ಮಣಿಪುರ | ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ: ನಾಲ್ವರ ಸಾವು

Date:

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಜನರ ಮೇಲೆ ಅಪರಿಚಿತ ಬಂದೂಕುಧಾರಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ನಾಲ್ವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಇಂದು(ಜೂನ್ 30) ಮಧ್ಯಾಹ್ನದ ವೇಳೆಗೆ ಮೋಂಗ್‌ಜಾಂಗ್ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ನಿಲ್ಲದ ಸಂಘರ್ಷ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಂಗ್‌ಜಾಂಗ್ ಚುರಾಚಂದ್‌ಪುರ ಪಟ್ಟಣದಿಂದ ಸುಮಾರು 7 ಕಿಲೋ ಮೀಟರ್‌ ದೂರದಲ್ಲಿರುವ ಪ್ರದೇಶವಾಗಿದೆ. ಆರೋಪಿಗಳು ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡು ಹಾರಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ವರದಿಯಾಗಿದೆ. ಸ್ಥಳದಲ್ಲಿ 12ಕ್ಕೂ ಅಧಿಕ ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಯಾವುದೇ ಸಂಘಟನೆಗಳು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಸದ್ಯ ಪೊಲೀಸರು ಮತ್ತು ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ಧಾವಿಸಿದೆ.

2023ರ ಮೇ ತಿಂಗಳಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ನಡೆಯುತ್ತಿದೆ. ಈವರೆಗೂ ಸುಮಾರು 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೂ ಹಿಂಸಾಚಾರವನ್ನು ಸಂಪೂರ್ಣವಾಗಿ ಹತೋಟಿಗೆ ತರುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...