ಭಾರತ- ಪಾಕ್ ಸಂಘರ್ಷ ಉಲ್ಬಣ: ಶಮನಕ್ಕೆ ಅಮೆರಿಕ ಪ್ರಯತ್ನ

Date:

ಕಾಶ್ಮೀರದ ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷ ಉಲ್ಬಣಿಸಿದ್ದು, ಇದನ್ನು ಶಮನಗೊಳಿಸುವ ಪ್ರಯತ್ನವನ್ನು ಅಮೆರಿಕ ಆರಂಭಿಸಿದೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಪಾಕಿಸ್ತಾನದ ಪ್ರಧಾನಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಎರಡೂ ದೇಶಗಳ ನಾಯಕರು ತಮ್ಮ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕೆಲಸ ಮಾಡುವಂತೆ ರೂಬಿಯೊ ಕೇಳಿಕೊಂಡರು ಎನ್ನಲಾಗಿದೆ. ಆದರೆ ಭಯೋತ್ಪಾದನೆ ವಿರುದ್ಧದ ಭಾರತೀಯ ಹೋರಾಟಕ್ಕೆ ಸಹಕಾರ ನೀಡಲು ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಪಹಲ್ಗಾಮ್ ಭಯಾನಕ ಉಗ್ರ ಕೃತ್ಯದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಅವರು, ಸಂಘರ್ಷ ಶಮನಕ್ಕೆ ಪಾಕಿಸ್ತಾನದ ಜತೆಗೂಡಿ ಪ್ರಯತ್ನ ನಡೆಸುವಂತೆಯೂ ಭಾರತಕ್ಕೆ ಸಲಹೆ ಮಾಡಿದ್ದಾರೆ.ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸುಭದ್ರತೆ ಕಾಪಾಡಲು ನೆರವಾಗುವಂತೆ ರುಬಿಯೊ ಕೋರಿದ್ದಾಗಿ ರಕ್ಷಣಾ ಇಲಾಖೆ ವಕ್ತಾರ ಟಾಮಿ ಬ್ರೂಸ್ ಹೇಳಿಕೆ ನೀಡಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರು ಬರ್ಬರ ಕೃತ್ಯ ಎಸಗಿದ ಬಳಿಕ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಯುದ್ಧಪರಿಸ್ಥಿತಿ ತಲೆದೋರಿದೆ.

ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆಪಾದಿಸಿ, ಸಿಂಧೂ ಜಲ ಒಪ್ಪಂದ ರದ್ದು ಮತ್ತು ಅಟ್ಟಾರಿ ಗಡಿ ಬಂದ್ ಸೇರಿದಂತೆ ಪಾಕಿಸ್ತಾನ ವಿರುದ್ಧ ಹಲವು ಕ್ರಮಗಳನ್ನು ಭಾರತ ಈಗಾಗಲೇ ಕೈಗೊಂಡಿದೆ. ಈ ದಾಳಿಯ ಬಗೆಗಿನ ತನಿಖೆಯಲ್ಲಿ ಸಹಕರಿಸುವಂತೆಯೂ ರುಬಿಯೊ ಪಾಕಿಸ್ತಾನದ ಪ್ರಧಾನಿ ಸೆಹಬಾಝ್ ಷರೀಫ್ ಅವರನ್ನು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...