ಮೋದಿ ಸರ್ಕಾರ ‘ಯುಟರ್ನ್‌’ಗಳ ಸರ್ಕಾರ: ಮಲ್ಲಿಕಾರ್ಜುನ್ ಖರ್ಗೆ

Date:

ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆಯನ್ನು ಕೇಂದ್ರವು ಘೋಷಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಇಂದು ನರೇಂದ್ರ ಮೋದಿ ಸರ್ಕಾರವನ್ನು “ಯು-ಟರ್ನ್‌ಗಳ ಸರ್ಕಾರ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಯುಪಿಎಸ್‌ನಲ್ಲಿ ‘ಯು’ ಎಂದರೆ ಮೋದಿ ಸರ್ಕಾರದ ಯು-ಟರ್ನ್‌ಗಳು.ಜೂನ್ 4 ರ ನಂತರ ಪ್ರಧಾನಿಯ ಅಧಿಕಾರದ ದುರಹಂಕಾರದ ಮೇಲೆ ಜನರ ಶಕ್ತಿ ಮೇಲುಗೈ ಸಾಧಿಸಿದೆ ಎಂದು ಖರ್ಗೆ ಹೇಳಿದ್ದಾರೆ.

ಯುಪಿಎಸ್ ಖಚಿತವಾದ ಪಿಂಚಣಿ, ಕನಿಷ್ಠ ಪಿಂಚಣಿ ಮತ್ತು ಖಚಿತವಾದ ಕುಟುಂಬ ಪಿಂಚಣಿಯನ್ನು ಒದಗಿಸುತ್ತದೆ. ಯುಪಿಎಸ್‌ನಲ್ಲಿನ ‘ಯು’ ಎಂದರೆ “ಮೋದಿ ಸರ್ಕಾರದ ಯು-ಟರ್ನ್‌ಗಳು” ಎಂದು ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೂನ್ 4 ರ ನಂತರ, ಪ್ರಧಾನ ಮಂತ್ರಿಯ ಅಧಿಕಾರದ ದುರಹಂಕಾರದ ಮೇಲೆ ಜನರ ಶಕ್ತಿ ಮೇಲುಗೈ ಸಾಧಿಸಿದೆ. ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಕಳುಹಿಸುವುದು, ಪ್ರಸಾರ ಮಸೂದೆಯ ಹಿಂಪಡೆಯುವಿಕೆ ಮುಂತಾದವು ಮೋದಿ ಸರ್ಕಾರದ ಯು-ಟರ್ನ್‌ಗಳು” ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೊಸ ಪಿಂಚಣಿ ಯೋಜನೆ ಅಥವಾ ರಾಷ್ಟ್ರೀಯ ಪಿಂಚಣಿ ಯೋಜನೆಗೆ ( ಎನ್ ಪಿಎಸ್ ) ಗೆ ತೀವ್ರ ವಿರೋಧ ವ್ಯಕ್ತವಾಗಿರುವ ನಡುವೆ, ಏಕೀಕೃತ ಪಿಂಚಣಿ ಯೋಜನೆಗೆ ( ಯುಪಿಎಸ್) ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಈ ಮೂಲಕ ಸರ್ಕಾರಿ ನೌಕರರಿಗೆ ನಿವೃತ್ತಿಯ ಬಳಿಕ ಮೂಲ ವೇತನದ ಕನಿಷ್ಠ ಶೇ 50 ಪಿಂಚಣಿಯಾಗಿ ನೀಡಲು ಸರ್ಕಾರ ನಿರ್ಧರಿಸಿತ್ತು.

ಸಚಿವ ಸಂಪುಟದ ನಿರ್ಧಾರಗಳನ್ನು ಪ್ರಕಟಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ “ಏಕಿಕೃತ ಪಿಂಚಣಿ ಯೋಜನೆ ( ಯುಪಿಎಸ್ ) ಅಡಿ ಸರ್ಕಾರಿ ನೌಕರರು ನಿವೃತ್ತಿಯ ಹಿಂದಿನ 12 ತಿಂಗಳ ಸರಾಸರಿ ಮೂಲ ವೇತನದ ಕನಿಷ್ಠ ಶೇ. 50ರಷ್ಟನ್ನು ಪಿಂಚಣಿಯಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದರು.

ಎನ್ ಪಿಎಸ್ ಆಯ್ಕೆ ಮಾಡಿಕೊಂಡವರಿಗೆ ಈಗ ಯುಪಿಎಸ್ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಕನಿಷ್ಠ 25 ವರ್ಷ ಕೆಲಸ ಮಾಡಿದವರಿಗೆ ಮೂಲ ವೇತನದ ಶೇ.50ರಷ್ಟು ಪಿಂಚಣಿಯಾಗಿ ಸಿಗಲಿದೆ. ಅದಕ್ಕಿಂತ ಕಡಿಮೆ ವರ್ಷ ಕೆಲಸ ಮಾಡಿದವರಿಗೆ ಸಿಗುವ ಮೊತ್ತ ಕಡಿಮೆಯಾಗಲಿದೆ.

ಯುಪಿಎಸ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ನಿಯೋಜಿತ ಸಂಪುಟ ಕಾರ್ಯದರ್ಶಿ ಟಿ.ವಿ ಸೋಮನಾಥ್ ಅವರು ಹೊಸ ಯೋಜನೆಯು 2025ರ ಏಪ್ರಿಲ್ 1ರಿಂದ ಅನ್ವಯವಾಗಲಿದೆ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...