ಯುಪಿ | ಲೈಂಗಿಕ ಕೃತ್ಯಕ್ಕೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂದ ಕಾಮುಕ ಪ್ರೇಮಿ

Date:

ತನ್ನೊಂದಿಗೆ ಲೈಂಗಿಕ ಕೃತ್ಯದಲ್ಲಿ ತೊಡಗಲು ನಿರಾಕರಿಸಿದ ಕಾರಣಕ್ಕೆ ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ.

ಕೌಶಾಂಬಿ ಜಿಲ್ಲೆಯ ಸರಾಯಿ ಆಕಿಲ್ ಪ್ರದೇಶದ ಬರಾಯಿ ಗ್ರಾಮದ ಸಾವರಿ ದೇವಿ (60) ಮೃತ ಮಹಿಳೆ. ಆಕೆಯನ್ನು ಅದೇ ಗ್ರಾಮದ ದಿನೇಶ್ ಕುಮಾರ್ ಸೇನ್ (45) ಎಂಬಾತ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಸಾವರಿ ದೇವಿ ಮತ್ತು ದಿನೇಶ್ ಕುಮಾರ್ ಸೇನ್ ನಡುವೆ ಪ್ರೇಮ ಬೆಳೆದಿತ್ತು. ಇಬ್ಬರೂ ಪರಿಸ್ಪರರನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಮೇ 25ರಂದು ಸಾವರಿ ದೇವಿ ಅವರ ಮೃತದೇಹವು ನಗ್ನ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಆಕೆಯ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ಆರಂಭಿಸಿದ್ದರು. ಇದೀಗ, ಆರೋಪಿ ದಿನೇಶ್‌ ಸೇನ್‌ಅನ್ನು ಬಂಧಿಸಲಾಗಿದೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಕೌಶಂಬಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್, “ಕೃತ್ಯವನ್ನು ತಾನೇ ಎಸಗಿರುವುದಾಗಿ ಆರೋಪಿ ದಿನೇಶ್ ಕುಮಾರ್ ಸೇನ್ ಒಪ್ಪಿಕೊಂಡಿದ್ದಾನೆ. ಮೃತ ಮಹಿಳೆಯ ಪತಿ ವಿವಾಹವಾದ ಕೆಲವೇ ವರ್ಷಗಳಲ್ಲಿ ಆಕೆಯನ್ನು ತೊರೆದು ದೂರವಾಗಿದ್ದರು. ಆಕೆಗೆ ಮಕ್ಕಳು ಇರಲಿಲ್ಲ. ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಆರೋಪಿ ದಿನೇಶ್‌ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದನು. ದಿನಕಳೆದಂತೆ ಇಬ್ಬರ ನಡುವೆ ಪ್ರೇಮ ಮತ್ತು ದೈಹಿಕ ಸಂಬಂಧ ಬೆಳೆದಿತ್ತು” ಎಂದು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಹಂಚಿಕೊಂಡಿರುವ ದಿನೇಶ್, ‘ರಾತ್ರಿ ವೇಳೆ ನಾನು ಮತ್ತು ಸಾವರಿ ದೇವಿ ಫೋನ್‌ನಲ್ಲಿ ಮಾತನಾಡುತ್ತಿದ್ದೇವು. ಮೇ 23ರಂದು ಆಕೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ ನಂತರ, ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಆಕೆಯ ಮನೆಗೆ ಹೋಗಿ ಲೈಂಗಿಕ ಬಯಕೆಯನ್ನು ವ್ಯಕ್ತಪಡಿಸಿದ್ದೆ. ಆದರೆ, ನನ್ನ ಕೋರಿಯನ್ನು ಆಕೆ ನಿರಾಕರಿಸಿದರು. ಆಕೆಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾದೆ. ಈ ವೇಳೆ ಗಲಾಟೆ ನಡೆದು, ಆಕೆಯ ಗುತ್ತಿಗೆಗೆ ಬಟ್ಟೆ ಬಿಗಿದು, ಹತ್ಯೆ ಮಾಡಿದೆ’ನೆಂದು ಆರೋಪಿ ಒಪ್ಪಿಕೊಂಡಿದ್ಧಾನೆ” ಎಂದು ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜೈಲಿಗೆ ಕಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...