ಅಮೆರಿಕದಿಂದ ಗಡಿಪಾರು: 119 ಮಂದಿ ಭಾರತೀಯರನ್ನು ಹೊತ್ತ ಎರಡನೇ ವಿಮಾನ ಪಂಜಾಬ್‌ಗೆ ಆಗಮನ

Date:

119 ಮಂದಿ ಭಾರತೀಯರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಶನಿವಾರ(ಫೆ.16) ರಾತ್ರಿ ಪಂಜಾಬ್‌ನ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾದ ಭಾರತೀಯರ ಎರಡನೇ ತಂಡ ಇದಾಗಿದೆ.

ವಿಮಾನವು ಕಳೆದ ರಾತ್ರಿ 10 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಮೂಲಗಳು ತಿಳಿಸಿವೆ. ಗಡಿಪಾರು ಮಾಡಲಾದವರಲ್ಲಿ ಹೆಚ್ಚಿನವರು 18 ರಿಂದ 30 ವರ್ಷ ವಯಸ್ಸಿನ ಯುವಕ-ಯುವತಿಯರಾಗಿದ್ದಾರೆ.

ಗಡಿಪಾರು ಮಾಡಲಾದ 119 ಜನರಲ್ಲಿ 67 ಜನರು ಪಂಜಾಬ್‌ನವರು, 33 ಜನರು ಹರಿಯಾಣದವರು, ಎಂಟು ಜನರು ಗುಜರಾತ್‌ನವರು, ಮೂವರು ಉತ್ತರ ಪ್ರದೇಶದವರು, ಗೋವಾ, ಮಹಾರಾಷ್ಟ್ರ ಮತ್ತು ರಾಜಸ್ಥಾನದಿಂದ ತಲಾ ಇಬ್ಬರು, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ತಲಾ ಒಬ್ಬರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಗುರುದಾಸಪುರದ ಒಂದು ಕುಟುಂಬವು ತಮ್ಮ ಮಗ ಗುರ್ಮೀಲ್ ಸಿಂಗ್‌ಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿತ್ತು. ಗುರ್ಮೀಲ್ ಸಿಂಗ್ ಎರಡು ವರ್ಷಗಳ ಹಿಂದೆ ಭಾರತವನ್ನು ತೊರೆದು ಈ ವರ್ಷ ಜನವರಿ 30 ರಂದು ಅಮೆರಿಕಕ್ಕೆ ತೆರಳಿದ್ದರು. ಆತನ ತಂದೆ ಮತ್ತು ಸೋದರಸಂಬಂಧಿ ಟ್ರಾವೆಲ್ ಏಜೆಂಟ್‌ಗೆ 50 ಲಕ್ಷ ರೂಪಾಯಿಗಳ ಒಪ್ಪಂದದ ಮೇರೆಗೆ 36 ಲಕ್ಷ ರೂಪಾಯಿಗಳನ್ನು ಪಾವತಿಸಿ ಕಳುಹಿಸಿದ್ದರು.

ಫೆಬ್ರವರಿ 5 ರಂದು, ಸುಮಾರು 40 ಗಂಟೆಗಳ ಪ್ರಯಾಣದ ನಂತರ 104 ಭಾರತೀಯ ಗಡಿಪಾರುಗಾರರ ಮೊದಲ ತಂಡ ಅಮೃತಸರಕ್ಕೆ ಆಗಮಿಸಿತು. ಈ ಸಮಯದಲ್ಲಿ ಅವರ ಕೈಗಳಿಗೆ ಕೋಳ ಹಾಕಿ ಮತ್ತು ಅವರ ಕಾಲುಗಳಿಗೆ ಸರಪಳಿಗಳಿಂದ ಬಂಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...