ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ ಪೂರ್ವಜರ ಆಸ್ತಿ ಹರಾಜು

Date:

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ‌ಪತ್‌ ಜಿಲ್ಲೆಯಲ್ಲಿ ಹೊಂದಿದ್ದ ಜಮೀನು ಹರಾಜಾಗಿದೆ. ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರೌತ್​ ಪಟ್ಟಣದಲ್ಲಿ ಹೊಂದಿರುವ ಆಸ್ತಿಯನ್ನು 1.38 ಕೋಟಿ ರೂ.ಗೆ ಹರಾಜು ಹಾಕಲಾಗಿದೆ.

ಬರೌತ್‌ನ ಕೊಟಾನಾ ಗ್ರಾಮದಲ್ಲಿ ಇರುವ ಸುಮಾರು 13 ಬಿಘಾ ಭೂಮಿ 1.38 ಕೋಟಿ ರೂ.ಗೆ ಮಾರಾಟವಾಗಿದೆ. ಈ ಭೂಮಿ ಮೊದಲು ಪರ್ವೇಜ್ ಮುಷರಫ್ ಅವರ ಸಹೋದರ ಡಾ. ಜಾವೇದ್ ಮುಷರಫ್ ಮತ್ತು ಅವರ ಕುಟುಂಬದ ಹೆಸರಿನಲ್ಲಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಆ ಭೂಮಿಯನ್ನು ಪಂಕಜ್ (ಗುತ್ತಿಗೆದಾರ), ಮನೋಜ್ ಗೋಯಲ್ (ಬರಾವುತ್ ನಿವಾಸಿ) ಮತ್ತು ಗಾಜಿಯಾಬಾದ್‌ನ ಜೆಕೆ ಸ್ಟೀಲ್ ಕಂಪನಿಗೆ ವರ್ಗಾಯಿಸಲಾಗಿದೆ. ಶನಿವಾರ, ಲಖನೌದಿಂದ ಬಂದ ಅಧಿಕಾರಿಗಳು ಉಪ ನೋಂದಣಿ ಕಚೇರಿಯಲ್ಲಿ ಮಾರಾಟ ಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಪರ್ವೇಜ್ ಮುಷರಫ್ ಅವರ ಕುಟುಂಬವು 1943 ರಲ್ಲಿ ಬರೌತ್‌ನ ಕೊಟಾನಾ ಗ್ರಾಮದಿಂದ ದೆಹಲಿಗೆ ಸ್ಥಳಾಂತರಗೊಂಡಿತು. ಕೆಲವು ವರ್ಷಗಳ ನಂತರ, 1947 ರಲ್ಲಿ ವಿಭಜನೆಯ ಸಮಯದಲ್ಲಿ, ಅವರು ಪಾಕಿಸ್ತಾನಕ್ಕೆ ಹೋಗಿ ನೆಲೆಸಿದರು. ಆದಾಗ್ಯೂ, ಅವರ ಮಹಲು ಮತ್ತು ಕೃಷಿ ಭೂಮಿ ಕೋಟಾದಲ್ಲಿಯೇ ಉಳಿದಿತ್ತು.

ಪಾಕ್‌ನ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್​ ಮುಷರಫ್ 2001 ರಿಂದ 2008ರವರೆಗೆ ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರಾಗಿದ್ದರು. 2023ರಲ್ಲಿ ಅವರು ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...