1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ ಕೇಂದ್ರ ಬಜೆಟ್ ಅನ್ನು ಜುಲೈ 23ರಂದು ಮಂಡಿಸಲಿದ್ದಾರೆ. ಇದು ಪೂರ್ಣ ಬಜೆಟ್ ಆಗಿರಲಿದೆ. ಹಿಂದಿನ ಸರ್ಕಾರದಲ್ಲಿಯೂ ಕೇಂದ್ರ ವಿತ್ತ ಸಚಿವೆಯಾಗಿದ್ದ ನಿರ್ಮಲಾ ಈ ವರ್ಷದ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ಅನ್ನು ಮಂಡಿಸಿದ್ದರು.

ಕೇಂದ್ರ ಹಣಕಾಸು ಸಚಿವಾಲಯವು ಈಗಾಗಲೇ ಬಜೆಟ್ ತಯಾರಿಯನ್ನು ಪ್ರಾರಂಭಿಸಿದೆ. ಸಭೆಗಳನ್ನು ನಡೆಸುತ್ತಿದೆ. ಆದರೆ, ಇವೆಲ್ಲವೂ ಕೂಡಾ ಅತೀ ರಹಸ್ಯವಾಗಿ ನಡೆಯುವಂತಹ ಪ್ರಕ್ರಿಯೆಗಳಾಗಿದೆ. ಸದ್ಯಕ್ಕೆ, ಆಯ್ದ ಕೆಲವು ಜನರಿಗೆ ಮಾತ್ರ ಈ ಬಜೆಟ್ ಸಂಬಂಧಿತ ಮಾಹಿತಿ ಇರುತ್ತದೆ.

ಆದರೆ, ಕೇಂದ್ರ ಬಜೆಟ್ ಮುದ್ರಣ ಪ್ರಕ್ರಿಯೆಯಲ್ಲಿ ಇಷ್ಟೊಂದು ರಹಸ್ಯ ಯಾಕೆ ಎಂದು ನಿಮಗನಿಸಬಹುದು. ಇದಕ್ಕೆ ಮುಖ್ಯ ಕಾರಣವೂ ಇದೆ. ಆ ಕಾರಣವೇ ಹಲವು ವರ್ಷಗಳ ಹಿಂದೆ ಕೇಂದ್ರ ಬಜೆಟ್ ಸೋರಿಕೆಯಾಗಿರುವುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವತಂತ್ರ ಭಾರತದ ಮೊದಲ ಬಜೆಟ್ (1947-1948) ಅನ್ನು ಕೇಂದ್ರ ಹಣಕಾಸು ಸಚಿವ ಸರ್ ಆರ್ ಕೆ ಷಣ್ಮುಖಂ ಚೆಟ್ಟಿ ಮಂಡಿಸಿದರು. ಅದನ್ನು ಪ್ರಸ್ತುತಪಡಿಸುವ ಮೊದಲು, ಯುಕೆ ಚಾನ್ಸೆಲರ್ ಆಫ್ ಎಕ್ಸೆಕರ್ ಹಗ್ ಡಾಲ್ಟನ್ ಅವರು ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ತೆರಿಗೆಗಳಲ್ಲಿನ ಬದಲಾವಣೆಗಳ ಬಗ್ಗೆ ಪತ್ರಕರ್ತರಿಗೆ ತಿಳಿಸಿದ್ದರು.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ 2024 | ಗ್ರಾಮೀಣ ಭಾರತ, ಉದ್ಯೋಗದ ಮೇಲೆ ಕೇಂದ್ರೀಕರಿಸುವ ಸಾಧ್ಯತೆ: ಗೋಲ್ಡ್‌ಮನ್ ಸ್ಯಾಕ್ಸ್

ಸಂಸತ್ತಿನಲ್ಲಿ ಬಜೆಟ್ ಮಂಡನೆಗೂ ಮುನ್ನ ಈ ಮಾಹಿತಿಯನ್ನು ಪ್ರಕಟಿಸಲಾಗಿತ್ತು. ಇದು ರಾಜಕೀಯವಾಗಿ ಕೋಲಾಹಲ ಸೃಷ್ಟಿಸಿತ್ತು. ಕೊನೆಗೆ, ಡಾಲ್ಟನ್ ರಾಜೀನಾಮೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಆದರೆ, ಬಜೆಟ್ ಸೋರಿಕೆಯಾಗಿರುವುದು ಅದೊಂದೇ ಬಾರಿ ಅಲ್ಲ. 1950ರಲ್ಲಿಯೂ ಕೇಂದ್ರ ಬಜೆಟ್‌ನ ಒಂದು ಭಾಗ ಸೋರಿಕೆಯಾಗಿತ್ತು. ಬಜೆಟ್ ಕಾಗದಗಳ ಮುದ್ರಣದ ಸಮಯದಲ್ಲಿ ಬಜೆಟ್‌ನ ಅಂಶಗಳು ಸೋರಿಕೆಯಾಗಿದ್ದವು. ಪರಿಣಾಮ, ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ ಆಗಿನ ಹಣಕಾಸು ಸಚಿವ ಜಾನ್ ಮಥಾಯ್ ಅಧಿಕಾರದಿಂದ ಕೆಳಗಿಳಿಯಬೇಕಾಯಿತು.

ಆಗ ಬಜೆಟ್ ಕಾಗದಗಳ ಮುದ್ರಣವನ್ನು ರಾಷ್ಟ್ರಪತಿ ಭವನದಲ್ಲಿ ಮಾಡಲಾಗುತ್ತಿತ್ತು. ಬಜೆಟ್ ಸೋರಿಕೆಯಾದ ನಂತರ ಮುದ್ರಣ ಸ್ಥಳವನ್ನು ಮಿಂಟೋ ರಸ್ತೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು. ದೆಹಲಿಯ ನಾರ್ತ್ ಬ್ಲಾಕ್ ನೆಲಮಾಳಿಗೆಯಲ್ಲಿರುವ ಸೆಕ್ರೆಟರಿಯೇಟ್ ಕಟ್ಟಡವು 1980ರಿಂದ ಬಜೆಟ್ ಮುದ್ರಣಕ್ಕೆ ಶಾಶ್ವತ ಸ್ಥಳವಾಗಿದೆ.

347.5 ಕೋಟಿ ರೂಪಾಯಿ ಆದಾಯ ಮತ್ತು 337.88 ಕೋಟಿ ರೂಪಾಯಿ ವೆಚ್ಚವನ್ನು ಹೊಂದಿದ್ದ 1950ರ ಬಜೆಟ್ – ಆದಾಯ ಮತ್ತು ವೆಚ್ಚದ ನಡುವೆ ಆದಾಯ ಉಳಿತಾಯವಾಗಿದ್ದ (surplus) ಮೊದಲ ಬಜೆಟ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...