ಉತ್ತರ ಪ್ರದೇಶ | ವ್ಯಕ್ತಿಯೋರ್ವನ ಬ್ಯಾಂಕ್ ಖಾತೆಗೆ 9,900 ಕೋಟಿ ರೂ. ಜಮೆ; ಬೆರಗಾದ ಖಾತೆದಾರ

Date:

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಬರೋಬ್ಬರಿ 9,900 ಕೋಟಿ ರೂಪಾಯಿ ಜಮೆಯಾಗಿರುವ ಘಟನೆ ನಡೆದಿದೆ. ಸಾಫ್ಟ್‌ವೇರ್ ದೋಷದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಭಾನು ಪ್ರಕಾಶ್ ಎಂಬವರು ಬರೋಡಾ ಯುಪಿ ಬ್ಯಾಂಕ್‌ನಲ್ಲಿರುವ ತನ್ನ ಬ್ಯಾಂಕ್ ಖಾತೆಯ ಮೊತ್ತವನ್ನು ಪರಿಶೀಲಿಸಿದ್ದು, ಅವರ ಖಾತೆಗೆ ಬರೋಬ್ಬರಿ 99,99,94,95,999.99 ರೂಪಾಯಿ (9,900 ಕೋಟಿ ರೂಪಾಯಿ) ಜಮೆಯಾಗಿದೆ. ಇಷ್ಟು ಮೊತ್ತ ತನ್ನ ಬ್ಯಾಂಕ್ ಖಾತೆಯಲ್ಲಿ ಇರುವುದನ್ನು ನೋಡಿ ಬೆರಗಾಗಿದ್ದಾರೆ. ಕೂಡಲೇ ಬ್ಯಾಂಕ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ವಿಜಯಪುರ | ಅಂಗನವಾಡಿ ನೌಕರರ ಹೋರಾಟ; ಖಾತೆಗೆ ಜಮೆಯಾಯಿತು 2019ರ ಗೌರವ ಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನು ಪ್ರಕಾಶ್ ಅವರ ಖಾತೆಯು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸಾಲದ ಖಾತೆಯಾಗಿದ್ದು, ಬ್ಯಾಂಕ್ ಈ ಖಾತೆಯನ್ನು ಎನ್‌ಪಿಎ ಖಾತೆಯಾಗಿ ತಪ್ಪಾಗಿ ಮಾಡಿಕೊಂಡಿದೆ. ಸಾಫ್ಟ್‌ವೇರ್ ದೋಷದಿಂದಾಗಿ ಅವರ ಖಾತೆ ಹಣ ವರ್ಗಾವಣೆ ಆಗಿದೆ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.

“ಬ್ಯಾಂಕ್‌ನ ಸಾಫ್ಟ್‌ವೇರ್‌ನಲ್ಲಿನ ಗ್ಲಿಚ್‌ನಿಂದಾಗಿ ಇದು ನಡೆದಿದೆ. ಈ ಗ್ಲಿಚ್‌ನಿಂದಾಗಿ ಖಾತೆಯಲ್ಲಿ ಭಾರೀ ಪ್ರಮಾಣದ ಹಣ ಇದ್ದಂತೆ ಕಂಡಿದೆ” ಎಂದು ಬ್ಯಾಂಕಿನ ಶಾಖಾ ವ್ಯವಸ್ಥಾಪಕ ರೋಹಿತ್ ಗೌತಮ್ ಹೇಳಿದ್ದಾರೆ.

“ಖಾತೆಯನ್ನು ಎನ್‌ಪಿಎ ಸ್ಟೇಟಸ್‌ಗೆ ಲಿಂಕ್ ಮಾಡಿದ ಸಾಫ್ಟ್‌ವೇರ್ ದೋಷದಿಂದಾಗಿ ಬ್ಯಾಂಕ್ ಖಾತೆಯಲ್ಲಿ ಅಷ್ಟೊಂದು ಹಣ ಇದ್ದಂತೆ ಕಂಡು ಬಂದಿದೆ ಎಂದು ನಾವು ಭಾನು ಪ್ರಕಾಶ್ ಅವರಿಗೆ ತಿಳಿಸಿದ್ದೇವೆ. ಈ ತಪ್ಪನ್ನು ತಿದ್ದುಪಡಿ ಮಾಡಲು ಕ್ರಮವನ್ನು ಕೈಗೊಳ್ಳಲಾಗಿದೆ. ಹಣ ದುರುಪಯೋಗವಾಗದಂತೆ ನೋಡಿಕೊಳ್ಳಲು ಖಾತೆಯನ್ನು ಫ್ರೀಝ್ ಮಾಡಲಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...