ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ: ನ.6ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Date:

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 6ಕ್ಕೆ ಮುಂದೂಡಿದೆ.

ವರದಿಗಳ ಪ್ರಕಾರ, ಸೋಮವಾರ (ನ.3) ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠದ ಮುಂದೆ ವಿಚಾರಣೆ ಮುಂದುವರಿಯಿತು. ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಪರ ವಕೀಲರು ವಾದ ಮಂಡಿಸಿದರು.

ಶಿಫಾ ಉರ್ ರೆಹಮಾನ್ ಪರ ಹಿರಿಯ ವಕೀಲ ಸಲ್ಮಾನ್ ಖುರ್ಷೀದ್ ವಾದ ಮಂಡನೆ ಮಾಡಿದ್ದು, “ತನ್ನ ಕಕ್ಷಿದಾರ ಮತ್ತು ಇತರ ಬಂಧಿತರು ವಿಚಾರಣೆಯಿಲ್ಲದೆ ಐದು ವರ್ಷಗಳಿಗೂ ಹೆಚ್ಚು ಸಮಯವನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ. ಇದು ‘ವಿಚಾರಣೆಯಿಲ್ಲದ ಶಿಕ್ಷೆ’ಗೆ ಸಮಾನವಾಗಿದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ವಕೀಲ ಸಿದ್ದಾರ್ಥ್ ಅಗರ್ವಾಲ್ ಮತ್ತು ವಕೀಲ ಗೌತಮ್ ಖಝಾನಾಂಚಿ ಅವರು ಮೀರಾನ್ ಹೈದರ್ ಮತ್ತು ಮೊಹಮ್ಮದ್ ಸಲೀಂ ಪರ ವಾದ ಮಂಡನೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಅಕ್ಟೋಬರ್ 31ರಂದು ನಡೆದ ವಿಚಾರಣೆಯಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಮತ್ತು ಸಿದ್ದಾರ್ಥ್ ದಾವೆ ತಮ್ಮ ವಾದ ಮಂಡಿಸಿದ್ದರು.

ಪ್ರಾಸಿಕ್ಯೂಷನ್ (ದೆಹಲಿ ಪೊಲೀಸ್) ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ, ಅವರು ಯಾವುದೇ ವಾದ ಮಂಡಿಸಿಲ್ಲ ಎಂದು ವರದಿಗಳು ಹೇಳಿವೆ.
ಮುಂದಿನ ವಿಚಾರಣೆ ದಿನ ಅವರು ವಾದ ಮಂಡನೆ ಮಾಡುವ ಸಾಧ್ಯತೆ ಇದೆ.

ಬಂಧಿತರು ‘ವಿಕ್ಟಿಮ್ ಕಾರ್ಡ್’ ಬಳಸುತ್ತಿದ್ದಾರೆ. ವಿಳಂಬದ ಕಾರಣ ಪರಿಗಣಿಸಿ ಜಾಮೀನು ನೀಡುವ ಅಗತ್ಯ ಇಲ್ಲ. ಏಕೆಂದರೆ, ವಿಚಾರಣೆ ಆರಂಭ ವಿಳಂಬವಾಗಲು ಬಂಧಿತರು ಉದ್ದೇಶಪೂರ್ವಕವಾಗಿಯೇ ತಡೆಯೊಡ್ಡುತ್ತಿದ್ದಾರೆ ಎಂದು ಜಾಮೀನು ಅರ್ಜಿಯ ವಿರುದ್ದ ದೆಹಲಿ ಪೊಲೀಸರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಇದೇ ವಾದವನ್ನು ಮುಂದಿಟ್ಟು ಜಾಮೀನು ಅರ್ಜಿಗೆ ಎಎಸ್‌ಜಿ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...