ್ಯವಸ್ಥೆ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ’

ದೆಹಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯು ಲೆಫ್ಟಿನೆಂಟ್‌ ಗೌರ್ನರ್‌ ಅವರ ಬಳಿ ಇರುವ ಬದಲಿಗೆ ಎಎಪಿ ಸರ್ಕಾರದ ಬಳಿ ಇದ್ದಿದ್ದರೆ ಗುಂಡಿನ ದಾಳಿಯಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌ | ʻನನ್ನ ಪತ್ನಿ ಗರ್ಭಿಣಿʼ ಎಂದ ಅತ್ಯಾಚಾರ ಆರೋಪಿ; ಹೈಕೋರ್ಟ್‌ ಸಂಧಾನ ವಿಫಲ

ಸಹೋದರಿಯರ ಹತ್ಯೆ ಘಟನೆಯು ಮಾಧ್ಯಮಗಳಲ್ಲಿ ಬಿತ್ತರವಾದ ನಂತರ ಕೇಜ್ರಿವಾಲ್‌ ಟ್ವೀಟ್‌ ಮೂಲಕ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.

“ನಮ್ಮ ಆಲೋಚನೆಗಳು ಇಬ್ಬರು ಮಹಿಳೆಯರ ಕುಟುಂಬದ ಜೊತೆ ಇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೆಹಲಿಯ ಜನರು ಸಾಕಷ್ಟು ಅಭದ್ರತೆಯ ಭಾವನೆಯನ್ನು ಅನುಭವಿಸುತ್ತಿದ್ದಾರೆ. ದೆಹಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವ ಜವಾಬ್ದಾರಿ ಹೊತ್ತಿರುವವರು ಪರಿಸ್ಥಿತಿಯನ್ನು ಸರಿಪಡಿಸುವ ಬದಲು ದೆಹಲಿ ಸರ್ಕಾರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಪಿತೂರಿ ನಡೆಸಲಾಗುತ್ತಿದೆ” ಎಂದು ಕೇಜ್ರಿವಾಲ್ ಟ್ವೀಟ್‌ನಲ್ಲಿ ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...