ಪ್ರಶ್ನೆಪತ್ರಿಕೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ‘ಉಗ್ರರು’ ಎಂದು ಉಲ್ಲೇಖಿಸಿ ವಿವಿ; ವ್ಯಾಪಕ ಆಕ್ರೋಶ

Date:

ಇತಿಹಾಸ ಪ್ರಶ್ನೆಪತ್ರಿಕೆಯಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಉಗ್ರರು ಎಂದು ಉಲ್ಲೇಖಿಸಿರುವ ಪಶ್ಚಿಮ ಬಂಗಾಳದ ಸರ್ಕಾರಿ ವಿದ್ಯಾಸಾಗರ್ ವಿಶ್ವವಿದ್ಯಾಲಯ ವ್ಯಾಪಕ ಆಕ್ರೋಶಕ್ಕೆ ಗುರಿಆಗಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಉಗ್ರರು ಎಂದಿರುವ ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜನರ ಆಕ್ರೋಶಕ್ಕೆ ತುತ್ತಾಗಿರುವ ವಿಶ್ವವಿದ್ಯಾಲಯವು ಕ್ಷಮೆಯಾಚಿಸಿದೆ.

ಸ್ನಾತಕೋತ್ತರ ಪದವಿಯ 6ನೇ ಸೆಮಿಸ್ಟರ್‌ನ ಇತಿಹಾಸ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ವಿಶ್ವವಿದ್ಯಾಲಯವು ಈ ಯಡವಟ್ಟು ಮಾಡಿದೆ. ಪ್ರಶ್ನೆಪತ್ರಿಕೆಯ 12ನೇ ಪ್ರಶ್ನೆಯು; ‘ಬ್ರಿಟಿಷ್ ಆಡಳಿತದ ಸಮಯದಲ್ಲಿ ಉಗ್ರರಿಂದ ಹತರಾದ ಮಿಡ್ನಾಪುರ್‌ನ ಮೂವರು ಜಿಲ್ಲಾಧಿಕಾರಿಗಳನ್ನು ಹೆಸರಿಸಿ’ ಎಂದು ಹೇಳಲಾಗಿದೆ. ಇಲ್ಲಿ ಸ್ವಾತಂತ್ರ್ಯ ಹೋರಾಗಾರರಿಂದ ಹತರಾದ ಎಂದು ಉಲ್ಲೇಖಿಸುವ ಬದಲು ಉಗ್ರರಿಂದ ಎಂದು ಬರೆಯಲಾಗಿದೆ.

ಇದು ಕಣ್ತಪ್ಪಿನಿಂದ ಆಗಿರುವ ಯಡವಟ್ಟೋ ಅಥವಾ ದುರುದ್ದೇಶಪೂರಿತ ಕೃತ್ಯವೋ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ತಪ್ಪನ್ನು ಒಪ್ಪಿಕೊಂಡಿರುವ ವಿಶ್ವವಿದ್ಯಾಲಯವು, ‘ಇದು ಕರಡು ಪ್ರತಿ ಪರಿಶೀಲನೆಯ ವೇಳೆ ಆಗಿರುವ ಲೋಪ’ ಎಂದು ಸ್ಪಷ್ಟೀಕರಣ ನೀಡಿದೆ.

“ಇದು ಮುದ್ರಣ ದೋಷವಾಗಿದೆ. ಕರಡು ಪ್ರತಿ ಪರಿಶೀಲನೆಯ ವೇಳೆ ಸರಿಯಾಗಿ ಗಮನಿಸದೆ ಇರುವುದರಿಂದ ಪ್ರಮಾದ ನಡೆದಿದೆ” ಎಂದು ಉಪ ಕುಲಪತಿ ದೀಪಕ್ ಕಾರ್ ಹೇಳಿದ್ದಾರೆ.

ವಿಶ್ವವಿದ್ಯಾಲಯದ ಪ್ರಮಾದವನ್ನು ಖಂಡಿಸಿರುವ ಶಿಕ್ಷಣ ತಜ್ಞ ಪಬಿತ್ರ ಸರ್ಕಾರ್, “ಬ್ರಿಟಿಷರ ದೌರ್ಜನ್ಯದ ವಿರುದ್ಧ ಹೋರಾಟ ನಡೆಸಿದ ಯುವಕರನ್ನು ಈ ಸ್ವತಂತ್ರ ಭಾರತದಲ್ಲಿಯೂ ‘ಉಗ್ರರು’ ಎಂದೇ ಉಲ್ಲೇಖಿಸುವುದು ಊಹಿಸಲೂ ಸಾಧ್ಯವಿಲ್ಲದ ಕೃತ್ಯ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...