ಯುಪಿ | 2018ರ ಗುಂಪು ಹಲ್ಲೆ ಪ್ರಕರಣ: 10 ಜನರಿಗೆ ಜೀವಾವಧಿ ಶಿಕ್ಷೆ

Date:

ಉತ್ತರ ಪ್ರದೇಶದ ಹಾಪುರ್‌ನ ಸ್ಥಳೀಯ ನ್ಯಾಯಾಲಯವು 2018ರ ಗುಂಪು ಹತ್ಯೆ ಪ್ರಕರಣದಲ್ಲಿ ಎಲ್ಲ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ (ಪೋಕ್ಸೊ) ಶ್ವೇತಾ ದೀಕ್ಷಿತ್ ಅವರು ಪ್ರಕರಣದ ವಿಚಾರಣೆ ನಡೆಸಿದ್ದಾರೆ. ಗೋಹತ್ಯೆ ಎಂಬ ಸುಳ್ಳು ವದಂತಿಯ ಮೇಲೆ 45 ವರ್ಷದ ಖಾಸಿಂನನ್ನು ಹತ್ಯೆಗೈದು, ಸಮಯದೀನ್ (62) ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ.

ಸರ್ಕಾರಿ ವಕೀಲ ವಿಜಯ್ ಚೌಹಾಣ್ ಅವರ ಪ್ರಕಾರ, ಧೌಲಾನಾದ ಬಜೈದಾ ಗ್ರಾಮದ ರಾಕೇಶ್, ಹರಿಓಮ್, ಯುಧಿಷ್ಠಿರ್, ರಿಂಕು, ಕರನ್‌ಪಾಲ್, ಮನೀಶ್, ಲಲಿತ್, ಸೋನು, ಕಪ್ತಾನ್ ಮತ್ತು ಮಂಗೇರಾಮ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ತಲಾ 58,000 ರೂ. ದಂಡವ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಕುಟುಂಬದ ಪರವಾಗಿ ವಾದಿಸಿದ ವಕೀಲರು, “ಸಂತ್ರಸ್ತ ಕುಟುಂಬವು ಆರೋಪಿಗಳ ವಿರುದ್ಧ ಯಾವುದೇ ದ್ವೇಷ ಹೊಂದಿಲ್ಲ. ಅವರು ನ್ಯಾಯವನ್ನು ಕೋರುತ್ತಾರೆ. ಅಪರಾಧಿಗಳಿಗೆ ಮರಣದಂಡನೆ ವಿಧಿಸುವುದು ಬೇಡ” ಎಂದು ನ್ಯಾಯಾಲಯವನ್ನು ಕೋರಿದ್ದರು.

2018ರ ಜೂನ್‌ನಲ್ಲಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಬಜೈದಾ ಗ್ರಾಮದ ನಿವಾಸಿ ಖಾಸಿಮ್ ಅವರನ್ನು ಗುಂಪೊಂದು ಹತ್ಯೆ ಮಾಡಿತ್ತು. ಅಲ್ಲದೆ, ಸಮಯದೀನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆಯನ್ನು ಬೈಕ್ ಅಪಘಾತವೆಂದು ತಿರುಚಿ ಪೊಲೀಸರು ಸುಳ್ಳು ಎಫ್‌ಐಆರ್ ದಾಖಲಿಸಿದ್ದರು. ಸಂತ್ರಸ್ತ ಸಮಯ್‌ದೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಳಿಕ, ಪ್ರಕರಣವನ್ನು ನ್ಯಾಯಯುತ ರೀತಿಯಲ್ಲಿ ತನಿಖೆ ನಡೆಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...