ಉತ್ತರ ಪ್ರದೇಶ| ನಿರ್ಮಾಣ ಹಂತದಲ್ಲಿದ್ದ ಮನೆಯ ಗೋಡೆ ಕುಸಿತ; ಮೂವರು ಮಕ್ಕಳು ಮೃತ್ಯು

Date:

ಶುಕ್ರವಾರ ದೆಹಲಿ-ಎನ್‌ಸಿಆರ್‌ಯಲ್ಲಿ ಭಾರೀ ಮಳೆಯಾಗಿದ್ದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೋಲೀಸರ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಮನೆಯ ಗೋಡೆಯ ಅವಶೇಷಗಳ ಅಡಿಯಲ್ಲಿ ಒಟ್ಟು ಎಂಟು ಮಕ್ಕಳು ಸಿಲುಕಿಕೊಂಡಿದ್ದರು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಗೌತಮ್ ಬುದ್ಧ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅತುಲ್ ಕುಮಾರ್, “ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಎಂಟು ಮಕ್ಕಳು ಸಿಲುಕಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕೇರಳ | ಮನೆಗೆ ಬೆಂಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ

“ನಿರ್ಮಾಣ ಹಂತದಲ್ಲಿದ್ದ ಮನೆಯ ಗೋಡೆ ಕುಸಿದಿದ್ದು, ಮೂವರು ಮಕ್ಕಳು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಉಳಿದ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...