ಅಪ್ರಾಪ್ತ ಬಾಲಕಿ ಮೇಲೆ ಕಾಮುಕ ತಂದೆಯಿಂದಲೇ 4 ವರ್ಷ ನಿರಂತರ ಅತ್ಯಾಚಾರ

Date:

ಕಾಮುಕ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ನಾಲ್ಕು ವರ್ಷ ಮತ್ತು ಅಪ್ತಾಪ್ತ ಸೊಸೆಯ ಮೇಲೆ 7 ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ತಂದೆಯ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿದ್ದ ಮಗಳು ಇತ್ತೀಚೆಗೆ ಮನೆಯಿಂದ ತಪ್ಪಿಸಿಕೊಂಡು ಹೊರಬಂದಿದ್ದರು. ಆಕೆ ಕಾಣೆಯಾಗಿದ್ದಾರೆ ಎಂದು ಕಾಮುಕ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕಾಮುಕ ತಂದೆ ದಾಖಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಕಾಣೆಯಾಗಿದ್ದ ಬಾಲಕಿಯನ್ನು ಪತ್ತೆಹಚ್ಚಿದ್ದರು. ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ, ಆಕೆ ತನ್ನ ತಂದೆಯ ಲೈಂಗಿಕ ಕೃತ್ಯಗಳ ಬಗ್ಗೆ ವಿವರಿಸಿದ್ದಾರೆ ಮತ್ತು ಆತನ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಮನೆ ತೊರೆದಿದ್ದಾಗಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು 14 ವರ್ಷದವಳಿದ್ದಾಗಿನಿಂದ ನನ್ನ ತಂದೆ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿದ್ದನು. ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ಪ್ಲೇ ಮಾಡಿ, ಟಿವಿಯಲ್ಲಿ ಧ್ವನಿಯನ್ನು ಹೆಚ್ಚಿಸಿ ದೌರ್ಜನ್ಯ ಎಸಗುತ್ತಿದ್ದನು” ಎಂದು ಸಂತ್ರಸ್ತೆ ಹೇಳಿರುವುದಾಗಿ ವರದಿಯಾಗಿದೆ.

ಪ್ರಕರಣದ ಬಗ್ಗೆ ವಿವರಿಸಿರುವ ರಾಜ್‌ಕೋಟ್ ಗ್ರಾಮೀಣ ಎಸ್‌ಪಿ ವಿಜಯಸಿಂಗ್ ಗುರ್ಜರ್, “ವಿಕಲಚೇತನ ವ್ಯಕ್ತಿಯಾಗಿರುವ ಆರೋಪಿ ವಿಚಾರಣೆಯ ಸಮಯದಲ್ಲಿ ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ. ವಿಚಾರಣೆಯ ಸಮಯದಲ್ಲಿ, ಎರಡನೇ ಸಂತ್ರಸ್ತೆಯನ್ನು ಸಹ ಗುರುತಿಸಲಾಗಿದೆ. ಆಕೆ ಆರೋಪಿಯ ಸೋದರ ಸಂಬಂಧಿಯಾಗಿದ್ದು, ಸಂಬಂಧದಲ್ಲಿ ಸೊಸೆಯಾಗಬೇಕು. ಆಕೆಯ ಮೇಲೂ ಆರೋಪಿ ಸುಮಾರು ವರ್ಷಗಳಿಂದ ದೌರ್ಜನ್ಯ ಎಸಗಿದ್ದಾನೆ” ಎಂದು ವಿವರಿಸಿದ್ದಾರೆ.

ಇಬ್ಬರೂ ಸಂತ್ರಸ್ತೆಯರಿಗೆ ಕೌನ್ಸೆಲಿಂಗ್‌ ನೀಡಲಾಗುತ್ತಿದೆ. ಇಬ್ಬರಿಂದಲೂ ಪ್ರತ್ಯೇಕ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...