ಕಾವಡ್ ಯಾತ್ರೆ ವಿವಾದ: ತನ್ನ ಆದೇಶ ಸಮರ್ಥಿಸಿ ಸುಪ್ರೀಂಗೆ ವಿವರ ಸಲ್ಲಿಸಿದ ಉತ್ತರ ಪ್ರದೇಶ

Date:

ಕಾವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕೆಂಬ ತನ್ನ ನಿರ್ದೇಶನವನ್ನು ಪ್ರಶ್ನಿಸುವ ಅರ್ಜಿಗಳನ್ನು ಉತ್ತರ ಪ್ರದೇಶ ಸರ್ಕಾರ ವಿರೋಧಿಸಿದ್ದು, ತನ್ನ ಆದೇಶ ಸಮರ್ಥಿಸಿ ಸುಪ್ರೀಂ ಕೋರ್ಟ್‌ಗೆ ವಿವರವಾದ ಸಲ್ಲಿಕೆಯಲ್ಲಿ ತಿಳಿಸಿದೆ.

ಶಾಂತಿಯುತ ಮತ್ತು ವ್ಯವಸ್ಥಿತ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ದೇಶನ ನೀಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಅಂಗಡಿಗಳು ಮತ್ತು ತಿನಿಸುಗಳ ಹೆಸರುಗಳಿಂದ ಉಂಟಾದ ಗೊಂದಲದ ಬಗ್ಗೆ ಯಾರ್ಥಾರ್ಥಿಗಳಿಂದ ಬಂದ ದೂರುಗಳಿಗೆ ಪ್ರತಿಕ್ರಿಯೆಯಾಗಿ ಈ ನಿರ್ದೇಶನವನ್ನು ನೀಡಲಾಗಿದೆ ಎಂದು ರಾಜ್ಯ ಸರ್ಕಾರ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾತ್ರೆಯು ಪ್ರಯಾಸಕರ ಪ್ರಯಾಣವಾಗಿದೆ. ಅಲ್ಲಿ ಕೆಲವು ಕಾವಡಿಗಳು, ಅಂದರೆ ದಕ್ ಕಾವಡಿಯಾಗಳು, ಕಾವಡ್ ತಮ್ಮ ಹೆಗಲ ಮೇಲೆ ಒಮ್ಮೆ ವಿಶ್ರಾಂತಿ ಪಡೆಯಲು ಸಹ ನಿಲ್ಲುವುದಿಲ್ಲ. ತೀರ್ಥಯಾತ್ರೆಯಲ್ಲಿ ಪವಿತ್ರವಾದ ವೈಶಿಷ್ಟ್ಯಗಳಿವೆ. ಉದಾಹರಣೆಗೆ  ಪವಿತ್ರ ಗಂಗಾಜಲವನ್ನು ನೆಲದ ಮೇಲೆ ಅಥವಾ ಗುಲಾರ್ ಮರದ ನೆರಳಿನಲ್ಲಿ ಇಡಬಾರದು. ಕಾವಡಿ ಯಾತ್ರೆಯನ್ನು ವರ್ಷಗಳ ತಯಾರಿಯ ನಂತರ ಪ್ರಾರಂಭಿಸಲಾಗಿದೆ ಎಂಬುದನ್ನು ಇಲ್ಲಿ ಗಮನಿಸಬಹುದು” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಕಾವಡ್ ಯಾತ್ರೆ, ಕಾವಡಿಗಳು ಎಂದು ಕರೆಯಲ್ಪಡುವ ಶಿವನ ಭಕ್ತರು ಗಂಗಾ ನದಿಯಿಂದ ಪವಿತ್ರ ನೀರನ್ನು ತರಲು ಪ್ರಯಾಣಿಸುವ ವಾರ್ಷಿಕ ತೀರ್ಥಯಾತ್ರೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಭಾಗವಹಿಸುತ್ತಾರೆ.

ಕಾವಡಿಯಾಗಳ ನಿರ್ದಿಷ್ಟ ದೂರುಗಳಿಗೆ ಪ್ರತಿಕ್ರಿಯೆಯಾಗಿ ಈ ನಿರ್ದೇಶನವನ್ನು ಪರಿಚಯಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೊಂಡಿದೆ.

ಪ್ರತಿಪಕ್ಷಗಳು ಉತ್ತರ ಪ್ರದೇಶದ ನಿರ್ದೇಶನವನ್ನು ‘ಮುಸ್ಲಿಂ ವಿರೋಧಿ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಒಡಕುಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ ವಾಗ್ದಾಳಿ ನಡೆಸಿವೆ.

ಜುಲೈ 22 ರಂದು ‘ಸಾವನ್’ ನ ಮೊದಲ ಸೋಮವಾರದ ಸಂದರ್ಭದಲ್ಲಿ ರಾಷ್ಟ್ರದಾದ್ಯಂತ ಭಕ್ತರು ತಮ್ಮ ಕಾವಡ್‌ ಯಾತ್ರೆಯನ್ನು ಪ್ರಾರಂಭಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...