ಉತ್ತರಾಖಂಡ | ಪುರೋಲ ಪಟ್ಟಣ ತೊರೆಯುತ್ತಿರುವ ಮುಸ್ಲಿಮ್‌ ವರ್ತಕರು

Date:

ಹಿಂದೂ ಬಾಲಕಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ್ದಾರೆಂಬ ಶಂಕೆಯ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪುರೋಲ ಪಟ್ಟಣವನ್ನು ಮುಸ್ಲಿಮ್‌ ವ್ಯಾಪಾರಸ್ಥರು ತೊರೆಯುತ್ತಿದ್ದಾರೆ.  

ಉತ್ತರಕಾಶಿ ಪಟ್ಟಣದ ಪುರೋಲ ಮುಖ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಮುಸ್ಲಿಮ್‌ ವರ್ತಕರ ಅಂಗಡಿಗಳು ಮತ್ತು ಮನೆಗಳ ಮೇಲೆ ಬಲಪಂಥೀಯ ಸಂಘಟನೆಗಳ ಸದಸ್ಯರು ದಾಳಿ ಮಾಡಿ ಧ್ವಂಸಗೊಳಿಸಿದ್ದರು. ಬಳಿಕ ‘ಜೂನ್‌ 15ರ  ಮಹಪಂಚಾಯತ್‌ʼಗೆ ಮುನ್ನ ಅಂಗಡಿಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಪರಿಣಾಮವನ್ನು ಎದುರಿಸಲು ಸಿದ್ಧರಾಗಿʼ ಎಂದು ಬರೆಯಲಾಗಿರುವ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು.

ಮೇ 26ರಿಂದ ಪುರೋಲದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಳೆದ 18 ದಿನಗಳಿಂದ ಶೇ.35 ರಿಂದ 40ರಷ್ಟಿರುವ ಮುಸ್ಲಿಂ ವರ್ತಕರಿಗೆ ತಮ್ಮ ಅಂಗಡಿಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಸ್ಥಿತಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಮುಸ್ಲಿಂ ವ್ಯಾಪಾರಸ್ಥರು ಈಗಾಗಲೇ ಪಟ್ಟಣವನ್ನು ತೊರೆದಿದ್ದಾರೆ. ಮತ್ತಷ್ಟು ವ್ಯಾಪಾರಿಗಳು ಇದೇ ಹಾದಿಯನ್ನು ಅನುಸರಿಸಲು ನಿರ್ಧರಿಸಿದ್ದಾರೆ.

ʻಹೊರಗಿನವರಿಂದ ಸಮಸ್ಯೆʼ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಬಿಜೆಪಿ ಮುಖಂಡ  ಅಭಿಷೇಕ್ ಸೆಮ್ವಾಲ್, ʻದಶಕಗಳಿಂದಲೂ ಹಲವಾರು ಮುಸ್ಲಿಂ ಕುಟುಂಬಗಳು ಈ ಪ್ರದೇಶದಲ್ಲಿ ವಾಸಿಸುತ್ತಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಹೊರಗಿನವರು ಬಂದು ಇಲ್ಲಿ ಅಂಗಡಿಗಳನ್ನು ತೆರೆಯಲು ಪ್ರಾರಂಭಿಸಿದ ಬಳಿಕ ಸಮಸ್ಯೆಗಳು ಪ್ರಾರಂಭವಾಗಿದೆʼ ಎಂದು ಪ್ರತಿಕ್ರಿಯಿಸಿದ್ದಾರೆ.

Utrakshi

ಆಗಿದ್ದೇನು?

ಮೇ 26 ರಂದು ಅಪ್ರಾಪ್ತ ಬಾಲಕಿಯೊಂದಿಗೆ ಇಬ್ಬರು ಪುರುಷರು ಮಾತನಾಡುವುದನ್ನು ಗಮನಿಸಿದ ಸ್ಥಳೀಯರು, ಹಿಂದೂ ಹುಡುಗಿಯ ಅಪಹರಣಕ್ಕೆ ಅನ್ಯಧರ್ಮದವರು ಯತ್ನಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.   

ಆದರೆ ಘಟನೆ ನಡೆದ ಮರುದಿನವೇ (ಮೇ 27ರಂದು) ಅಪ್ರಾಪ್ತ ಬಾಲಕಿಯ ಜೊತೆಗಿದ್ದ ಇಬ್ಬರು ಆರೋಪಿಗಳಾದ ಸ್ಥಳೀಯ ವರ್ತಕ ಉಬೇದ್‌ ಖಾನ್‌ (24) ಮತ್ತು ಮೊಟಾರ್‌ ಸೈಕಲ್‌ ಮೆಕ್ಯಾನಿಕ್‌ ಜಿತೇಂದರ್‌ ಸೈನಿ (23) ಅವರನ್ನು ಪೊಲೀಸರು ಬಂಧಿಸಿದ್ದರು. ಇವರ ವಿರುದ್ಧ ಐಪಿಸಿ ಕಾಯ್ದೆ 363 (ಅಪಹರಣ) ಮತ್ತು 366 ಎ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದು ಯಾವುದೇ ‘ಲವ್‌ ಜಿಹಾದ್‌’ ಪ್ರಕರಣ ಅಲ್ಲ ಎಂದು ಪೊಲೀಸರೇ ಹೇಳಿಕೆ ನೀಡಿದ್ದಾರೆ.

ಪುರೋಲ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ದೇವಾನಂದ್ ಶರ್ಮಾ ಅವರು, ಸ್ಥಳೀಯರು, ಸಾರ್ವಜನಿಕ ಪ್ರತಿನಿಧಿಗಳು, ಸಮಾಜದ ಮುಖಂಡರು ಮತ್ತು ಮುಸ್ಲಿಂ ಸಮುದಾಯದ ವ್ಯಾಪಾರಿಗಳ ಜೊತೆ ಶಾಂತಿ ಸಮಿತಿ ಸಭೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...