ಜಾತಿ ಗಣತಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಬೆಂಬಲ

Date:

ಜಾತಿ ಗಣತಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ, ತಮ್ಮ ಪಕ್ಷ ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾ ದೇಶದಲ್ಲಿ ಜಾತಿ ಗಣತಿ ನಡೆಸಲು ಬೆಂಬಲ ವ್ಯಕ್ತಪಡಿಸಲಿದ್ದು, ಇದಕ್ಕಾಗಿ ಯಾವುದಾದರೂ ದಾರಿಯನ್ನು ಹುಡುಕಬೇಕಿದೆ ಎಂದು ತಿಳಿಸಿದ್ದಾರೆ.

ಮಧ್ಯ ಪ್ರದೇಶದ ಇಂಧೋರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ”ಒಮ್ಮೆ ಜಾತಿ ಆಧಾರಿತ ಜನಗಣತಿ ಪೂರ್ಣಗೊಂಡರೆ ಯಾವುದಾದರೂ ದಾರಿ ಕಂಡುಕೊಳ್ಳಬಹುದಾದ ಕಾರಣ ಜನಸಂಖ್ಯೆಯಲ್ಲಿನ ಪ್ರತಿ ಜಾತಿಯು ಪಾಲನ್ನು ಪಡೆಯಬಹುದು ಎಂದು ನಮಗೆ ತಿಳಿಸಿದೆ. ಆದ ಕಾರಣ ನಮ್ಮ ಪಕ್ಷ ಜಾತಿ ಗಣತಿಗೆ ಬೆಂಬಲ ವ್ಯಕ್ತಪಡಿಸುತ್ತದೆ” ಎಂದು ತಿಳಿಸಿದರು.

“ಮುಂದಿನ ನಿರ್ಧಾರಗಳಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ಜನಸಂಖ್ಯೆಯಲ್ಲಿ ಪ್ರತಿಯೊಬ್ಬರು ಜಾತಿ ಆಧಾರಿತದ ಮೇಲೆ ಅನುಕೂಲಗಳನ್ನು ಪಡೆದುಕೊಳ್ಳುಬಹುದು. ಇದಕ್ಕೆ ನಮ್ಮ ಪಕ್ಷ ವಿರೋಧಿಸುವುದಿಲ್ಲ. ಬಡತನದಲ್ಲಿರುವ ಎಲ್ಲ ಜಾತಿಗಳು ಅನುಕೂಲ ಪಡೆಯಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಸಂವಿಧಾನದ 17ನೇ ವಿಧಿಯು ಜಾತಿ ಪದ್ಧತಿಯನ್ನು ನಿಷೇಧಿಸುವುದರಿಂದ ಜಾತಿ ಆಧಾರಿತ ಸಮೀಕ್ಷೆ ಕೈಗೊಳ್ಳಲು ಸರ್ಕಾರಗಳು ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ರಾಮದಾಸ್ ಅಠಾವಳೆ ಹೇಳಿದರು

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬಗ್ಗೆ ಮಾತನಾಡಿದ ಅಠಾವಳೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾತಿ ಗಣತಿಯನ್ನು ಏಕೆ ಕೈಗೊಳ್ಳಲಿಲ್ಲ ಎಂಬುದನ್ನು ನಾನು ರಾಹುಲ್‌ ಅವರಲ್ಲಿ ಕೇಳಬಯಸುತ್ತೇನೆ. ಮುಂದಿನ ಅಕ್ಟೋಬರ್‌ನಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 288 ಕ್ಷೇತ್ರಗಳ ಪೈಕಿ 170 ರಿಂದ 180 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.

ಎನ್‌ಇಟಿ ಪರೀಕ್ಷೆಯ ಅಕ್ರಮದ ಬಗ್ಗೆ ಮಾತನಾಡಿದ ರಾಮದಾಸ್ ಅಠಾವಳೆ, ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ಇರಬಾರದು. ಶಿಕ್ಷಣ ಇಲಾಖೆ ಭವಿಷ್ಯತ್ತಿನ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಯಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...