ಉತ್ತರ ಪ್ರದೇಶ ವಿದ್ಯಾರ್ಥಿ ಕಪಾಳ ಮೋಕ್ಷ ಪ್ರಕರಣ: ತನಿಖೆಯ ಸ್ಥಿತಿಗತಿ ವರದಿ ಕೇಳಿದ ಸುಪ್ರೀಂ ಕೋರ್ಟ್

Date:

ಶಿಕ್ಷಕಿಯ ಸೂಚನೆ ಮೇರೆಗೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ಪ್ರಕರಣದ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಮುಜಾಫರ್‌ ನಗರ ಪೊಲೀಸ್ ವರಿಷ್ಠಾಧಿಕಾರಿಗೆ ಸುಪ್ರೀಂ ಕೋರ್ಟ್ ಬುಧವಾರ(ಸೆ.06) ಸೂಚಿಸಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರ ಪೀಠವು ವಿದ್ಯಾರ್ಥಿ ಮತ್ತು ಅವರ ಪೋಷಕರನ್ನು ರಕ್ಷಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಎಸ್ಪಿಗೆ ತಿಳಿಸಿದೆ. ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 25ರೊಳಗೆ ಉತ್ತರ ನೀಡುವಂತೆ ಸೂಚಿಸಿದೆ.

ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣದ ತ್ವರಿತ ತನಿಖೆಗೆ ಕೋರಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಮು ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಮುಜಾಫರ್‌ ನಗರ ಪೊಲೀಸರು ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ನೋಟಿಸ್ ಕೂಡ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಸತ್ಯದಿಂದ ಭಾರತದ ಕುಟುಂಬ ವ್ಯವಸ್ಥೆ ಉಳಿದಿದೆ ಎಂದ ಭಾಗವತ್: ಜಾತಿ ವ್ಯವಸ್ಥೆ, ಅಸಮಾನತೆ ಹೆಚ್ಚಿದೆ ಎಂದ ನೆಟ್ಟಿಗರು

ಮುಜಾಫರ್‌ ನಗರದ ಖುಬ್ಬಾಪುರ ಗ್ರಾಮದಲ್ಲಿ 2ನೇ ತರಗತಿಯ ಮುಸ್ಲಿಂ ಸಮುದಾಯದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳನ್ನು ಕೇಳುತ್ತಿದ್ದ ಹಾಗೂ ಕೋಮುವಾದಿ ಹೇಳಿಕೆ ನೀಡಿದ ವಿಡಿಯೋ ಬೆಳಕಿಗೆ ಬಂದ ಒಂದು ದಿನದ ನಂತರ ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಮುಜಾಫರ್ ನಗರದ ನೇಹಾ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕಿ ತೃಪ್ತಾ ತ್ಯಾಗಿ ಎಂಬವರು ಮುಸ್ಲಿಂ ಬಾಲಕನಿಗೆ ಹೊಡೆಯುವಂತೆ ಉಳಿದ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ. ಅದರಂತೆ ಉಳಿದ ವಿದ್ಯಾರ್ಥಿಗಳು ಒಬ್ಬೊಬ್ಬರಾಗಿಯೇ ಬಂದು ಮುಸ್ಲಿಂ ಬಾಲಕನಿಗೆ ಹೊಡೆದಿದ್ದಾರೆ.

ಮುಸ್ಲಿಂ ಬಾಲಕನಿಗೆ ಉಳಿದ ಸಹಪಾಠಿಗಳು ಹೊಡೆಯುತ್ತಿದ್ದರೆ ಈ ಶಿಕ್ಷಕಿ ಕೂತುಕೊಂಡು ನೋಡುತ್ತಿದ್ದರು. ಜೊತೆಗೆ ಕೋಮುದ್ವೇಷದ ಮಾತುಗಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಜೋರಾಗಿ ಹೊಡೆಯುವಂತೆ ಉತ್ತೇಜನ ನೀಡುತ್ತಿದ್ದರು. ಏ ನೀನು ಇವನಿಗೆ ಇಷ್ಟು ಮೆಲ್ಲಗೆ ಹೊಡೆಯುತ್ತಿದ್ದೀಯಾ? ಜೋರಾಗಿ ಹೊಡೆ ಎಂದು ಪ್ರೇರೇಪಿಸುತ್ತಿದ್ದುದು ವಿಡಿಯೋದಲ್ಲಿ ಕಂಡು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...