ಕೇಂದ್ರ ಬಜೆಟ್‌ 2026 | ಕರ್ನಾಟಕಕ್ಕೆ ಸಿಕ್ಕಿದ್ದು ಒಂದು ‘ಹೈಸ್ಪೀಡ್ ರೈಲು’ ಮಾತ್ರ!

Date:

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಅರ್ಥಿಕ ವರ್ಷದ 53.5 ಲಕ್ಷ ಕೋಟಿ ರೂ.ಗಳ ಬಜೆಟ್‌ಅನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ವಿವಿಧ ರಾಜ್ಯಗಳಿಗೆ ವಿಶೇಷ ಅನುದಾನಗಳನ್ನು ಘೋಷಿಸಿದ್ದಾರೆ. ಆದರೆ, ಕರ್ನಾಟಕಕ್ಕೆ ಯಥಾ ಪ್ರಕಾರ, ಯಾವುದೇ ವಿಶೇಷ ಯೋಜನೆ ಅಥವಾ ಅನುದಾನಗಳು ದೊರೆತಿಲ್ಲ. ಬದಲಾಗಿ, ದೇಶದಲ್ಲಿ ಜಾರಿಗೊಳಿಸಲು ರೂಪಿಸಲಾಗಿರುವ 6 ಹೈ-ಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯಡಿ ಕರ್ನಾಟಕಕ್ಕೂ ಯೋಜನೆ ಲಭ್ಯವಾಗಿದೆ.

“ಮುಂಬೈ-ಪುಣೆ, ಪುಣೆ-ಹೈದ್ರಾಬಾದ್, ದೆಹಲಿ-ವಾರಾಣಸಿ, ವಾರಾಣಸಿ-ಸಿಲಿಗುರಿ, ಚೆನ್ನೈ-ಬೆಂಗಳೂರು ಹೈ-ಸ್ಪೀಡ್ ರೈಲು ಕಾರಿಡಾರ್‌ ಯೋಜನೆಯನ್ನು ಜಾರಿಗೊಳಿಸಲಾಗುವುದು” ಎಂದು ವಿತ್ತ ಸಚಿವೆ ಘೋಷಿಸಿದ್ದಾರೆ. ಇದರಲ್ಲಿ, ಚೆನ್ನೈ-ಬೆಂಗಳೂರು ನಡುವಿನ ಹೈ-ಸ್ಪೀಡ್ ರೈಲು ಮಾತ್ರವೇ ರಾಜ್ಯಕ್ಕೆ ದೊರೆಯಲಿದೆ. ಉಳಿದಂತೆ, ಕರ್ನಾಟಕಕ್ಕೆ ಯಾವುದೇ ವಿಶೇಷ ಯೋಜನೆಗಳು ಅಥವಾ ಅನುದಾನವನ್ನು ಘೋಷಿಸಿಲ್ಲ.

ಆದಾಗ್ಯೂ, ದೇಶದ ಪ್ರತಿ ಜಿಲ್ಲೆಯಲ್ಲೂ ಒಂದೊಂದು ಬಾಲಕಿಯರ ಹಾಸ್ಟೆಲ್ ನಿರ್ಮಾಣ ಯೋಜನೆ,  ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ ಯೋಜನೆ, ಎಂಎಸ್‌ಎಂಇಗೆ ಪ್ರೋತ್ಸಾಹದಂತಹ ಕೆಲವು ಯೋಜನೆಗಳಿಂದ ಒಂದಷ್ಟು ಅನುದಾನ ಕರ್ನಾಟಕಕ್ಕೆ ದೊರೆಯುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...